Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಆ.1ರಂದು ಕನ್ನಡ ಭವನದಲ್ಲಿ...

Kalaburagi | ಆ.1ರಂದು ಕನ್ನಡ ಭವನದಲ್ಲಿ ಅಣ್ಣಾ ಭಾವು ಸಾಠೆ ಜಯಂತಿ ಆಚರಣೆ: ಬಸಣ್ಣ ಸಿಂಗೆ

ವಾರ್ತಾಭಾರತಿವಾರ್ತಾಭಾರತಿ29 July 2026 5:44 PM IST
share
Kalaburagi | ಆ.1ರಂದು ಕನ್ನಡ ಭವನದಲ್ಲಿ ಅಣ್ಣಾ ಭಾವು ಸಾಠೆ ಜಯಂತಿ ಆಚರಣೆ: ಬಸಣ್ಣ ಸಿಂಗೆ

ಕಲಬುರಗಿ: ಸಾಹಿತ್ಯ ಸಾಮ್ರಾಟ ಅಣ್ಣಾಭಾವು ಸಾಠೆ ಅವರ 106ನೇ ಜಯಂತ್ಯೋತ್ಸವವನ್ನು ಇದೇ ಶನಿವಾರ (ಆಗಸ್ಟ್ 1) ನಗರದ ಕನ್ನಡ ಭವನದಲ್ಲಿ ಆಚರಿಸಲಾಗುವುದು ಎಂದು ಅಣ್ಣಾಭಾವು ಮೆಮೋರಿಯಲ್ ಟ್ರಸ್ಟ್ ಸದಸ್ಯ ಬಸಣ್ಣ ಸಿಂಗೆ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಉದ್ಘಾಟಿಸಲಿದ್ದು, ನಿವೃತ್ತ ಮುಖ್ಯ ಇಂಜಿನಿಯರ್ ಬಿ.ಬಿ. ರಾಮಪುರೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ನಿವೃತ್ತ ನ್ಯಾಯಾಧೀಶ ಜಿ.ಕೆ. ಗೋಖಲೆ, ಮಹಾಪೌರ ವರ್ಷಾ ರಾಜೀವ ಜಾನೆ, ಪಾಲಿಕೆ ಮಾಜಿ ಸದಸ್ಯ ನಾಗರಾಜ್ ಗುಂಡಗುರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಶಾಮ್ ನಾಟಿಕಾರ್ ಹಾಗೂ ಚಿಂತಕ ಆರ್.ಕೆ. ಹುಡಗಿ ಭಾಗವಹಿಸಲಿದ್ದಾರೆ. ಉಪನ್ಯಾಸಕ ಅರುಣ್ ಜೋಳದಕೊಡ್ಲಗಿ ಮುಖ್ಯ ಭಾಷಣ ಮಾಡಲಿದ್ದು, ಬಸಣ್ಣ ಸಿಂಗೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವರು ಎಂದು ಹೇಳಿದರು.

ಅಣ್ಣಾಭಾವು ಸಾಠೆ ಕೇವಲ ಒಂದೂವರೆ ದಿನ ಮಾತ್ರ ಶಾಲಾ ಶಿಕ್ಷಣ ಪಡೆದಿದ್ದರೂ, ತಮ್ಮ ಸಾಹಿತ್ಯ ಪ್ರತಿಭೆಯಿಂದ ವಿಶ್ವಪ್ರಸಿದ್ಧ ಸಾಹಿತಿಯಾಗಿ ಗುರುತಿಸಿಕೊಂಡಿರುವುದು ವಿಶಿಷ್ಟ ಸಾಧನೆಯಾಗಿದೆ ಎಂದು ಬಸಣ್ಣ ಸಿಂಗೆ ಹೇಳಿದರು.

ಸ್ವಾತಂತ್ರ್ಯಾನಂತರ ಮುಂಬೈನ ಆಜಾದ್ ಮೈದಾನದಲ್ಲಿ ಲಕ್ಷಾಂತರ ಕಾರ್ಮಿಕರನ್ನು ಉದ್ದೇಶಿಸಿ ಅವರು ಮಾಡಿದ ಭಾಷಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಅವರ ಕೃತಿಗಳು ರಾಜ್ಯದ ಪಠ್ಯಪುಸ್ತಕಗಳಲ್ಲಿ ಸೇರ್ಪಡೆಯಾದ ನಂತರವೇ ಅವರ ಸಾಹಿತ್ಯ ಮತ್ತು ಚಿಂತನೆಗಳ ಕುರಿತು ಹೆಚ್ಚಿನ ಜನರಿಗೆ ಅರಿವು ಮೂಡಿತು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಲೆ) ದಕ್ಷಿಣ ಭಾರತದ ಪ್ರಧಾನ ಕಾರ್ಯದರ್ಶಿಗಳಾದ ಎ.ಬಿ ಹೊಸಮನಿ, ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಂಚಾಲಕರಾದ ಬಾಲಾಜಿ ಕಾಂಬಳೆ, ಹೋರಾಟಗಾರರಾದ ಸಾಜಿದ್ ಅಹ್ಮದ್ ಇದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X