Kalaburagi | ಖಾಲಿ ಉಳಿದ ಡಿಪ್ಲೋಮಾ ಕೋರ್ಸುಗಳಿಗೆ ಆಫ್‍ಲೈನ್ ಮೂಲಕ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ: 2026-27ನೇ ಶೈಕ್ಷಣಿಕ ಸಾಲಿನಲ್ಲಿ ಕಲಬುರಗಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಪ್ರಥಮ ಸೆಮಿಸ್ಟರ್‌ನಲ್ಲಿ ಭರ್ತಿಯಾಗದೇ ಖಾಲಿ ಉಳಿದಿರುವ ಸೀಟುಗಳಿಗೆ ಪ್ರವೇಶ ಪಡೆಯಲು ಎಸ್‌ಎಸ್‌ಎಲ್‌ಸಿ ಹಾಗೂ ಸಿಬಿಎಸ್‌ಇ ಉತ್ತೀರ್ಣ ವಿದ್ಯಾರ್ಥಿನಿಯರಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಹಾಗೂ ಕಮರ್ಷಿಯಲ್ ಪ್ರಾಕ್ಟೀಸ್ (ಆಂಗ್ಲ) ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದಾಗಿದೆ.
ಅರ್ಹ ವಿದ್ಯಾರ್ಥಿನಿಯರು ಪ್ರವೇಶ ಅರ್ಜಿಯನ್ನು ಸಂಸ್ಥೆಯಿಂದ ಅಥವಾ ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ಜಿರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಆಗಸ್ಟ್ 31, 2026ರೊಳಗಾಗಿ ಕಲಬುರಗಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಸಲ್ಲಿಸಬೇಕು. ನಿಗದಿತ ಶುಲ್ಕ ಪಾವತಿಸಿ ಪ್ರವೇಶ ಪಡೆಯಬಹುದಾಗಿದೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯ ರಾಘವೇಂದ್ರ ಪಿ. ಅವರನ್ನು 9945350274, ಹಿರಿಯ ಶ್ರೇಣಿ ಉಪನ್ಯಾಸಕ ಮಡಿವಾಳಪ್ಪ ಬಿ. ಅವರನ್ನು 9449534169, ಕುಲಸಚಿವ ಶರಣಬಸಪ್ಪ ಹಾಲ್ವಿ ಅವರನ್ನು 9880874609 ಹಾಗೂ ಕಚೇರಿ ಅಧೀಕ್ಷಕ ಪರಶುರಾಮ ಸಂಗಟ್ಟಿ ಅವರನ್ನು 9008065554 ಸಂಖ್ಯೆಯಲ್ಲಿ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.






