Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಮರ್ಜಾ ಡ್ಯಾಂಗೆ ನೀರು...

ಕಲಬುರಗಿ | ಅಮರ್ಜಾ ಡ್ಯಾಂಗೆ ನೀರು ತುಂಬಿಸುವ ಯೋಜನೆಗೆ ಅಡ್ಡಿ ಆರೋಪ; ರೈತರಿಂದ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ28 Aug 2026 6:57 PM IST
share
ಕಲಬುರಗಿ | ಅಮರ್ಜಾ ಡ್ಯಾಂಗೆ ನೀರು ತುಂಬಿಸುವ ಯೋಜನೆಗೆ ಅಡ್ಡಿ ಆರೋಪ; ರೈತರಿಂದ ಪಾದಯಾತ್ರೆ

ಆಳಂದ: ಬೋರಿ ನದಿಯಿಂದ ಅಮರ್ಜಾ ಡ್ಯಾಂಗೆ ನೀರು ತುಂಬಿಸುವ ಪೈಪ್‌ಲೈನ್‌ ಅನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಫಜಲಪುರ ತಾಲೂಕಿನ ಅರ್ಜುಣಗಿ ಬಳಿ ಕಡಿತಗೊಳಿಸಿರುವುದನ್ನು ವಿರೋಧಿಸಿ ಕೆಎಂಎಫ್ ಅಧ್ಯಕ್ಷ ಆರ್.ಕೆ. ಪಾಟೀಲ್‌ ಅವರ ನೇತೃತ್ವದಲ್ಲಿ ಸಾವಿರಾರು ರೈತರು ಗುರುವಾರ ಪಾದಯಾತ್ರೆ ನಡೆಸಿದರು.

ತಾಲೂಕಿನ ಹಡಲಗಿ ಗ್ರಾಮದ ಶ್ರೀ ಯಲ್ಲಮ್ಮ ದೇವಿ ದೇವಸ್ಥಾನದಿಂದ ಅರ್ಜುಣಗಿ ರಾಷ್ಟ್ರೀಯ ಹೆದ್ದಾರಿವರೆಗೆ ಪಾದಯಾತ್ರೆ ನಡೆಯಿತು. ಬೋರಿ ನದಿಯಿಂದ ಅಮರ್ಜಾ ಡ್ಯಾಂಗೆ ನೀರು ತುಂಬಿಸುವ ಕಾಮಗಾರಿ ಪೂರ್ಣಗೊಂಡು ಪ್ರಗತಿಯಲ್ಲಿರುವ ಹಂತದಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಯಾವುದೇ ಮಾಹಿತಿ ನೀಡದೆ ಪೈಪ್‌ಲೈನ್‌ ಕಡಿತಗೊಳಿಸಿದ್ದಾರೆ ಎಂದು ಆರೋಪಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಪಾದಯಾತ್ರೆ ವೇಳೆ ಮಾತನಾಡಿದ ಆರ್.ಕೆ. ಪಾಟೀಲ, ಪೈಪ್‌ಲೈನ್‌ ಕಡಿತಗೊಳಿಸಿರುವುದನ್ನು ಸರಿಪಡಿಸುವಂತೆ ಶಾಸಕ ಬಿ.ಆರ್. ಪಾಟೀಲ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಾಲ್ಕು ಬಾರಿ ಪತ್ರ ಬರೆದಿದ್ದರೂ ಅಧಿಕಾರಿಗಳು ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ಈ ಯೋಜನೆಯಿಂದ ಅಫಜಲಪುರ ತಾಲೂಕಿನ 10 ಕೆರೆಗಳಿಗೆ ನೀರು ಒದಗಿಸಲು ಸಾಧ್ಯವಾಗಲಿದ್ದು, ಇದು ರೈತರ ಪಾಲಿಗೆ ಮಹತ್ವದ ಯೋಜನೆಯಾಗಿದೆ. ಹೀಗಾಗಿ ಪೈಪ್‌ಲೈನ್‌ ಕಡಿತಗೊಳಿಸಿರುವುದನ್ನು ತಕ್ಷಣ ಸರಿಪಡಿಸಿ ಕಾಮಗಾರಿ ಮುಂದುವರಿಸಬೇಕು. ಈ ನಿಟ್ಟಿನಲ್ಲಿ ರೈತರು ಹೋರಾಟಕ್ಕೆ ಸಹಕಾರ ಹಾಗೂ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.

ಪಾದಯಾತ್ರೆಯಲ್ಲಿ ಅಶೋಕ ಸವಳೇಶ್ವರ, ಗುರುಶಾಂತಪ್ಪ ಪಾಟೀಲ, ಶರಣಬಸಪ್ಪ ಭೋಸನೂರ, ಈರಣ್ಣ ಝಳಕಿ, ರೇವಣಸಿದ್ದಪ್ಪ ನಾಗೂರ, ಆದಿನಾಥ ಹೀರಾ, ಸಿದ್ದರಾಮ ಪ್ಯಾಟಿ, ಬಾಬು ಗೊಬ್ಬುರ, ವೀರೇಂದ್ರ ಶೇಗಜಿ, ಆಸಿಫ್ ಮುಲ್ಲಾ ಯಳಸಂಗಿ, ಶ್ರೀಮಂತ ವಾಗದರ್ಗಿ, ಬಸವರಾಜ ಆಳಂದ, ಈರಣ್ಣ ಹತ್ತರಕಿ, ಲಿಂಗರಾಜ ಪಾಟೀಲ, ರೇವಣಪ್ಪ ನಾಗೂರೆ, ಆಲೂಗೌಡ ಪಾಟೀಲ, ಶಿವಕಿರಣ ಪಾಟೀಲ ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು.

ಪಾದಯಾತ್ರೆ ಹಿನ್ನೆಲೆಯಲ್ಲಿ ನಿಂಬರ್ಗಾ ಹಾಗೂ ಮಾದನ ಹಿಪ್ಪರಗಾ ಪೊಲೀಸ್ ಠಾಣೆಗಳ ವತಿಯಿಂದ ಇಂದೂಮತಿ ಹಾಗೂ ಮಹಾಂತೇಶ ಪಾಟೀಲ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

Tags

Kalaburagiwaterfarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X