Kalaburagi | ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ : ಚಿತ್ತಾಪುರ ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 5 ಅಂಗನವಾಡಿ ಕಾರ್ಯಕರ್ತೆಯರ ಮತ್ತು 39 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಒಂದು ಬಾರಿಗೆ ಭೌತಿಕವಾಗಿ (ಆಫ್‍ಲೈನ್) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ಅರ್ಹ ಮಹಿಳಾ ಅಭ್ಯರ್ಥಿಗಳು 2026ರ ಜು.1 ರಿಂದ 30 ರೊಳಗಾಗಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಚಿತ್ತಾಪೂರ ತಹಶೀಲ್ದಾರ್ ಕಚೇರಿ ಹಿಂದುಗಡೆ, ಎಸ್.ಬಿ.ಐ. ಬ್ಯಾಂಕ್ ಹತ್ತಿರ ಚಿತ್ತಾಪುರ-585211 ವಿಳಾಸಕ್ಕೆ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08474-236393ಗೆ ಸಂಪರ್ಕಿಸಲು ಕೋರಲಾಗಿದೆ.
Next Story




