Kalaburagi | ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಹಾಗೂ ಗಮಕ ಸೇರಿದಂತೆ ಆರು ಕಲಾ ಪ್ರಕಾರಗಳಲ್ಲಿ ಅಭ್ಯಾಸ ಮಾಡುತ್ತಿರುವ 16ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳಿಂದ 2026-27ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಶಿಷ್ಯವೇತನಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೊಬೈಲ್/ವಿಡಿಯೋ ಚಿತ್ರೀಕರಣದ ಮೂಲಕ ನಡೆಸಲು ನಿರ್ಧರಿಸಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಯನ್ನು ಅಕಾಡೆಮಿಯ ಫೇಸ್‌ಬುಕ್ ಪುಟ, ವೆಬ್‌ಸೈಟ್ ಅಥವಾ ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು.
ಅಭ್ಯರ್ಥಿಗಳು ಅರ್ಜಿಯಲ್ಲಿ ಸೂಚಿಸಿರುವ ಪಠ್ಯಕ್ರಮವನ್ನು ಮೊಬೈಲ್ ಅಥವಾ ವಿಡಿಯೋ ಮೂಲಕ ಚಿತ್ರೀಕರಿಸಿ, ಅದನ್ನು ಪೆನ್‌ಡ್ರೈವ್‌ನಲ್ಲಿ ಸಂಗ್ರಹಿಸಬೇಕು. ಅರ್ಜಿಯೊಂದಿಗೆ ಪೆನ್‌ಡ್ರೈವ್ ಅನ್ನು 2026ರ ಸೆಪ್ಟೆಂಬರ್ 15ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು–560002 ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.
ಸ್ವೀಕರಿಸಲಾದ ಅರ್ಜಿಗಳೊಂದಿಗೆ ಅಭ್ಯರ್ಥಿಗಳು ಕಳುಹಿಸಿರುವ ವಿಡಿಯೋಗಳನ್ನು ಆಯಾ ಕಲಾ ಪ್ರಕಾರಕ್ಕೆ ಅನುಗುಣವಾಗಿ ತೀರ್ಪುಗಾರರು ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳನ್ನು ಶಿಷ್ಯವೇತನಕ್ಕೆ ಆಯ್ಕೆ ಮಾಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.






