Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಯೋಜನೆಗಳ ಪರಿಣಾಮಕಾರಿ...

Kalaburagi | ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಿಖರ ಅಂಕಿ-ಅಂಶ ಅಗತ್ಯ: ರಾಹುಲ್ ಸಂಕನೂರ

ವಾರ್ತಾಭಾರತಿವಾರ್ತಾಭಾರತಿ18 July 2026 11:19 PM IST
share
Kalaburagi | ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಿಖರ ಅಂಕಿ-ಅಂಶ ಅಗತ್ಯ: ರಾಹುಲ್ ಸಂಕನೂರ

ಕಲಬುರಗಿ : ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಒದಗಿಸಲು ತಳಮಟ್ಟದ ನಿಖರ ಅಂಕಿ-ಅಂಶಗಳ ವರದಿಗಳು ಅತ್ಯಂತ ಸಹಕಾರಿಯಾಗಲಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಂಕನೂರ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಹೊಸ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ–2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ–2031 ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಅಧಿಕಾರಿಗಳು ಲಭ್ಯವಿರುವ ಅಂಕಿ-ಅಂಶಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿ ಮುಂದಿನ ಅಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು ಎಂದು ಸೂಚಿಸಿದರು.

ಶಾಲೆಯಿಂದ ಹೊರಗುಳಿದ ಮಕ್ಕಳು, ಕುಡಿಯುವ ನೀರಿನ ಸಮಸ್ಯೆ, ಶಿಶು ಮತ್ತು ತಾಯಂದಿರ ಮರಣ ಪ್ರಮಾಣ ಸೇರಿದಂತೆ ವಿವಿಧ ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಈ ವರದಿ ಮಾರ್ಗದರ್ಶಿಯಾಗಲಿದೆ. ಪ್ರಗತಿ ಕುಂಠಿತಗೊಂಡಿರುವ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿಗೆ ಇದು ಆಧಾರವಾಗಲಿದ್ದು, ತಾಲೂಕು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರೂಪಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.

ತಾಂತ್ರಿಕ ಬೆಂಬಲ ಸಂಸ್ಥೆಯ ಸಂಯೋಜಕಿ ಹಾಗೂ ರಾಜ್ಯ ಮಟ್ಟದ ತಾಂತ್ರಿಕ ಸಮಿತಿ ಸದಸ್ಯೆ ಡಾ. ಛಾಯಾ ದೇಗಾಂವಕರ್ ಮಾತನಾಡಿ, 2030ರ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಉದ್ದೇಶದಿಂದ 5ನೇ ಮಾನವ ಅಭಿವೃದ್ಧಿ ವರದಿಯನ್ನು ಅಂತಿಮಗೊಳಿಸಲಾಗುತ್ತಿದೆ. ಈ ವರದಿಯನ್ನು ಗ್ರಾಮ ಪಂಚಾಯತ್ ಮಟ್ಟದ ಯೋಜನೆಗಳಿಗೂ ಅನ್ವಯಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೆ ತಂದಿರುವ ಪಂಚಾಯತ್ ಮಟ್ಟದ ಸುಸ್ಥಿರ ಸೂಚ್ಯಂಕದ ಪ್ರಕಾರ, ಗುಣಮಟ್ಟದ ಶಿಕ್ಷಣ ವಿಭಾಗದಲ್ಲಿ ಕಲಬುರಗಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿರುವುದು ಐತಿಹಾಸಿಕ ಸಾಧನೆಯಾಗಿದೆ ಎಂದು ಅವರು ಹೇಳಿದರು.

ಈ ವರದಿಯಲ್ಲಿ ತಲಾ ಆದಾಯ ಮಾತ್ರವಲ್ಲದೆ ಶಿಕ್ಷಣ, ಆರೋಗ್ಯ ಹಾಗೂ ಜೀವನಮಟ್ಟ ಸೇರಿದಂತೆ ವಿವಿಧ ಮಾನವ ಅಭಿವೃದ್ಧಿ ಸೂಚ್ಯಂಕಗಳನ್ನು ಪರಿಗಣಿಸಲಾಗಿದೆ. ಹೆಣ್ಣುಮಕ್ಕಳ ಶಾಲಾ ಡ್ರಾಪ್‌ಔಟ್ ತಡೆ, ತಾಯಿ-ಮಕ್ಕಳ ಮರಣ ಪ್ರಮಾಣ ಕಡಿತ ಹಾಗೂ ಸ್ವಯಂ ಉದ್ಯೋಗದ ಮೂಲಕ ಆದಾಯ ಹೆಚ್ಚಳಕ್ಕೆ ಆದ್ಯತೆ ನೀಡಲಾಗಿದೆ. ಪರಿಸರ ಅಸಮತೋಲನದಿಂದ ಉಂಟಾಗುವ ಸವಾಲುಗಳನ್ನು ಎದುರಿಸಲು 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಅಳವಡಿಸಿಕೊಂಡಿದ್ದು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವರದಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧ್ಯಕ್ಷತೆಯಲ್ಲಿ ನಡೆದ‌ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಧುಮತಿ, ಯೋಜನಾ ನಿರ್ದೇಶಕ ಜಗದೇವಪ್ಪ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X