Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಅಂಬೇಡ್ಕರ್ ಅವರ 22...

Kalaburagi | ಅಂಬೇಡ್ಕರ್ ಅವರ 22 ಪ್ರತಿಜ್ಞೆಗಳು ಬದುಕಿಗೆ ಹೊಸ ದಿಕ್ಕು ನೀಡಿವೆ : ಭಂತೆ ಬೋಧಿತಿಸ್ಸ

ವಾರ್ತಾಭಾರತಿವಾರ್ತಾಭಾರತಿ14 Oct 2026 8:07 PM IST
share
Kalaburagi | ಅಂಬೇಡ್ಕರ್ ಅವರ 22 ಪ್ರತಿಜ್ಞೆಗಳು ಬದುಕಿಗೆ ಹೊಸ ದಿಕ್ಕು ನೀಡಿವೆ : ಭಂತೆ ಬೋಧಿತಿಸ್ಸ

ಕಲಬುರಗಿ: ಬಾಬಾಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ಅವರು 1956ರಲ್ಲಿ ಬೌದ್ಧ ಧಮ್ಮ ಸ್ವೀಕರಿಸುವ ಮೂಲಕ ನಮಗೆ ಧಮ್ಮದ ಮಾರ್ಗ ತೋರಿಸಿದ್ದಾರೆ. ಅವರು ಬೋಧಿಸಿದ 22 ಪ್ರತಿಜ್ಞೆಗಳು ಹಾಗೂ ಬುದ್ಧ, ಧಮ್ಮ ಮತ್ತು ಸಂಘ ಎಂಬ ತ್ರಿರತ್ನಗಳು ನಮ್ಮ ಬದುಕಿಗೆ ಹೊಸ ದಿಕ್ಕು ನೀಡಿವೆ. ಈ ತ್ರಿರತ್ನಗಳ ಮೂಲಕ ನಾವೆಲ್ಲರೂ ಆಗರ್ಭ ಶ್ರೀಮಂತರಾಗಿದ್ದೇವೆ ಎಂದು ಭಂತೆ ಬೋಧಿತಿಸ್ಸ ಹೇಳಿದರು.

ನಗರದ ಬಸವನಗರದಲ್ಲಿ 70ನೇ ಧಮ್ಮಚಕ್ರ ಪ್ರವರ್ತನಾ ದಿನದ ನಿಮಿತ್ತ ರಾಹುಲ್ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಧಮ್ಮಜ್ಯೋತಿ ಯಾತ್ರೆಯ ಬಳಿಕ, ಬಸವನಗರದ ಕರುಣಾ ಬುದ್ಧ ವಿಹಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಬಾಸಾಹೇಬ ಅಂಬೇಡ್ಕರ್ ಅವರು ಬೌದ್ಧ ಧಮ್ಮ ಸ್ವೀಕರಿಸುವ ಮೂಲಕ ಸಮಾನತೆ, ಸ್ವಾಭಿಮಾನ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ಸಾರಿದ್ದಾರೆ. ಅವರು ನೀಡಿದ 22 ಪ್ರತಿಜ್ಞೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಬುದ್ಧನ ತತ್ವಗಳಂತೆ ಬದುಕಬೇಕು. ಧಮ್ಮದ ಮಾರ್ಗದಲ್ಲಿ ಸಾಗುವ ಮೂಲಕ ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸಮಾನತೆಯನ್ನು ಬೆಳೆಸಬೇಕು ಎಂದು ಭಂತೆ ಬೋಧಿತಿಸ್ಸ ಸಂದೇಶ ನೀಡಿದರು.

ಇದಕ್ಕೂ ಮುನ್ನ ನಗರದ ಜಗತ್ ವೃತ್ತದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಅವರು ಧಮ್ಮಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು. ಪಂಚಶೀಲ ಧ್ವಜಗಳನ್ನು ಹಿಡಿದ ಯುವಕರು ‘ಜೈ ಭೀಮ್’, ‘ಜೈ ಬುದ್ಧ’ ಎಂಬ ಘೋಷಣೆಗಳನ್ನು ಮೊಳಗಿಸುತ್ತ ನಗರದ ಪ್ರಮುಖ ಬೀದಿಗಳಲ್ಲಿ ಯಾತ್ರೆ ನಡೆಸಿದರು. ಬಳಿಕ ಯಾತ್ರೆಯು ಬಸವನಗರದ ಕರುಣಾ ಬುದ್ಧ ವಿಹಾರವನ್ನು ತಲುಪಿತು.

ಕಾರ್ಯಕ್ರಮದ ಆರಂಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ನಂತರ ಭಂತೆ ಬೋಧಿತಿಸ್ಸ ಅವರು ತ್ರಿಸರಣ ಮತ್ತು ಪಂಚಶೀಲ ಬೋಧಿಸಿದರು. ಹಣಮಂತ ಬೋಧನಕರ ಅವರು ಬಾಬಾಸಾಹೇಬರು ನೀಡಿದ 22 ಪ್ರತಿಜ್ಞೆಗಳನ್ನು ಬೋಧಿಸಿದರು.

ಜಿಲ್ಲೆಯ ವಿವಿಧ ತಾಲೂಕುಗಳು ಹಾಗೂ ನಗರ ಪ್ರದೇಶಗಳಿಂದ ಆಗಮಿಸಿದ್ದ ಬೌದ್ಧ ಅನುಯಾಯಿಗಳು, ಬಸವನಗರದ ಮಹಿಳೆಯರು ಸೇರಿದಂತೆ ನೂರಾರು ಜನರು ಯಾತ್ರೆಯಲ್ಲಿ ಭಾಗವಹಿಸಿ ಧಮ್ಮದ ಸಂದೇಶ ಸಾರಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಮಲ್ಲಿಕಾರ್ಜುನ ಸುಹಾಸಿನಿ, ರಾಜಶೇಖರ ಮಾಂಗ್, ಸಂಧ್ಯಾ ಕಾಣೇಕರ, ಸೂರ್ಯಕಾಂತ ನಿಂಬಾಳ್ಕರ್, ಸಿದ್ದರಾಮ ಬೇಳಕೋಟಿ, ದೇವೇಂದ್ರ ಸಿನ್ನೂರ, ಹರಿಯಪ್ಪ ಹಳ್ಳಿ, ವಿಜಯಕುಮಾರ ಶಿಂಧೆ, ಭೀಮಾ ಕಟ್ಟಿ, ಜಯಪ್ಪ ಕೊಳ್ಳೂರ, ಎಸ್.ಎಸ್. ತವಡೆ ಹಾಗೂ ಸುರೇಶ ಕಾಣೇಕರ ಸೇರಿದಂತೆ ನಗರದ ಪ್ರಮುಖರು ಉಪಸ್ಥಿತರಿದ್ದರು.

Tags

AmbedkarKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X