Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮಕ್ಕಳು, ಮಹಿಳೆಯರ ತಕ್ಷಣದ...

ಕಲಬುರಗಿ | ಮಕ್ಕಳು, ಮಹಿಳೆಯರ ತಕ್ಷಣದ ರಕ್ಷಣೆಗೆ ʼಅಕ್ಕಪಡೆʼ ರಚನೆ : ಎಸ್ಪಿ ಅಡ್ಡೂರು ಶ್ರೀನಿವಾಸಲು

ವಾರ್ತಾಭಾರತಿವಾರ್ತಾಭಾರತಿ1 Jan 2026 6:38 PM IST
share
ಕಲಬುರಗಿ | ಮಕ್ಕಳು, ಮಹಿಳೆಯರ ತಕ್ಷಣದ ರಕ್ಷಣೆಗೆ ʼಅಕ್ಕಪಡೆʼ ರಚನೆ : ಎಸ್ಪಿ ಅಡ್ಡೂರು ಶ್ರೀನಿವಾಸಲು

ಕಲಬುರಗಿ : ಸಂಕಷ್ಟದಲ್ಲಿರುವ ಮಹಿಳೆಯರ ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಸಲುವಾಗಿ ರಾಜ್ಯ ಸರ್ಕಾರವು ಅಕ್ಕಪಡೆ ಯೋಜನೆ ಜಾರಿಗೆ ತಂದಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವರು ಹೇಳಿದರು.

ಅವರು ಬುಧವಾರ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಅಕ್ಕಪಡೆ ಯೋಜನೆಯ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಕ್ಕಪಡೆಯ ಅನುಷ್ಠಾನಕ್ಕಾಗಿ ರಾಜ್ಯ ಸರಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕಲಬುರಗಿ ಜಿಲ್ಲೆಗೆ ಮಹೇಂದ್ರ ಬೊಲೆರೋ ವಾಹನವನ್ನು ಪೊಲೀಸ್ ಇಲಾಖೆಗೆ ಒದಗಿಸಿದ್ದು, ಶಾಲೆ, ಕಾಲೇಜು, ವಿದ್ಯಾರ್ಥಿನಿಯರ ಹಾಗೂ ಬಾಲಕಿಯವರ ವಸತಿ ಗೃಹಗಳಿಗೆ ಭೇಟಿ ನೀಡುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಯುವುದು, ದೌರ್ಜನ್ಯ, ಹಿಂಸೆ, ನಿರ್ಲಕ್ಷ್ಯ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರ ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಮತ್ತು ರಕ್ಷಣೆ ಒದಗಿಸುವುದು, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಘನತೆ ಮತ್ತು ಸಬಲೀಕರಣವನ್ನು ಉತ್ತೇಜಿಸುವುದು ಅಕ್ಕಪಡೆ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಅಕ್ಕಪಡೆ ಯೋಜನೆಯಡಿ 5 ಮಹಿಳಾ ಗೃಹ ರಕ್ಷಕರವರನ್ನೊಳಗೊಂಡ ತಂಡವು ಸ್ಥಳೀಯ ಪೊಲೀಸರ ನಿಕಟ ಸಹಯೋಗದೊಂದಿಗೆ ಬೆಳಿಗ್ಗೆ 7 ಗಂಟೆಯಿoದ ರಾತ್ರಿ 8 ರವರೆಗೆ 2 ಪಾಳಿಗಳಲ್ಲಿ ಅಂದರೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮತ್ತು ಮಧ್ಯಾಹ್ನ 2 ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಬೇಕು.

ಮಹಿಳಾ ಕಿರುಕುಳ ಪ್ರಕರಣಗಳ ಬಗ್ಗೆ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಗೆ ವರದಿ ಮಾಡಬೇಕು. ಮಹಿಳೆಯರ ಮೇಲಿನ ಕಿರುಕುಳ ಮತ್ತು ಈವ್–ಟಿಸಿಂಗ್ ತಡೆಗಟ್ಟಲು ಶಾಲೆ, ಕಾಲೇಜು, ಉದ್ಯಾನವನ, ಸಿನಿಮಾ ಮಂದಿರ, ಸ್ಥಳೀಯ ಮಾರುಕಟ್ಟೆಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ಫೋಕ್ಸೋ, ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ದತಿ, ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ, ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು, ಸಂಚಾರ ನಿಯಮಗಳ ಬಗ್ಗೆ, ಉಚಿತ ಸಹಾಯವಾಣಿಗಳಾದ 1098, 181, 112 ಇವುಗಳ ಬಗ್ಗೆ ಜಾಗೃತಿ ಮೂಡಿಸುವುದು ಅಕ್ಕಪಡೆ ಯೋಜನೆಯ ಜವಾಬ್ದಾರಿಯಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಅಕ್ಕಪಡೆ ಯೋಜನೆ ಅನುಷ್ಠಾನಕ್ಕಾಗಿ ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ವಾಹನವನ್ನು ತೆಗೆದುಕೊಂಡು ಬರುತ್ತಿದ್ದು, ವಾಹನ ಬಂದ ತಕ್ಷಣ ಅಕ್ಕಪಡೆ ಯೋಜನೆಗೆ ಕಲಬುರಗಿ ಜಿಲ್ಲೆಯಲ್ಲಿ ಚಾಲನೆಗೊಳಿಸಲಾಗುತ್ತದೆ. ಸಮಿತಿಯ ಸದಸ್ಯರು ತಮ್ಮ ಇಲಾಖೆಗೆ ಸಂಬoಧಪಟ್ಟ ಶಾಲಾ ಕಾಲೇಜುಗಳ, ವಸತಿ ನಿಲಯಗಳ ಪಟ್ಟಿಯನ್ನು ಸಲ್ಲಿಸಬೇಕು. ಅಕ್ಕಪಡೆ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಲು 5 ಮಹಿಳಾ ಗೃಹ ರಕ್ಷಕ ಸಿಬ್ಬಂದಿಗಳಿಗೆ ಹಾಗೂ ಮಹಿಳಾ ಪೋಲೀಸ್ ಸಿಬ್ಬಂದಿಗಳಿಗೆ ತರಬೇತಿ ನೀಡಿ ತಂಡ ಸಿದ್ದಗೊಳಿಸಿ ಕ್ರಿಯಾ ಯೋಜನೆಯನ್ನು ಸಲ್ಲಿಸಬೇಕು ಎಂದರು.

ಸಭೆಯಲ್ಲಿ ಸಮಿತಿಯ ಸದಸ್ಯರಾದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಕಣಾಧಿಕಾರಿಗಳಾದ ಮಂಜುಳಾ ಪಾಟೀಲ, ಗೃಹರಕ್ಷಕ ದಳದ ತರಬೇತಿದಾರರಾದ ಹಣಂತರಾಯ ಗೌಡ ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ರಾಜಕುಮಾರ ರಾಠೋಡ ಸ್ವಾಗತಿಸಿದರು. ಕೊನೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಿವಶರಣಪ್ಪ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X