ಕಲಬುರಗಿ | ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ : 2025-26ನೇ ಸಾಲಿನಲ್ಲಿ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಆಂಗ್ಲ ಮಾಧ್ಯಮ ದಾಖಲಾತಿಗಾಗಿ ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಡಯಟ್) ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು/ ಉಪನಿರ್ದೇಶಕರು ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು www.schooleducation.karnataka.gov.in ಮತ್ತು www.vidyavahini.karnataka.gov.in ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ತಮ್ಮ ಹತ್ತಿರದ ಆದರ್ಶ ವಿದ್ಯಾಲಯಗಳಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಫೆ.28 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಡಯಟ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಕಚೇರಿಗೆ ಕಚೇರಿ ಸಮಯದಲ್ಲಿ ಅಥವಾ ದೂರವಾಣಿ ಸಂಖ್ಯೆ: 9448999370,9448891812 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
Next Story







