ಕಲಬುರಗಿ | ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್‍ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್‍ಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.
ಈ ಯೋಜನೆಯಡಿ ಸಾಮಾನ್ಯ ರೈತರಿಗೆ ಗರಿಷ್ಟ ಶೇ.50 ರಂತೆ, ಪ.ಜಾ/ಪ.ಪಂ.ವರ್ಗದ ರೈತರಿಗೆ ಗರಿಷ್ಠ ಶೇ.70 ರಷ್ಟು ಹಾಗೂ ಸಂಘ ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ಎಫ್‍ಪಿಓಗಳನ್ನೂಳಗೂಂಡಂತೆ ಶೇ.70 ರಷ್ಟು ಕ್ರೆಡಿಟ್ ಲಿಂಕ್ ಬ್ಯಾಕ್ ಎಂಡೆಡ್ ಸಬ್ಸಿಡಿ ನೀಡಲಾಗುತ್ತದೆ.
ಆಸಕ್ತ ರೈತರು, ಸಂಘ-ಸಂಸ್ಥೆಗಳು/ ರೈತ ಉತ್ಪಾದಕ ಸಂಸ್ಥೆ (ಎಫ್.ಪಿ.ಒ) / ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (ಎಫ್‍ಎಂಬಿ)/ ಕೃಷಿಯಂತ್ರಧಾರೆ ಕೇಂದ್ರಗಳು (ಸಿಎಚ್‍ಎಸ್‍ಸಿ) ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ 2025ರ ಜು.31 ರೊಳಗಾಗಿ ಸಂಬಂಧಪಟ್ಟ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







