Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಉದ್ಯೋಗ ಕೌಶಲ್ಯ...

Kalaburagi | ಉದ್ಯೋಗ ಕೌಶಲ್ಯ ತರಬೇತಿಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿ : ಡಿಸಿ ಇಕ್ರಮ್‌ ಶರೀಫ್

ಜಿಲ್ಲಾ ಕೌಶಲ್ಯ ಸಮಿತಿ ಸಭೆ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ18 Nov 2026 8:37 PM IST
share
Kalaburagi | ಉದ್ಯೋಗ ಕೌಶಲ್ಯ ತರಬೇತಿಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿ : ಡಿಸಿ ಇಕ್ರಮ್‌ ಶರೀಫ್

ಕಲಬುರಗಿ : ಉದ್ಯಮಗಳ ಬೇಡಿಕೆಗೆ ಅನುಗುಣವಾಗಿ ಯುವಕ-ಯುವತಿಯರಿಗೆ ಉದ್ಯೋಗ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಬೇಕು. ಕೌಶಲ್ಯ ಕರ್ನಾಟಕ ಸೇರಿದಂತೆ ವಿವಿಧ ಮಹತ್ವಾಕಾಂಕ್ಷಿ ಯೋಜನೆಗಳು ಹಾಗೂ ತರಬೇತಿ ಕಾರ್ಯಕ್ರಮಗಳಲ್ಲಿ ನಿಗದಿತ ಗುರಿಯಂತೆ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕೈಗಾರಿಕಾ ವಲಯಗಳೊಂದಿಗೆ ಸಮನ್ವಯ ಸಾಧಿಸುವುದು ಅತ್ಯಗತ್ಯ. ಕೆಲವು ಕೈಗಾರಿಕೆಗಳು ಮತ್ತು ಸಂಸ್ಥೆಗಳು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳಿವೆ. ಅಂತಹ ಸಂಸ್ಥೆಗಳೊಂದಿಗೆ ಅಧಿಕಾರಿಗಳು ನೇರವಾಗಿ ಸಭೆ ನಡೆಸಿ, ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗ ಹಾಗೂ ಅಪ್ರೆಂಟಿಸ್‌ಶಿಪ್ ಅವಕಾಶಗಳನ್ನು ಕಲ್ಪಿಸುವ ಜವಾಬ್ದಾರಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶಗಳ ನಿರುದ್ಯೋಗಿ ಯುವಕ-ಯುವತಿಯರಿಗೆ ಸೂಕ್ತ ಉದ್ಯೋಗ ತರಬೇತಿ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಕೈಗಾರಿಕೆ, ತರಬೇತಿ ಹಾಗೂ ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರನಾಥ ಬಾಳ್ಳಿ, ಉಪನಿರ್ದೇಶಕಿ ಡಾ. ರುಬೀನಾ ಪರ್ವೀನ್, ಸಹಾಯಕ ನಿರ್ದೇಶಕ ಟಿ.ಕೆ. ಯರಗಲ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗೂಬಾಯಿ ಸೂರ್ಯವಂಶಿ, ಡಿಡಿಪಿಐ ಚೆನ್ನಬಸಪ್ಪ ಮುಧೋಳ, ಕೆಕೆಸಿಸಿಐ ಅಧ್ಯಕ್ಷ ಶರಣಪ್ಪ ಪಪ್ಪಾ, ಕಾರ್ಯದರ್ಶಿ ಶಿವರಾಜ ಇಂಗಿನಶೆಟ್ಟಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕಿ ಭಾರತಿ ಎಸ್.ಎಸ್. ಸೇರಿದಂತೆ ಸರ್ಕಾರಿ ಐಟಿಐ ಮತ್ತು ಜಿಟಿಟಿಸಿ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

KalaburagitrainingIkram Shariff
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X