Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜಿಲ್ಲಾ ಪ್ರಥಮ ಶಿಕ್ಷಕರ...

Kalaburagi | ಜಿಲ್ಲಾ ಪ್ರಥಮ ಶಿಕ್ಷಕರ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಪೂರ್ಣ

ವಾರ್ತಾಭಾರತಿವಾರ್ತಾಭಾರತಿ18 July 2026 6:16 PM IST
share
Kalaburagi | ಜಿಲ್ಲಾ ಪ್ರಥಮ ಶಿಕ್ಷಕರ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಪೂರ್ಣ
ರವಿವಾರ ಕನ್ನಡ ಭವನದಲ್ಲಿ ಶಿಕ್ಷಕ-ಸಾಹಿತಿಗಳ ಸಂಗಮ; ‘ಗುರು ಗೌರವ’ ಸೇರಿ ವಿವಿಧ ಪುರಸ್ಕಾರ ಪ್ರದಾನ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಪ್ರೌಢಶಾಲಾ ಶಿಕ್ಷಕರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಗರದ ಕನ್ನಡ ಭವನದ ಸಾಹಿತ್ಯ ಮಂಟಪದಲ್ಲಿ ನಡೆಯಲಿರುವ ಜಿಲ್ಲಾ ಪ್ರಥಮ ಶಿಕ್ಷಕರ ಸಾಹಿತ್ಯ ಸಮ್ಮೇಳನದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಹಿರಿಯ ಶಿಕ್ಷಕ-ಸಾಹಿತಿ ರಾಜೇಂದ್ರ ಝಳಕಿ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಅರ್ಥಪೂರ್ಣ ಹಾಗೂ ವೈಶಿಷ್ಟ್ಯಪೂರ್ಣವಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸಾರಸ್ವತ ಲೋಕದ ಶಿಕ್ಷಕರ ಸಮ್ಮಿಲನವಾಗಿ ರೂಪುಗೊಂಡಿರುವ ಈ ಒಂದು ದಿನದ ಸಮ್ಮೇಳನದಲ್ಲಿ ಶಿಕ್ಷಕರಿಂದಲೇ ಕವಿಗೋಷ್ಠಿ, ಚಿಂತನಾಗೋಷ್ಠಿ, ಸಾಹಿತ್ಯಿಕ ಸಂವಾದ, ಗುರು ಗೌರವ ಪುರಸ್ಕಾರ ಪ್ರದಾನ ಸೇರಿದಂತೆ ವಿವಿಧ ಸಾಹಿತ್ಯ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ಕನ್ನಡ ಭವನದವರೆಗೆ ಸಮ್ಮೇಳನಾಧ್ಯಕ್ಷರ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ ಚಾಲನೆ ನೀಡಲಿದ್ದಾರೆ.

ಬೆಳಿಗ್ಗೆ 11.15ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ಡಾ. ಶಶೀಲ್ ಜಿ. ನಮೋಶಿ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ ಸಂಪಾದಕತ್ವದ ‘ಗುರು ಕಿರಣ’ ಕೃತಿಯನ್ನು ಜಿಲ್ಲಾಧಿಕಾರಿ ಇಕ್ರಾಮ್ ಷರೀಫ್ ಬಿಡುಗಡೆ ಮಾಡಲಿದ್ದಾರೆ.

ಸಮ್ಮೇಳನದಲ್ಲಿ ಶಿಕ್ಷಕ-ಸಾಹಿತಿಗಳಾದ ಡಾ. ಪ್ರಮೀಳಾ ಪಾಟೀಲ ಬಿಬ್ಬಳ್ಳಿ, ಬಸವರಾಜ ಐನೋಳ್ಳಿ, ಮಂಗಲಾ ಕಪರೆ, ಪ್ರಭು ಫುಲಾರಿ ಕರ್ಜಗಿ, ಲೀಲಾವತಿ ಕುಲಕರ್ಣಿ, ಅಂಬಾರಾಯ ಮಡ್ಡೆ, ಗಿರಿಮಲ್ಲಪ್ಪ ವಳಸಂಗ, ಆರ್.ಎಚ್. ಪಾಟೀಲ ಹಾಗೂ ಸಂತೋಷ ಹೂಗಾರ ಅವರಿಗೆ ‘ಗುರು ಗೌರವ ಪುರಸ್ಕಾರ’ ಪ್ರದಾನ ಮಾಡಿ ಸನ್ಮಾನಿಸಲಾಗುವುದು.

ಮಧ್ಯಾಹ್ನ ನಡೆಯುವ ಚಿಂತನಾಗೋಷ್ಠಿಯಲ್ಲಿ ಶೈಕ್ಷಣಿಕ ಸಮಸ್ಯೆಗಳು, ಗುಣಮಟ್ಟದ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಹಾಗೂ ಸಮ್ಮೇಳನಾಧ್ಯಕ್ಷರ ಬದುಕು-ಬರಹ ಕುರಿತು ಉಪನ್ಯಾಸಗಳು ನಡೆಯಲಿವೆ. ಬಳಿಕ ಶಿಕ್ಷಕರ ಕವಿಗೋಷ್ಠಿಯಲ್ಲಿ ಹಿರಿಯ ಹಾಗೂ ಯುವ ಶಿಕ್ಷಕ-ಕವಿಗಳು ಸಮಕಾಲೀನ ಶೈಕ್ಷಣಿಕ ಮತ್ತು ಸಾಮಾಜಿಕ ವಿದ್ಯಮಾನಗಳ ಕುರಿತು ಕವನ ವಾಚಿಸಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ‘ಸೇವಾ ಗೌರವ ಪುರಸ್ಕಾರ’ ನೀಡಿ ಸನ್ಮಾನಿಸಲಾಗುವುದು ಎಂದು ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X