Kalaburagi | ಸರಕಾರಿ ನೌಕರರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಅಣ್ಣಾರಾವ ಹಾಬಾಳಕರ್ ನೇಮಕ

ಕಲಬುರಗಿ : ಕಲಬುರಗಿಯ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಶಿರಸ್ತೇದಾರರಾಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾರಾವ ಹಾಬಾಳಕರ್ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಹಾಬಾಳಕರ್ ಅವರನ್ನು ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ನೇಮಕದಿಂದ ಸಂಘದ ಚಟುವಟಿಕೆಗಳಿಗೆ ಮತ್ತಷ್ಟು ಬಲ ಸಿಗಲಿದ್ದು, ರಾಜ್ಯದ ಸರ್ಕಾರಿ ನೌಕರರ ಸಮಸ್ಯೆಗಳ ಪರಿಹಾರ ಹಾಗೂ ಸಂಘಟನೆಯ ಅಭಿವೃದ್ಧಿಗೆ ಅವರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಸಂಘದ ಮುಖಂಡರು ವ್ಯಕ್ತಪಡಿಸಿದ್ದಾರೆ.
ಅಣ್ಣಾರಾವ ಹಾಬಾಳಕರ್ ಅವರ ನೇಮಕವನ್ನು ಕಲಬುರಗಿ ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳುಂಡಗಿ ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಅವರ ಅವಧಿಯಲ್ಲಿ ಸಂಘಕ್ಕೆ ಇನ್ನಷ್ಟು ಬಲ ಹಾಗೂ ಚೈತನ್ಯ ದೊರೆಯಲಿ ಎಂದು ಶುಭ ಹಾರೈಸಿದ್ದಾರೆ.




