Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕ್ರೈಸ್ತ ಸಮುದಾಯದ ಬೇಡಿಕೆ...

Kalaburagi | ಕ್ರೈಸ್ತ ಸಮುದಾಯದ ಬೇಡಿಕೆ ಈಡೇರಿಕೆಗೆ ಸಚಿವ ಯು.ಟಿ.ಖಾದರ್‌ಗೆ ಮನವಿ

KCCDCL ಅನುದಾನ ಹೆಚ್ಚಳ, ಕೆಕೆ ಭಾಗದ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ನೆರವಿಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ28 Oct 2026 8:07 PM IST
share
Kalaburagi | ಕ್ರೈಸ್ತ ಸಮುದಾಯದ ಬೇಡಿಕೆ ಈಡೇರಿಕೆಗೆ ಸಚಿವ ಯು.ಟಿ.ಖಾದರ್‌ಗೆ ಮನವಿ

ಕಲಬುರಗಿ : ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮಕ್ಕೆ (KCCDCL) ಹೆಚ್ಚಿನ ಅನುದಾನ ನೀಡುವುದು ಸೇರಿದಂತೆ ಕ್ರೈಸ್ತ ಸಮುದಾಯದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಅಖಿಲ ಭಾರತ ಕ್ರಿಸ್ತ ಮಹಾಸಭಾ ಹಾಗೂ ಕರ್ನಾಟಕ ಕ್ರೈಸ್ತ ರಕ್ಷಣಾ ವೇದಿಕೆಯ ವತಿಯಿಂದ ಬುಧವಾರ ಮನವಿ ಸಲ್ಲಿಸಲಾಯಿತು.

ಕಲಬುರಗಿ ಭೇಟಿಯ ಸಂದರ್ಭದಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ ನಿಯೋಗ, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ KCCDCL ಕಚೇರಿ ಸ್ಥಾಪಿಸಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಸುಲಭವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿತು.

ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿರುವ ಕ್ರೈಸ್ತ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅಭಿವೃದ್ಧಿ ಅನುದಾನ ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಭಾಗದ ಕ್ರೈಸ್ತ ಶಿಕ್ಷಣ ಸಂಸ್ಥೆಗಳು ಕಳೆದ 125 ವರ್ಷಗಳಿಂದ ಬಡವರು ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿವೆ. ಈ ಸಂಸ್ಥೆಗಳ ಸೇವೆಯನ್ನು ಪರಿಗಣಿಸಿ, ಅವುಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ನೆರವು ಒದಗಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.

ಇದಲ್ಲದೆ, ಕರ್ನಾಟಕ ಸರ್ಕಾರದ ವತಿಯಿಂದ ಕ್ರಿಸ್ಮಸ್ ಹಬ್ಬವನ್ನು ರಾಜ್ಯಮಟ್ಟದಲ್ಲಿ ಆಚರಿಸಬೇಕು. ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ 2025ರಿಂದ ಬಾಕಿ ಉಳಿದಿರುವ ಅರ್ಜಿಗಳು ಹಾಗೂ ಪ್ರಸ್ತಾವನೆಗಳನ್ನು ತಕ್ಷಣ ಪರಿಶೀಲಿಸಿ ಅನುಮೋದನೆ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಸಮುದಾಯದ ಬಹುದಿನಗಳ ಬೇಡಿಕೆಗಳನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಗಣಿಸಲಿದೆ ಎಂಬ ವಿಶ್ವಾಸವನ್ನು ನಿಯೋಗ ವ್ಯಕ್ತಪಡಿಸಿತು. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಹಾಗೂ ಕ್ರೈಸ್ತ ಸಮುದಾಯದ ಕಲ್ಯಾಣಕ್ಕಾಗಿ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿತು.

ಈ ಸಂದರ್ಭದಲ್ಲಿ ಫಾದರ್ ಸ್ಟ್ಯಾನ್ಲಿ ಲೋಬೂ, ಡಾ. ಕಿರಣ್ ಜಾರ್ಜ್, ಸ್ಯಾಂಡ್ಯರಾಜ್ ಸ್ಯಾಮುಯೆಲ್, ಲೂಯಿಸ್ ಕೋರಿ, ಗೊಂಡೇಶ್, ಪಾಸ್ಟರ್ ಮಣಿ ಸೇರಿದಂತೆ ಬೀದರ್ ಹಾಗೂ ಇತರ ಜಿಲ್ಲೆಗಳಿಂದ ಆಗಮಿಸಿದ್ದ ಪಾದ್ರಿಗಳು, ಕ್ರೈಸ್ತ ಮುಖಂಡರು ಮತ್ತು ಸಮುದಾಯದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Tags

Christian communityU.T.KhaderKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X