ಕಲಬುರಗಿ | ಜಿಲ್ಲಾಮಟ್ಟದ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕರ್ನಾಟಕ ಪರಿಶಿಷ್ಟ ಪಂಗಡಗಳ ಮೇದಾರ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸರ್ಕಾರ ಜಾರಿಗೆ ತರುವ ಯೋಜನೆಗಳ ಅನುಷ್ಠಾನಕ್ಕೆ ಜಿಲ್ಲಾಮಟ್ಟದ ಸಮಿತಿಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿಕೊಳ್ಳಲು ಅರ್ಹರಿಂದ ಜಿಲ್ಲೆಯ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಕ್ಕೆ ಸೇರಿದ ಮತ್ತು ಸದರಿ ಸಮುದಾಯಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಿರುವ ಹಾಗೂ ಗುರುತಿಸಿಕೊಂಡಿರುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಕಲಬುರಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಕಾರ್ಯದರ್ಶಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೆಶಕರ ಕಚೇರಿಯಿಂದ ಅಥವಾ ಆಯಾ ಎಲ್ಲಾ ತಾಲೂಕುಗಳ ಸಹಾಯಕ ನಿರ್ದೇಶಕರು (ಗ್ರೇಡ್-I/II) ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಿಂದ ಪಡೆದು 2025ರ ಜುಲೈ 18 ರಂದು ಸಾಯಂಕಾಲ 5 ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೆಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278621ಗೆ ಸಂಪರ್ಕಿಸಲು ಕೋರಲಾಗಿದೆ.





