Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಪ್ಪನ ಒಡನಾಟ ಕೃತಿ ಬಿಡುಗಡೆ,...

ಕಲಬುರಗಿ | ಅಪ್ಪನ ಒಡನಾಟ ಕೃತಿ ಬಿಡುಗಡೆ, ಬಸವ ಮಾರ್ಗ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ26 July 2026 6:59 PM IST
share
ಕಲಬುರಗಿ | ಅಪ್ಪನ ಒಡನಾಟ ಕೃತಿ ಬಿಡುಗಡೆ, ಬಸವ ಮಾರ್ಗ ಪ್ರಶಸ್ತಿ ಪ್ರದಾನ

ಕಲಬುರಗಿ: ‘ಶಾಲಾ ಶಿಕ್ಷಕರಾಗಿ, ಪತ್ರಕರ್ತರಾಗಿ ದಿಟ್ಟತನದಿಂದ ರಾಜಕಾರಣಿಗಳ ಅಕ್ರಮಗಳು, ರೈತರ ಬವಣೆಗಳ ಬಗ್ಗೆ ಪತ್ರಿಕೆಗಳಲ್ಲಿ ಬರೆಯುತ್ತಿದ್ದ ದಿ.ಲಿಂಗಣ್ಣ ಸತ್ಯಂಪೇಟೆ ಅವರಿಗೆ ಸಾಕಷ್ಟು ಕಿರುಕುಳ ನೀಡಿದರೂ ವಿಚಲಿತರಾಗಿರಲಿಲ್ಲ’ ಎಂದು ಮಾಜಿ ಸಚಿವ ಎಸ್.ಕೆ.ಕಾಂತಾ ಅವರು ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡರು.

ಶರಣಮಾರ್ಗ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ಲಿಂಗಣ್ಣ ಸತ್ಯಂಪೇಟೆಯವರ 14ನೇ ಸಂಸ್ಮರಣೆ, ಬಸವಮಾರ್ಗ ಪ್ರಶಸ್ತಿ ಪ್ರದಾನ ಹಾಗೂ ‘ಅಪ್ಪನ ಒಡನಾಟ’ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಅವರ ಪತ್ನಿ, ಮಕ್ಕಳನ್ನು ಬಿಟ್ಟರೆ ಲಿಂಗಣ್ಣ ಅವರಿಗೆ ಅತಿ ಹತ್ತಿರವಾಗಿದ್ದು ನಾನೇ. ಶಾಲಾ ಶಿಕ್ಷಕರಾಗಿದ್ದ ಅವರು ನಿರ್ಭೀತಿಯಿಂದ ಲಂಕೇಶ್ ಪತ್ರಿಕೆಯಲ್ಲಿ ಬರೆಯುತ್ತಿದ್ದರು. ಕೆಲ ವರದಿಗಳಿಗೆ ಸಂಬಂಧಿಸಿದಂತೆ ಪಿ.ಲಂಕೇಶ್ ಅವರನ್ನೂ ಎದುರು ಹಾಕಿಕೊಂಡಿದ್ದರು. ಅವರ ವೈಚಾರಿಕತೆ ಹಾಗೂ ಪ್ರಖರ ಬರವಣಿಗೆಯಿಂದಾಗಿ ಹಲವು ಬಾರಿ ವರ್ಗಾವಣೆ ಶಿಕ್ಷೆಗೆ ಗುರಿಯಾಗಿದ್ದರು. ಸೇವೆಯಿಂದ ಅಮಾನತುಗೊಂಡಿದ್ದರು. ಅಂತಹ ಸಂದರ್ಭದಲ್ಲಿ ಅವರ ವರ್ಗಾವಣೆ, ಅಮಾನತು ಆದೇಶವನ್ನು ವಾಪಸ್ ಪಡೆಯುವಂತೆ ಮಾಡಿದ್ದೆ’ ಎಂದರು.

ಶಾಸಕ ಬಿ.ಆರ್.ಪಾಟೀಲ ಮಾತನಾಡಿ, ಬಸವ ತತ್ವ ಅನುಯಾಯಿಯಾಗಿದ್ದ ಲಿಂಗಣ್ಣ ಸತ್ಯಂಪೇಟೆ ಅವರು ಅಣುಬಾಂಬಿನಂತಿದ್ದರು. ಅನ್ಯಾಯದ ವಿರುದ್ಧ ಸಿಡಿದೇಳುತ್ತಿದ್ದರು. ಈ ಭಾಗದ ರಾಜಕಾರಣಿಗಳು, ಮಠಾಧೀಶರ ಅಕ್ರಮಗಳನ್ನು ನಿರ್ಭಿಡೆಯಿಂದ ಬಯಲುಗೊಳಿಸುತ್ತಿದ್ದರು ಎಂದರು.

