Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಾಡಿ ಮಾರುಕಟ್ಟೆಯಲ್ಲಿ...

ಕಲಬುರಗಿ | ವಾಡಿ ಮಾರುಕಟ್ಟೆಯಲ್ಲಿ ಶೌಚಾಲಯ ಸೌಲಭ್ಯ ಒದಗಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ21 Aug 2025 10:31 PM IST
share
ಕಲಬುರಗಿ | ವಾಡಿ ಮಾರುಕಟ್ಟೆಯಲ್ಲಿ ಶೌಚಾಲಯ ಸೌಲಭ್ಯ ಒದಗಿಸಲು ಮನವಿ

ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದ ಬೀದಿಗಳಲ್ಲಿ ಪ್ರತಿ ಗುರುವಾರ ವಾರದ ಸಂತೆ ನಡೆದುಕೊಂಡು ಬರುತ್ತಿದ್ದು, ತರಕಾರಿ ಮಾರಲು ಸೂಕ್ತ ಜಾಗವಿಲ್ಲದೆ ವ್ಯಾಪಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ವಾರದ ಸಂತೆ ಸುಗಮವಾಗಿ ಸಾಗಲು ಸೂಕ್ತವಾದ ಮಾರುಕಟ್ಟೆ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‍ಯುಸಿಐ) ಕಮ್ಯುನಿಸ್ಟ್ ಪಕ್ಷ ಆಗ್ರಹಿಸಿದೆ.

ಈ ಕುರಿತು ಗುರುವಾರ ಸ್ಥಳೀಯ ಪುರಸಭೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿರುವ ಎಸ್‍ಯುಸಿಐ (ಕಮ್ಯುನಿಸ್ಟ್) ನಾಯಕರು, ಅಧಿಕೃತ ಸಂತೆ ಮಾಳ ನಿರ್ಮಿಸುವಂತೆ ಒತ್ತಾಯ ಮಾಡಿದ್ದಾರೆ.

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಬೆಳೆಯುತ್ತಿರುವ ನಗರವಾಗಿದೆ. ಇಂಗಳಗಿ, ಕುಂದನೂರ, ಬಳವಡಗಿ, ಕೊಂಚೂರ, ಹಲಕರಟಿ, ಕಮರವಾಡಿ, ಸೂಲಹಳ್ಳಿ, ರಾಮನಗರ ತಾಂಡಾ, ಮೌಳಿ ತಾಂಡಾ, ಕಡಬೂರ, ಚಾಮನೂರ, ಕೈಲಾಸ ನಗರ, ಲಕ್ಷ್ಮೀಪುರವಾಡಿ ಗ್ರಾಮಸ್ಥರ ಮಾರುಕಟ್ಟೆ ಕೇಂದ್ರ ಸ್ಥಾನವಾಗಿದೆ. ಎಲ್ಲಾ ರೀತಿಯ ಅಗತ್ಯ ವಸ್ತುಗಳ ಖರೀದಿಗೆ ವಾಡಿ ಪಟ್ಟಣದ ಮಾರುಕಟ್ಟೆಯನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಇಲ್ಲಿ ಗುರುವಾರ ದೊಡ್ಡ ಸಂತೆ ನಡೆಯುತ್ತದೆ. ಆದರೆ ಸಂತೆ ನಡೆಯಲು ಸೂಕ್ತವಾದ ಜಾಗದ ಕೊರತೆಯಿದೆ. ಇಕ್ಕಟ್ಟಾದ ಗಲ್ಲಿ ರಸ್ತೆಗಳಲ್ಲಿ ಸಂತೆ ನಡೆಯುತ್ತಿರುವುದರಿಂದ ಗ್ರಾಹಕರು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾದ ಪರಸ್ಥಿತಿಯಿದೆ ಎಂದು ವಿವರಿಸಿದ್ದಾರೆ.

ವಿವಿಧ ಗ್ರಾಮಗಳಿಂದ ತರಕಾರಿ ವ್ಯಾಪಾರಕ್ಕೆ ಬರುವ ನೂರಾರು ಜನ ವ್ಯಾಪಾರಿಗಳು ಮೂಲಭೂತ ಸೌಕರ್ಯದಿಂದ ವಂಚಿತಗೊಂಡಿದ್ದಾರೆ. ವಿಶೇಷವಾಗಿ ಮಹಿಳಾ ವ್ಯಾಪಾರಿಗಳು ಬೆಳಗ್ಗೆಯಿಂದ ಸಂಜೆ ವರೆಗೆ ಮಲಮೂತ್ರ ವಿಸರ್ಜನೆ ತಡೆದುಕೊಂಡು ಹಿಂಸಿ ಅನುಭವಿಸುತ್ತಿದ್ದಾರೆ. ಪಟ್ಟಣದ ಯಾವೂದೇ ಸ್ಥಳದಲ್ಲಿ ಸಾರ್ವಜನಿಕ ಮೂತ್ರಾಲಯಗಳು ನಿರ್ಮಿಸಿಲ್ಲ. ಪುರಸಭೆ ಆಡಳಿತ ಜಾರಿಯಾಗಿ ಮೂವತ್ತು ವರ್ಷಗಳು ಕಳೆದರೂ ಸುಲಭ ಶೌಚಾಲಯ ವ್ಯವಸ್ಥೆ ಕಲ್ಪಿಸುವಲ್ಲಿ ಪುರಸಭೆ ಆಡಳಿತ ವಿಫಲವಾಗಿದೆ. ಅಲ್ಲದೆ ವಾರದ ಸಂತೆಗೆ ಬರುವ ಗ್ರಾಮೀಣ ಭಾಗದ ತರಕಾರಿ ವ್ಯಾಪಾರಿಗಳನ್ನು ಪುರಸಭೆ ಸಿಬ್ಬಂದಿಗಳೇ ಒಕ್ಕಲೆಬ್ಬಿಸಿ ದೌರ್ಜನ್ಯ ಎಸಗುತ್ತಿದ್ದು, ಇದು ನಿಲ್ಲಬೇಕು. ರಸ್ತೆಗಳನ್ನು ಅತಿಕ್ರಮಿಸಿ ಕೆಲವರು ವ್ಯಾಪಾರ ಮಾಡುತ್ತಿದ್ದು, ಕೊಳೆತ ಹಣ್ಣು ಮಾರುವ ಮೂಲಕ ಗ್ರಾಹಕರಿಗೆ ಮೋಸ ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು. ಆದಷ್ಟು ಬೇಗ ಅಗತ್ಯ ಸೌಲಭ್ಯಗಳಿರುವ ಮಾರುಕಟ್ಟೆ ನಿರ್ಮಿಸಬೇಕು. ಅಲ್ಲಿವರೆಗೆ ವ್ಯಾಪಾರಿಗಳಿಗೆ ಸ್ಥಳ ನಿಗದಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಧಿಕಾರಿಗಳು ಈ ಬೇಡಿಕೆಗಳನ್ನು ಈಡೇರಿಸಲು ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಎಸ್‍ಯುಸಿಐ ವಾಡಿ ನಗರ ಸಮಿತಿ ಕಾರ್ಯದರ್ಶಿ ಶರಣು ಹೇರೂರ ಎಚ್ಚರಿಕೆ ನೀಡಿದ್ದಾರೆ.

ಮುಖಂಡರಾದ ರಾಜು ಒಡೆಯರಾಜ್, ಚಂದ್ರಕಾಂತ ಪಗಲಾಪುರ, ಶ್ರೀಶೈಲ ಕೆಂಚಗುಂಡಿ ಸೇರಿದಂತೆ ಇತರರು ನಿಯೋಗದಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X