Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಾರ್ಷಿಕ ಕ್ರೀಡಾಕೂಟ:...

Kalaburagi | ವಾರ್ಷಿಕ ಕ್ರೀಡಾಕೂಟ: ಇಂಜಿನಿಯರಿಂಗ್, ತಂತ್ರಜ್ಞಾನ ನಿಕಾಯಕ್ಕೆ ಸಮಗ್ರ ಚಾಂಪಿಯನ್ ಪ್ರಶಸ್ತಿ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ29 Nov 2026 6:05 PM IST
share
Kalaburagi | ವಾರ್ಷಿಕ ಕ್ರೀಡಾಕೂಟ: ಇಂಜಿನಿಯರಿಂಗ್, ತಂತ್ರಜ್ಞಾನ ನಿಕಾಯಕ್ಕೆ ಸಮಗ್ರ ಚಾಂಪಿಯನ್ ಪ್ರಶಸ್ತಿ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಾಲ್ಕು ದಿನಗಳ ಕಾಲ ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ನಿಕಾಯವು ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಟ್ರ್ಯಾಕ್ ಆ್ಯಂಡ್ ಫೀಲ್ಡ್ ಹಾಗೂ ವಿವಿಧ ತಂಡ ಸ್ಪರ್ಧೆಗಳಲ್ಲಿ ಹೆಚ್ಚಿನ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ನಿಕಾಯವು ಕ್ರೀಡಾಕೂಟದಲ್ಲಿ ತನ್ನ ಪ್ರಾಬಲ್ಯ ಮೆರೆದಿದೆ.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ವಿಜೇತ ನಿಕಾಯದ ವಿದ್ಯಾರ್ಥಿಗಳಿಗೆ ಸಮಗ್ರ ಚಾಂಪಿಯನ್‌ಶಿಪ್ ಟ್ರೋಫಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ, ಕುಲಸಚಿವೆ ಡಾ.ಲಕ್ಷ್ಮಿ ಪಾಟೀಲ ಮಾಕಾ, ನಿರ್ದೇಶಕ ಪ್ರೊ.ವಿ.ಡಿ.ಮೈತ್ರಿ, ಹಣಕಾಸು ಅಧಿಕಾರಿ ಡಾ.ಕಿರಣ್ ಮಕಾ ಹಾಗೂ ಡೀನ್ ಡಾ. ಶಿವಕುಮಾರ ಜವಳಿಗಿ ಉಪಸ್ಥಿತರಿದ್ದರು.

ಬಳಿಕ ವಿವಿಧ ವೈಯಕ್ತಿಕ ಹಾಗೂ ತಂಡ ಸ್ಪರ್ಧೆಗಳಲ್ಲಿ ವಿಜೇತರು ಮತ್ತು ರನ್ನರ್‌ಅಪ್ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪದಕ ಹಾಗೂ ಟ್ರೋಫಿಗಳನ್ನು ವಿತರಿಸಲಾಯಿತು.

ಪುರುಷರ ವೈಯಕ್ತಿಕ ವಿಭಾಗ: 100 ಮೀಟರ್ ಓಟದಲ್ಲಿ ಸೋಮೇಶ್ವರ (ಬಿ.ಟೆಕ್), 200 ಮೀಟರ್ ಓಟದಲ್ಲಿ ವಿಶಾಲ್ (ಬಿ.ಎಸ್ಸಿ. ಆನರ್ಸ್), 400 ಮೀಟರ್ ಓಟದಲ್ಲಿ ಪ್ರೇಮ್‌ಕುಮಾರ್ (ಮೆಕ್ಯಾನಿಕಲ್ ಇಂಜಿನಿಯರಿಂಗ್) ಹಾಗೂ 800 ಮೀಟರ್ ಓಟದಲ್ಲಿ ದಿನೇಶ್ (ಎನರ್ಜಿ ಇಂಜಿನಿಯರಿಂಗ್) ಪ್ರಥಮ ಸ್ಥಾನ ಪಡೆದರು.