ಲಿಂಗಣ್ಣ ಅವರ ಪುತ್ರ ವಿಶ್ವರಾಧ್ಯ ಸತ್ಯಂಪೇಟೆ ಮಾತನಾಡಿ, ‘ತಂದೆಯವರು ಆರಂಭಿಸಿದ್ದ ಬಸವ ಮಾರ್ಗ ಪತ್ರಿಕೆ ಒಂದು ಕಾಲಕ್ಕೆ 25 ಸಾವಿರ ಪ್ರತಿ ಮಾರಾಟವಾಗುತ್ತಿತ್ತು. ಚಂದಾ ಕೊಡಲಿ, ಬಿಡಲಿ ಯಾರಾದರೂ ಪರಿಚಯವಾದರೆ ಸಾಕು ಅವರ ಮನೆಗೆ ಪತ್ರಿಕೆ ಕಳಿಸುತ್ತಿದ್ದರು. ಲಾಭ ನಷ್ಟದ ಲೆಕ್ಕಾಚಾರ ಮಾಡುತ್ತಿರಲಿಲ್ಲ. ಪತ್ರಿಕೆ ಅಚ್ಚಿಗೆ ಹೋಗುವವರೆಗೂ ಕೆಲ ತಿದ್ದುಪಡಿಗಳನ್ನು ಮಾಡುತ್ತಲೇ ಇರುತ್ತಿದ್ದರು’ ಎಂದರು.

ಸಾನ್ನಿಧ್ಯ ವಹಿಸಿದ್ದ ಮುದಗಲ್ ಕಲ್ಯಾಣಾಶ್ರಮದ ಮಹಾಂತ ಸ್ವಾಮೀಜಿ ಮಾತನಾಡಿ, ‘ಲಿಂಗಣ್ಣ ಅವರು ಇಳಕಲ್‌ ಮಹಾಂತ ಅಪ್ಪಗಳ ಅನುಯಾಯಿಯಾಗಿದ್ದರು. ಹಲವು ಬಾರಿ ಇಳಕಲ್‌ಗೆ ಬಂದಾಗ ಅವರೊಂದಿಗೇ ನಾನೇ ಇರುತ್ತಿದ್ದೆ. ಇಳಕಲ್ ಶ್ರೀಗಳು ಸತ್ಯಂಪೇಟೆವರೆಗೆ ಎರಡು ಬಾರಿ ಪಾದಯಾತ್ರೆ ಮಾಡಿದ್ದರು. ಹಾದಿಯಲ್ಲಿ ಶರಣತತ್ವದ ಬಗ್ಗೆ ಪ್ರಚಾರ ಮಾಡಿದ್ದರು. ಸಿಂಧನೂರು ಕಡೆ ಲಿಂಗಣ್ಣ ಅವರು ಬಂದಾಗ ಕಂಡ ಬಸ್ ಹತ್ತಿ ಆ ಊರಿಗೆ ಹೋಗಿ ಜನರನ್ನು ಭೇಟಿ ಮಾಡುತ್ತಿದ್ದೆವು. ಬೈಕ್‌ನಲ್ಲಿಯೂ ಹಲವು ಬಾರಿ ಗ್ರಾಮಗಳಿಗೆ ಸಂಚರಿಸಿದ್ದೇವೆ. ಲಿಂಗಣ್ಣ ಅವರು ನಿಜವಾದ ಶರಣ’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸ್ ಅಧಿಕಾರಿ ಡಾ.‌ಬಿ.ಎಸ್.ಸುಧಾಕರ್ ಅವರಿಗೆ ರಾಜ್ಯಮಟ್ಟದ ಬಸವ ಮಾರ್ಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಲಿಂಗಣ್ಣ ಅವರ ಇನ್ನೋರ್ವ ಪುತ್ರ, ಪತ್ರಕರ್ತ ಡಾ. ಶಿವರಂಜನ್ ಸತ್ಯಂಪೇಟೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸಂತೋಷ ಸತ್ಯಂಪೇಟೆ ಅವರು ಬರೆದ ಅಪ್ಪನ ಒಡನಾಟ ಕೃತಿಯನ್ನು ಹಾಗೂ ಶರಣ ಮಾರ್ಗ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಶಾಸಕ ಬಿ.ಆರ್.ಪಾಟೀಲ ಬಿಡುಗಡೆಗೊಳಿಸಿದರು. ಅಶೋಕ ದೊಡ್ಡಮನಿ ಕೃತಿ ಪರಿಚಯ ಮಾಡಿದರು.

ಬಸವ ಸಮಿತಿ ಅಧ್ಯಕ್ಷೆ ವಿಲಾಸವತಿ ಖೂಬಾ, ಸರ್ವಜ್ಞ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಚನ್ನಾರೆಡ್ಡಿ ಪಾಟೀಲ, ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಿದ್ದರಾಮ ಹೊನ್ಕಲ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಶಾಬಾದಿ ಸೇರಿದಂತೆ ಇತರರಯ ವೇದಿಕೆಯಲ್ಲಿದ್ದರು. ಸುರೇಶ ಬಡಿಗೇರ ನಿರೂಪಿಸಿದರು.

Tags

Kalaburagibook releasedBasava Marga Award
share
ವಾರ್ತಾಭಾರತಿ
ವಾರ್ತಾಭಾರತಿ
Next Story
X