ಕಲಬುರಗಿ | ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಈ ಕೆಳಕಂಡ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಶ್ರಮ ಶಕ್ತಿ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ವಿದೇಶಿ ವ್ಯಾಸಂಗ ಸಾಲ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ಸಾಂತ್ವನ ಯೋಜನೆ, ವ್ಯಾಪಾರ/ಉದ್ಯಮಿಗಳಿಗೆ ನೇರ ಸಾಲ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. ಒಳಗಿರಬೇಕು. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು. ಅರ್ಹ ಅಭ್ಯರ್ಥಿಗಳು www.kmdconline.karnataka.gov.in ವೆಬ್‍ಸೈಟ್ ನಲ್ಲಿ ಆನ್‍ಲೈನ್ ಮೂಲಕ 2025ರ ಅ.16 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ (ನಿ), ಎಸ್.ಆರ್. ರೆಸಿಡೆನ್ಸಿ, ಫ್ಲಾಟ್ ಸಂಖ್ಯೆ 1881, ಒಂದನೇ ಮಹಡಿ, ಎಲ್.ಎಸ್. ರಾಟ್ಸಿ ಆಸ್ಪತ್ರೆ ಎದುರು, ಹಳೆಯ ಜೇವರ್ಗಿ ರಸ್ತೆ, ಕಲಬುರಗಿ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ.







