ಕಲಬುರಗಿ | ಜಿಲ್ಲಾಡಳಿತದಿಂದ ಅಂಬೇಡ್ಕರ್ ರ 69ನೇ ಮಹಾಪರಿನಿರ್ವಾಣ ದಿನಾಚರಣೆ

ಕಲಬುರಗಿ: ನಗರದ ಜಗತ್ ವೃತ್ತದಲ್ಲಿರುವ ಡಾ.ಅಂಬೇಡ್ಕರ್ ಅವರ ಪುತ್ಥಳಿಯ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನಶಿಲ್ಪಿ, ಡಾ.ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು.
ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವಾರ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಪೂಜ್ಯ ಭಂತೆ ವರಜ್ಯೋತೇ ಅಣದೂರ ಬೀದರ್, ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಮಹೇಶ್ ಹುಬಳ್ಳಿ ಮತ್ತಿತರ ಗಣ್ಯರು ಮಾಲಾರ್ಪಣೆ ಮಾಡಿ, ಪುತ್ಥಳಿಗೆ ಗೌರವಾರ್ಪಣೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರೆ, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹಾಗೂ ನಗರ ಪೋಲಿಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ನೀಲಿ ಧ್ವಜಾರೋಹಣ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು, ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಡಾ.ಅಂಬೇಡ್ಕರ್ ರ ಅನುಯಾಯಿಗಳು ಉಪಸ್ಥಿತರಿದ್ದರು.







