Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಅಮೀನ ರೆಡ್ಡಿ ಎನ್ ಅವರ...

Kalaburagi | ಅಮೀನ ರೆಡ್ಡಿ ಎನ್ ಅವರ ‘ಬ್ಲ್ಯಾಕ್ ಫ್ಲಾವರ್–4’ ಶೀರ್ಷಿಕೆಯ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ11 Aug 2026 8:18 PM IST
share
Kalaburagi | ಅಮೀನ ರೆಡ್ಡಿ ಎನ್ ಅವರ ‘ಬ್ಲ್ಯಾಕ್ ಫ್ಲಾವರ್–4’ ಶೀರ್ಷಿಕೆಯ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದಡಿ ಯಾದಗಿರಿ ಜಿಲ್ಲೆಯ ಯುವ ಚಿತ್ರಕಲಾವಿದ ಅಮೀನ ರೆಡ್ಡಿ ಎನ್. ಅವರ ‘ಬ್ಲ್ಯಾಕ್ ಫ್ಲಾವರ್–4’ ಶೀರ್ಷಿಕೆಯ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಆ.15ರಿಂದ 17ರವರೆಗೆ ನಗರದ ಅನುಚಂದ್ರ ಆರ್ಟ್ ಸ್ಟುಡಿಯೋದಲ್ಲಿ ನಡೆಯಲಿದೆ.

ಆ.15ರಂದು ಸಂಜೆ 4.30ಕ್ಕೆ ಯಾದಗಿರಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಎಸ್. ಮಠಪತಿ ಅವರು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಚಿತ್ರಕಲಾವಿದ ಡಾ. ಅಶೋಕ್ ಶೆಟಗಾರ ಹಾಗೂ ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ಡಾ. ಬಸವರಾಜ ಎಸ್. ಕಲೆಗಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಿರಿಯ ಚಿತ್ರಕಲಾವಿದ ಚಂದ್ರಹಾಸ ವಾಯ್. ಜಾಲಿಹಾಳ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರದರ್ಶನದಲ್ಲಿ ಅಮೀನ ರೆಡ್ಡಿ ಅವರು ವಿವಿಧ ಮಾಧ್ಯಮಗಳಲ್ಲಿ ರಚಿಸಿರುವ 30ಕ್ಕೂ ಹೆಚ್ಚು ವರ್ಣಚಿತ್ರ ಹಾಗೂ ರೇಖಾಚಿತ್ರಗಳು ಪ್ರದರ್ಶನಗೊಳ್ಳಲಿವೆ.

ನಿಸರ್ಗ ಸಂರಕ್ಷಣೆಯ ಸಂದೇಶ :

ಅಮೀನ ರೆಡ್ಡಿ ಅವರ ಕಲಾಕೃತಿಗಳ ಮುಖ್ಯ ಆಶಯ ನಿಸರ್ಗದ ಸೌಂದರ್ಯ ಹಾಗೂ ಮಾನವನ ಅತಿಯಾದ ದುರುಪಯೋಗದಿಂದ ಪರಿಸರದ ಮೇಲಾಗುತ್ತಿರುವ ಹಾನಿಯನ್ನು ಬಣ್ಣ ಮತ್ತು ರೇಖೆಗಳ ಮೂಲಕ ಅಭಿವ್ಯಕ್ತಿಸುವುದಾಗಿದೆ.

ಹಸಿರು ಕಾಡುಗಳು, ಬೆಟ್ಟಗಳು, ನದಿಗಳು, ಜಲಪಾತಗಳು, ಹೂವುಗಳು, ಪ್ರಾಣಿ–ಪಕ್ಷಿಗಳು ಹಾಗೂ ನೀಲಾಕಾಶದಂತಹ ನೈಸರ್ಗಿಕ ಅಂಶಗಳನ್ನು ಹಸಿರು, ನೀಲಿ, ಹಳದಿ, ಕಿತ್ತಳೆ ಸೇರಿದಂತೆ ವಿವಿಧ ಬಣ್ಣಗಳ ಸಮನ್ವಯದ ಮೂಲಕ ಕಲಾಕೃತಿಗಳಲ್ಲಿ ಸುಂದರವಾಗಿ ಮೂಡಿಸಿದ್ದಾರೆ.

ದೃಶ್ಯಕಲೆಯಲ್ಲಿ ಸ್ನಾತಕೋತ್ತರ ಹಾಗೂ ಎಂ.ಫಿಲ್ ಪದವಿ ಪಡೆದಿರುವ ಅಮೀನ ರೆಡ್ಡಿ ಎನ್. ಅವರು ಗುಲಬರ್ಗಾ ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ. ಈಗಾಗಲೇ ಮೂರು ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಗಳನ್ನು ಆಯೋಜಿಸಿರುವ ಅವರು, ಮೂರಕ್ಕೂ ಹೆಚ್ಚು ಸಮೂಹ ಚಿತ್ರಕಲಾ ಪ್ರದರ್ಶನ ಹಾಗೂ ಕಲಾ ಶಿಬಿರಗಳಲ್ಲಿ ಭಾಗವಹಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X