ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಪ್ರಕರಣ ದಾಖಲು

ಮಣಿಕಂಠ ರಾಠೋಡ್
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸಿರುವ ಆರೋಪದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಕಂಠ ರಾಠೋಡ್ ಅವರು ಮೇ 25ರಂದು ಸಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪೊಲೀಸ್ ಅಧಿಕಾರಿಗಳನ್ನು ಸೇರಿದಂತೆ ಕಾಂಗ್ರೆಸ್ ಮುಖಂಡ ಲಚಪ್ಪ ಜಮಾದಾರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಸಮಾಜದಲ್ಲಿ ಅಶಾಂತಿ ಮೂಡಿಸುವ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತ ಹಣಮಂತ ಸಂಕನೂರು ದೂರು ನೀಡಿದ್ದರು.
ದೂರಿನ ಆಧಾರದ ಮೇರೆಗೆ ಪೊಲೀಸರು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಸೋಮವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
Next Story