ಉದ್ದ ಜಿಗಿತದಲ್ಲಿ ಸಿದ್ದಣ್ಣ (ಬಿ.ಟೆಕ್), ಗುಂಡು ಎಸೆತ ಮತ್ತು ಜಾವೆಲಿನ್ ಎಸೆತದಲ್ಲಿ ಅಲ್ತಾಫ್ (ಎಂಬಿಎ-ಎಚ್‌ಎ), ಡಿಸ್ಕಸ್ ಎಸೆತದಲ್ಲಿ ಶರಣಕುಮಾರ (ಬಿ.ಎಸ್ಸಿ. ಆನರ್ಸ್) ಪ್ರಥಮ ಸ್ಥಾನ ಗಳಿಸಿದರು.

ಮಹಿಳೆಯರ ವೈಯಕ್ತಿಕ ವಿಭಾಗ: 100 ಮೀಟರ್ ಓಟದಲ್ಲಿ ರಮ್ಯಾ (ಬಿಬಿಎ), 200 ಮೀಟರ್ ಓಟದಲ್ಲಿ ದೇವಿಕಾ (ಎಂಬಿಎ-ಟಿಟಿ), 400 ಮೀಟರ್ ಓಟದಲ್ಲಿ ಸುಕನ್ಯಾ (ಬಿಬಿಎ) ಹಾಗೂ 800 ಮೀಟರ್ ಓಟದಲ್ಲಿ ಸಂಧ್ಯಾ (ಸಿಎಸ್‌ಇ) ಪ್ರಥಮ ಸ್ಥಾನ ಪಡೆದರು.

ಉದ್ದ ಜಿಗಿತದಲ್ಲಿ ಸೃಷ್ಟಿ ಎಂ. (ಸಿಎಸ್‌ಇ), ಜಾವೆಲಿನ್ ಎಸೆತದಲ್ಲಿ ಧನೇಶ್ವರಿ (ಬಿ.ಟೆಕ್), ಗುಂಡು ಎಸೆತದಲ್ಲಿ ಪೂಜಾ ಬಿ. (ಇಇಇ) ಹಾಗೂ ಡಿಸ್ಕಸ್ ಎಸೆತದಲ್ಲಿ ದಾನೇಶ್ವರಿ (ಸಿಎಸ್‌ಇ) ಪ್ರಥಮ ಸ್ಥಾನ ಗಳಿಸಿದರು.

ತಂಡ ಸ್ಪರ್ಧೆಗಳು: ಪುರುಷರ ಬ್ಯಾಡ್ಮಿಂಟನ್‌ನಲ್ಲಿ ಸಿಎಸ್‌ಇ ಕೋ-ಎಡ್ ತಂಡ ಹಾಗೂ ಮಹಿಳೆಯರ ಬ್ಯಾಡ್ಮಿಂಟನ್‌ನಲ್ಲಿ ಇಸಿಇ ಕೋ-ಎಡ್ ತಂಡ ಜಯಗಳಿಸಿದವು. ಪುರುಷರ ಮತ್ತು ಮಹಿಳೆಯರ ಕಬಡ್ಡಿಯಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ತಂಡಗಳು ಪ್ರಶಸ್ತಿ ಪಡೆದವು. ಮಹಿಳೆಯರ ಥ್ರೋಬಾಲ್‌ನಲ್ಲಿಯೂ ಸಿಎಸ್‌ಇ ತಂಡ ವಿಜೇತವಾಯಿತು.

ಪುರುಷರ ವಾಲಿಬಾಲ್‌ನಲ್ಲಿ ಸಿಎಸ್‌ಇ ತಂಡ, ಮಹಿಳೆಯರ ಕ್ರಿಕೆಟ್‌ನಲ್ಲಿ ಬಿಬಿಎ ಕೋ-ಎಡ್ ತಂಡ ಹಾಗೂ ಪುರುಷರ ಕ್ರಿಕೆಟ್‌ನಲ್ಲಿ ಬಿ.ಟೆಕ್ ತಂಡ ಚಾಂಪಿಯನ್‌ಗಳಾದವು.

ವೈಯಕ್ತಿಕ ಹಾಗೂ ತಂಡ ಸ್ಪರ್ಧೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ನಿಕಾಯವು ಸಮಗ್ರ ಚಾಂಪಿಯನ್ ಟ್ರೋಫಿ ಗೆಲ್ಲುವ ಮೂಲಕ ನಾಲ್ಕು ದಿನಗಳ ಕ್ರೀಡಾಕೂಟಕ್ಕೆ ತೆರೆ ಎಳೆದಿತು.

Tags

KalaburagiSports MeetEngineeringTechnology
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X