Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ನೀಟ್ ಅಕ್ರಮದ...

Kalaburagi | ನೀಟ್ ಅಕ್ರಮದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ರಾಷ್ಟ್ರಪತಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ21 July 2026 6:34 PM IST
share
Kalaburagi | ನೀಟ್ ಅಕ್ರಮದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ರಾಷ್ಟ್ರಪತಿಗೆ ಮನವಿ

ಕಲಬುರಗಿ: ನವದೆಹಲಿಯಲ್ಲಿ ನೀಟ್ (NEET) ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ, ಪ್ರಕರಣದ ನಿಷ್ಪಕ್ಷಪಾತ ತನಿಖೆ ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸಂವಿಧಾನ ರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಸಮಿತಿಯ ಮುಖಂಡರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಕಳೆದ ಒಂದು ತಿಂಗಳಿನಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಪ್ರಯೋಗ, ಲಾಠಿಚಾರ್ಜ್ ಹಾಗೂ ಪೊಲೀಸ್ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ದಮನಿಸುವ ಪ್ರಯತ್ನ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತದ್ದು ಎಂದು ಅಭಿಪ್ರಾಯಪಟ್ಟರು.

ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ಬಗ್ಗೆ ಹಲವು ವರ್ಷಗಳಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಪ್ರಕರಣಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿದ್ದು, ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೂ ಧಕ್ಕೆಯಾಗಿದೆ ಎಂದು ತಿಳಿಸಿದರು.

ಪ್ರತಿಭಟನೆಯ ವೇಳೆ ನಡೆದ ಘಟನೆಗಳ ಕುರಿತು ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ, ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ನೀಟ್ ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಆರೋಪಗಳ ಕುರಿತು ಸ್ವತಂತ್ರ ತನಿಖೆಗೆ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಲಚ್ಚಪ್ಪ ಜಮಾದಾರ, ಸುನೀಲ ಮಾರುತಿ ಮಾನಪಡೆ, ಶಾಂತಪ್ಪ ಪಾಟೀಲ, ಚಂದು ಜಾಧವ, ಸೋಮಶೇಖರ ಸಿಂಗೆ, ನಾಮದೇವ ರಾಠೋಡ, ಮೈಲಾರಿ ದೊಡ್ಡಮನಿ, ವಿಕಾಸ್ ಹಾಗರಗಿ, ದಶರಥ ಕುಸುನೂರ, ಸಂಗಮೇಶ ಕಲಬುರಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

NEETKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X