Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ತಳವಾರ ಸಮುದಾಯಕ್ಕೆ...

Kalaburagi | ತಳವಾರ ಸಮುದಾಯಕ್ಕೆ ಎಸ್‌ಟಿ ಜಾತಿ ಪ್ರಮಾಣಪತ್ರ ನೀಡುವಂತೆ ಸಿಎಂಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ7 July 2026 6:14 PM IST
share
Kalaburagi | ತಳವಾರ ಸಮುದಾಯಕ್ಕೆ ಎಸ್‌ಟಿ ಜಾತಿ ಪ್ರಮಾಣಪತ್ರ ನೀಡುವಂತೆ ಸಿಎಂಗೆ ಮನವಿ

ಕಲಬುರಗಿ: ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ತಳವಾರ ಸಮುದಾಯದ ಅರ್ಹ ಫಲಾನುಭವಿಗಳಿಗೆ ಪರಿಶಿಷ್ಟ ಪಂಗಡ (ಎಸ್‌ಟಿ) ಜಾತಿ ಪ್ರಮಾಣಪತ್ರಗಳನ್ನು ತಕ್ಷಣ ವಿತರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘದ ಅಧ್ಯಕ್ಷ ಸಂತೋಷ ತಳವಾರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ಕೇಂದ್ರ ಸರ್ಕಾರವು 2020ರ ಮಾರ್ಚ್ 20ರಂದು ಹೊರಡಿಸಿದ ರಾಜ್ಯಪತ್ರ ಹಾಗೂ ಕರ್ನಾಟಕ ಸರ್ಕಾರವು 2020ರ ಮೇ 28ರಂದು ಹೊರಡಿಸಿದ ಅಧಿಸೂಚನೆಯ ಮೂಲಕ “Naikada/Nayak (including Parivar and Talawar)” ಸಮುದಾಯಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ, ರಾಜ್ಯ ಸರ್ಕಾರವು 2022ರ ಅಕ್ಟೋಬರ್ 29ರಂದು ತಳವಾರ ಜಾತಿಯನ್ನು ಹಿಂದುಳಿದ ವರ್ಗಗಳ ಪ್ರವರ್ಗ–1ರ ಪಟ್ಟಿಯಿಂದ ಕೈಬಿಟ್ಟಿರುವುದನ್ನೂ ಪ್ರಸ್ತಾಪಿಸಲಾಗಿದೆ.

ಆದರೂ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ತಳವಾರ ಸಮುದಾಯದ ಜನರಿಗೆ ಎಸ್‌ಟಿ ಜಾತಿ ಪ್ರಮಾಣಪತ್ರ ನೀಡುವಲ್ಲಿ ಅನಗತ್ಯ ವಿಳಂಬ ಮತ್ತು ಗೊಂದಲ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ.

ತಳವಾರ ಸಮುದಾಯವನ್ನು ಕೋಲಿ, ಕಬ್ಬಲಿಗ, ಅಂಬಿಗ, ಬೇಸ್ತ, ಗಂಗಾಮತ ಹಾಗೂ ಮಿನುಗಾರ ಸಮುದಾಯಗಳೊಂದಿಗೆ ಸಂಪರ್ಕಿಸುವ ಯಾವುದೇ ಅಧಿಕೃತ ದಾಖಲೆಗಳಿಲ್ಲ. ಆದರೂ ಇದೇ ಕಾರಣ ನೀಡಿ ಅಧಿಕಾರಿಗಳು ಪ್ರಮಾಣಪತ್ರ ವಿತರಣೆ ತಡೆಹಿಡಿದಿದ್ದಾರೆ ಎಂದು ದೂರಲಾಗಿದೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಲ್ಲಿದ್ದರೂ, ಅರ್ಜಿದಾರರ ದಾಖಲೆಗಳು ಹಾಗೂ ಪಂಚನಾಮೆ ವರದಿಗಳ ಆಧಾರದ ಮೇಲೆ ಜಾತಿ ಪ್ರಮಾಣಪತ್ರ ನೀಡುವುದನ್ನು ತಡೆಯುವ ಯಾವುದೇ ಆದೇಶ ಇಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಆದರೆ ಕಳೆದ ಎರಡು ವರ್ಷಗಳಿಂದ ಎಸ್‌ಟಿ ಪ್ರಮಾಣಪತ್ರ ಸಿಗದ ಕಾರಣ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ಇತರ ಅರ್ಹ ಫಲಾನುಭವಿಗಳು ಶಿಕ್ಷಣ, ಉದ್ಯೋಗ ಮತ್ತು ಸಂವಿಧಾನಬದ್ಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಲಾಗಿದೆ.

ತಳವಾರ ಜಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಿ, ಬಾಕಿ ಇರುವ ಎಸ್‌ಟಿ ಜಾತಿ ಪ್ರಮಾಣಪತ್ರಗಳನ್ನು ತ್ವರಿತವಾಗಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಲಾಗಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X