Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸರಕಾರಿ...

Kalaburagi | ಸರಕಾರಿ ಮಹಾವಿದ್ಯಾಲಯದಲ್ಲಿ ಪಿಜಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ11 July 2026 6:54 PM IST
share
Kalaburagi | ಸರಕಾರಿ ಮಹಾವಿದ್ಯಾಲಯದಲ್ಲಿ ಪಿಜಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಜು.2ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ; ಆ.11 ಕೊನೆಯ ದಿನ

ಕಲಬುರಗಿ, ಜು.12: ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ (ಪಿಜಿ) ಕೋರ್ಸುಗಳ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯೆ ಡಾ. ಸವಿತಾ ತಿವಾರಿ ಹಾಗೂ ಪಿಜಿ ವಿಭಾಗದ ಡೀನ್ ಡಾ. ಮಲ್ಲೇಶಪ್ಪ ಕುಂಬಾರ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜಿನಲ್ಲಿ ಎಂ.ಎ. ಕನ್ನಡ, ಇಂಗ್ಲಿಷ್, ಹಿಂದಿ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ ಹಾಗೂ ಸಮಾಜಶಾಸ್ತ್ರ, ಎಂ.ಎಸ್‌ಸಿ. ಭೌತಶಾಸ್ತ್ರ, ಗಣಿತ, ಗಣಕ ವಿಜ್ಞಾನ, ಪ್ರಾಣಿಶಾಸ್ತ್ರ ಮತ್ತು ಸೂಕ್ಷ್ಮಜೀವಶಾಸ್ತ್ರ ಸೇರಿದಂತೆ ವಿವಿಧ ಸ್ನಾತಕೋತ್ತರ ಕೋರ್ಸುಗಳು ಲಭ್ಯವಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಆನ್‌ಲೈನ್ ಅರ್ಜಿ ಸಲ್ಲಿಕೆ ಜುಲೈ 12ರಿಂದ ಆರಂಭವಾಗಲಿದ್ದು, ಆಗಸ್ಟ್ 11 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಿದ ನಂತರ ಅದರ ಮುದ್ರಿತ ಪ್ರತಿಯನ್ನು ಅಗತ್ಯ ದಾಖಲೆಗಳ ದೃಢೀಕೃತ ಪ್ರತಿಗಳೊಂದಿಗೆ ಆಗಸ್ಟ್ 14ರೊಳಗೆ ಕಾಲೇಜಿನ ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

1932ರಲ್ಲಿ ಸ್ಥಾಪನೆಯಾದ ಸರ್ಕಾರಿ ಮಹಾವಿದ್ಯಾಲಯವು ಕಲ್ಯಾಣ ಕರ್ನಾಟಕ ಭಾಗದ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಯುಜಿಸಿ ಸ್ವಾಯತ್ತ ಸ್ಥಾನಮಾನ ಹಾಗೂ ನ್ಯಾಕ್‌ನಿಂದ ‘ಬಿ+’ ಮರುಮಾನ್ಯತೆ ಪಡೆದಿರುವ ಈ ಕಾಲೇಜು ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಉನ್ನತ ಶಿಕ್ಷಣ ನೀಡುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಹೇಳಿದರು.

ಕಾಲೇಜಿನಲ್ಲಿ ಅನುಭವಿ ಪೂರ್ಣಕಾಲಿಕ ಅಧ್ಯಾಪಕರ ಬಳಗ, ಸುಸಜ್ಜಿತ ತರಗತಿ ಕೊಠಡಿಗಳು ಮತ್ತು ಪ್ರಯೋಗಾಲಯಗಳು, ಆಧುನಿಕ ಗ್ರಂಥಾಲಯ, ಇ-ಸಂಪನ್ಮೂಲಗಳು, ಕೈಗೆಟಕುವ ಶುಲ್ಕ ವ್ಯವಸ್ಥೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಇಡಬ್ಲ್ಯುಎಸ್ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ, ವಿವಿಧ ಸರ್ಕಾರಿ ವಿದ್ಯಾರ್ಥಿವೇತನಗಳು, ಉದ್ಯೋಗ ಮಾರ್ಗದರ್ಶನ, ಉದ್ಯೋಗ ಮೇಳಗಳು, ವಿಶೇಷ ಉಪನ್ಯಾಸಗಳು, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಹಾಗೂ ಎನ್‌ಸಿಸಿ ಸೌಲಭ್ಯಗಳು ಲಭ್ಯವಿವೆ ಎಂದು ವಿವರಿಸಿದರು.

ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು. ಪ್ರವೇಶ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಪ್ರವೇಶ ಸಮಿತಿಯ ಅಧ್ಯಕ್ಷ ಡಾ. ರಾಮಕೃಷ್ಣ ಬಿ. (9480272477), ಸದಸ್ಯರಾದ ಡಾ. ನಾಗಪ್ಪ ಗೋಗಿ (9686153485), ಡಾ. ರವೀಂದ್ರ ಕುಮಾರ್ ಭಂಡಾರಿ (8123708365), ಡಾ. ಅಜ್ರಾ ಪರವೀನ್ (9972724313) ಹಾಗೂ ಡಾ. ಸವಿತಾ ಪಾಟೀಲ (9481540621) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X