Kalaburagi | ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಸ್ಥಾಪಿಸುತ್ತಿರುವ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಈ ಕೆಳಕಂಡ 6 ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಅವರು ತಿಳಿಸಿದ್ದಾರೆ.
ಕ್ಯುರೇಟರ್ (Curator)--1 ಹುದ್ದೆ, ಶೈಕ್ಷಣಿಕ ಸಹಾಯಕರು (Education Assistant)-2 ಹುದ್ದೆ, ತಾಂತ್ರಿಕ ಸಹಾಯಕರು (Technical Assistant)--1 ಹುದ್ದೆ, ಟೆಕ್ನಿಷಿಯನ್ (Technician)-1 ಹುದ್ದೆ ಹಾಗೂ ದ್ವಿತೀಯ ದರ್ಜೆ ಸಹಾಯಕರು (Second Division Assistant)--1 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮೇಲ್ಕಂಡ ಎಲ್ಲಾ ನೇಮಕಾತಿಯು ತಾತ್ಕಾಲಿಕ ಆಧಾರದ ಮೇಲೆ ನಡೆಯಲಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಸ್ವವಿವರ ಮತ್ತು ಎಲ್ಲಾ ಅಗತ್ಯ ದಾಖಲೆಗಳ ದೃಢೀಕೃತ ಪ್ರತಿಗಳೊಂದಿಗೆ ಅರ್ಜಿಯನ್ನು ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಚಂದ್ರಶೇಖರ ಕ್ರೀಡಾಂಗಣ ರಾಜಪೂರ ರಸ್ತೆ, ಕಲಬುರಗಿ-585102 ವಿಳಾಸಕ್ಕೆ ನೇರವಾಗಿ ಕಚೇರಿಗೆ ಭೇಟಿ ನೀಡಿ ಅಥವಾ ನೋಂದಾಯಿತ ಅಂಚೆ (Registered Post) ಮೂಲಕ 2026ರ ಜೂ.30 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ವಿದ್ಯಾರ್ಹತೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448999341, 9880804797, 9019373747 (ಕಚೇರಿ ಅವಧಿಯಲ್ಲಿ) ಗೆ ಸಂಪರ್ಕಿಸಲು ಕೋರಲಾಗಿದೆ.






