Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸುಸ್ಥಿರ ವಸತಿ...

Kalaburagi | ಸುಸ್ಥಿರ ವಸತಿ ನಿರ್ಮಾಣಕ್ಕೆ ಪರಿಸರಸ್ನೇಹಿ ತಂತ್ರಜ್ಞಾನ ಅಳವಡಿಕೆ ಅಗತ್ಯ: ಪ್ರೊ.ಬಟ್ಟು ಸತ್ಯನಾರಾಯಣ

ಸಿಯುಕೆಯಲ್ಲಿ ವಿಶ್ವ ಆವಾಸ ದಿನ-2026 ಕಾರ್ಯಕ್ರಮ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ18 Nov 2026 7:43 PM IST
share
Kalaburagi | ಸುಸ್ಥಿರ ವಸತಿ ನಿರ್ಮಾಣಕ್ಕೆ ಪರಿಸರಸ್ನೇಹಿ ತಂತ್ರಜ್ಞಾನ ಅಳವಡಿಕೆ ಅಗತ್ಯ: ಪ್ರೊ.ಬಟ್ಟು ಸತ್ಯನಾರಾಯಣ

ಕಲಬುರಗಿ : ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ನಗರೀಕರಣದ ಹಿನ್ನೆಲೆಯಲ್ಲಿ ಸಮರ್ಪಕ ವಸತಿ ಕಲ್ಪಿಸುವುದು ಜಾಗತಿಕ ಸವಾಲಾಗಿದೆ. ಈ ಸವಾಲನ್ನು ಎದುರಿಸಲು ಪರಿಸರಸ್ನೇಹಿ ನಿರ್ಮಾಣ ತಂತ್ರಜ್ಞಾನ, ನಿರ್ಮಾಣ ಸಾಮಗ್ರಿಗಳ ಮರುಬಳಕೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಮರ್ಪಕ ಬಳಕೆಗೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ಇನ್‌ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್ (ಇಂಡಿಯಾ), ಕಲಬುರಗಿ ಕೇಂದ್ರದ ಸಹಯೋಗದಲ್ಲಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಆವಾಸ ದಿನ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮರಳು, ಕಲ್ಲು ಸೇರಿದಂತೆ ನೈಸರ್ಗಿಕ ಸಂಪನ್ಮೂಲಗಳ ವಿವೇಚನಾರಹಿತ ಬಳಕೆಯಿಂದ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ನಿರ್ಮಾಣ ಕ್ಷೇತ್ರದಲ್ಲಿ ಮರುಬಳಕೆ ಸಾಮಗ್ರಿಗಳು ಹಾಗೂ ಪರಿಸರಸ್ನೇಹಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಪರಿಸರ ಸಂರಕ್ಷಣೆಯ ಜೊತೆಗೆ ಮುಂದಿನ ಪೀಳಿಗೆಗೆ ಸಮರ್ಪಕ ವಸತಿ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತದೆ ಎಂದರು.

ಜಾಗತಿಕ ವಸತಿ ಬಿಕ್ಕಟ್ಟಿನ ಕುರಿತು ಪ್ರಸ್ತಾಪಿಸಿದ ಅವರು, ವಿಶ್ವದಾದ್ಯಂತ ಸುಮಾರು ಮೂರು ಬಿಲಿಯನ್ ಜನರು ಸಮರ್ಪಕ ವಸತಿ ಹಾಗೂ ಉತ್ತಮ ಜೀವನ ಪರಿಸ್ಥಿತಿಗಳ ಕೊರತೆ ಎದುರಿಸುತ್ತಿದ್ದಾರೆ. ವಸತಿ ಎಂದರೆ ಕೇವಲ ಆಶ್ರಯಕ್ಕೆ ಸೀಮಿತವಲ್ಲ. ವಿದ್ಯುತ್, ಕುಡಿಯುವ ನೀರು, ನೈರ್ಮಲ್ಯ, ಅಡುಗೆ ಸೌಲಭ್ಯ ಹಾಗೂ ಸಾರಿಗೆಯಂತಹ ಮೂಲಸೌಕರ್ಯಗಳೂ ಅಗತ್ಯ. ಇವುಗಳ ಲಭ್ಯತೆಯೇ ಗೌರವಯುತ ಜೀವನಕ್ಕೆ ಆಧಾರವಾಗಿವೆ ಎಂದು ಹೇಳಿದರು.

ವಸತಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನವೀನ ಎಂಜಿನಿಯರಿಂಗ್ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಬೇಕು. ಭಾರತದಲ್ಲಿ ವಸತಿ ಸಾಲದ ಲಭ್ಯತೆ ಹಾಗೂ ಬಡ್ಡಿದರಗಳ ಇಳಿಕೆಯಿಂದ ಸ್ವಂತ ಮನೆ ಹೊಂದುವ ಅವಕಾಶಗಳು ಹೆಚ್ಚಾಗಿವೆ. ನಗರ ಪ್ರದೇಶಗಳಲ್ಲಿ ಭೂಮಿಯ ಬೆಲೆ ಏರಿಕೆಯಾಗುತ್ತಿರುವುದರಿಂದ ಬಹುಮಹಡಿ ಕಟ್ಟಡಗಳು ಮತ್ತು ಅಪಾರ್ಟ್‌ಮೆಂಟ್‌ಗಳ ನಿರ್ಮಾಣ ಹೆಚ್ಚುತ್ತಿದೆ. ಆದರೆ ವಸತಿ ಅಭಿವೃದ್ಧಿಯೊಂದಿಗೆ ರಸ್ತೆ, ಒಳಚರಂಡಿ, ನೀರು ಸರಬರಾಜು, ವಿದ್ಯುತ್ ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನೂ ಸಮರ್ಪಕವಾಗಿ ಕಲ್ಪಿಸುವುದು ಅಗತ್ಯ ಎಂದು ಪ್ರತಿಪಾದಿಸಿದರು.

ವಿಟಿಯು ಕಲಬುರಗಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಸಂಯೋಜಕ ಡಾ. ಬ್ರಿಜ್‌ಭೂಷಣ್ ಅವರು ವಿಶ್ವ ಆವಾಸ ದಿನದ ಮಹತ್ವ, ಸಮರ್ಪಕ ವಸತಿ ಕಲ್ಪಿಸುವಲ್ಲಿನ ಸವಾಲುಗಳು ಹಾಗೂ ಸುಸ್ಥಿರ ವಸತಿ ಅಭಿವೃದ್ಧಿಯ ಅಗತ್ಯತೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಐಇಐ ಕಲಬುರಗಿ ಸ್ಥಳೀಯ ಕೇಂದ್ರದ ಕಾರ್ಯದರ್ಶಿ ಪ್ರೊ. ಉದಯಶಂಕರ್ ಬಳ್ಳಾರಿ, ಐಇಐ ತಾಂತ್ರಿಕ ಸಮಿತಿಯ ಸದಸ್ಯ ಪ್ರೊ. ವಿಷ್ಣುದತ್ತ ಕೊಹೀರ್ ಹಾಗೂ ಸಿಯುಕೆ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಪ್ರಮೋದ್ ಕುಮಾರ್ ಮಾತನಾಡಿದರು.

ಕಾರ್ಯಕ್ರಮದ ಸಂಯೋಜಕ ಡಾ. ಸಂಗಮೇಶ್ ಸ್ವಾಗತಿಸಿದರು. ಮತ್ತೊಬ್ಬ ಸಂಯೋಜಕ ಡಾ. ನಿತಿನ್ ಬಿ. ವಂದಿಸಿದರು.

ಡಾ. ಪಾಂಡು ರಂಗ ಪ್ರಸಾದ್, ಡಾ. ವೀಣಾ ಎಸ್. ಮನುರೆ, ಡಾ. ದೇವಿಕಾ ಎಸ್. ದಾಬ್ಕೆ, ಐಇಐ ಪದಾಧಿಕಾರಿಗಳಾದ ರವೀಂದ್ರ ಕಾಗಡ, ಪತಂಗೆ, ಮಹಮ್ಮದ್ ಸಿರಾಜ್, ಮನ್ಸೂರು ಅಹಮದ್, ಮಹಮ್ಮದ್ ಹುಸೇನ್ ಸೇರಿದಂತೆ ಸಿಯುಕೆ ಬೋಧಕ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಂದೇ ಮಾತರಂ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮ ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು.

Tags

Prof.Battu SatyanarayanatechnologyKalaburagi
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X