Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರಾಸೇಯೋ ಶಿಬಿರಗಳಿಂದ...

Kalaburagi | ರಾಸೇಯೋ ಶಿಬಿರಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ: ಶಶಿಕಾಂತ ಉಡಿಕೇರಿ

ವಾರ್ತಾಭಾರತಿವಾರ್ತಾಭಾರತಿ8 Oct 2026 7:48 PM IST
share
Kalaburagi | ರಾಸೇಯೋ ಶಿಬಿರಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ: ಶಶಿಕಾಂತ ಉಡಿಕೇರಿ

ಕಲಬುರಗಿ: ಯುವಕರು ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ (ರಾಸೇಯೋ) ಶಿಬಿರಗಳು ಪ್ರೋತ್ಸಾಹದಾಯಕವಾಗಿವೆ. ವಿದ್ಯಾರ್ಥಿಗಳು ನಾಯಕತ್ವ, ನಿಸ್ವಾರ್ಥ ಸೇವೆ ಹಾಗೂ ಸಾಮಾಜಿಕ ಕಾಳಜಿಯೊಂದಿಗೆ ಶಿಬಿರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರೆ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ ಹೇಳಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶದ ವತಿಯಿಂದ ಅ.2ರಿಂದ 8ರವರೆಗೆ ಜ್ಞಾನಗಂಗಾ ಆವರಣದಲ್ಲಿ ಆಯೋಜಿಸಿದ್ದ ಅಂತರ ಮಹಾವಿದ್ಯಾಲಯಗಳ ರಾಸೇಯೋ ವಿಶೇಷ ಶಿಬಿರದಲ್ಲಿ ಶಿಬಿರಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು.

ರಾಸೇಯೋ ಶಿಬಿರಗಳು ವಿದ್ಯಾರ್ಥಿಗಳಲ್ಲಿ ನಿಸ್ವಾರ್ಥ ಸೇವಾ ಮನೋಭಾವ, ಮಾನವೀಯತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುತ್ತವೆ. ಕಠಿಣ ಪರಿಸ್ಥಿತಿಗಳನ್ನು ಎದುರಿಸುವ ಸಾಮರ್ಥ್ಯ, ಸಕಾರಾತ್ಮಕ ಮನೋಭಾವ, ಆತ್ಮಸ್ಥೈರ್ಯ, ಧೈರ್ಯ ಹಾಗೂ ಸಾಮೂಹಿಕ ಶಕ್ತಿಯನ್ನು ಬೆಳೆಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗುತ್ತವೆ. ಶಿಬಿರಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬಹುದು ಎಂದು ಹೇಳಿದರು.

ರಾಸೇಯೋ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಹೆಚ್.ಎಸ್. ಜಂಗೆ ಮಾತನಾಡಿ, ಸಾರ್ವಜನಿಕ ಸೇವೆಯ ಮೂಲಕ ವಿದ್ಯಾರ್ಥಿಗಳು ಮೌಲಿಕ ಅನುಭವ ಹಾಗೂ ಮಾರ್ಗದರ್ಶನ ಪಡೆಯಬೇಕು. ಸೇವಾ ಚಟುವಟಿಕೆಗಳ ಮೂಲಕ ರಾಷ್ಟ್ರಪ್ರೇಮ ಮತ್ತು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕುಲಸಚಿವ ಮೊಹಮ್ಮದ್ ಶಕೀಲ್, ಮೌಲ್ಯಮಾಪನ ಕುಲಸಚಿವೆ ಪ್ರೊ. ಅಶ್ವಿನಿ, ವಿತ್ತಾಧಿಕಾರಿ ಜಯಾಂಬಿಕ ಉಪಸ್ಥಿತರಿದ್ದರು. ವಿಶ್ವವಿದ್ಯಾಲಯದ ವಿವಿಧ ಮಹಾವಿದ್ಯಾಲಯಗಳ ರಾಸೇಯೋ ಘಟಕಗಳ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಅವಿನಾಶ್ ಕಂಟಿಕರ್, ಡಾ. ವಿದ್ಯಾಸಾಗರ, ವಸಂತ್ ರಾಠೋಡ್ ಸೇರಿದಂತೆ ರಾಸೇಯೋ ಸ್ವಯಂಸೇವಕರು ಭಾಗವಹಿಸಿದ್ದರು.

ಶಿಬಿರಾರ್ಥಿಗಳಾದ ಪ್ರಕಾಶ್ ಎಸ್. ಹಾಗೂ ಮೇಘಾ ಪಾಟೀಲ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಐಶ್ವರ್ಯ ಸ್ವಾಗತಿಸಿದರು. ಸೌಂದರ್ಯ ಅಪ್ಪಾರಾಯ ಹಾಗೂ ಭಾಗ್ಯ ವಂದಿಸಿದರು. ಕೊನೆಯಲ್ಲಿ ಶಿಬಿರಾರ್ಥಿಗಳು ರಾಷ್ಟ್ರಗೀತೆ ಹಾಡಿದರು.

Tags

studentsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X