ಕಲಬುರಗಿ | ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನಲ್ಲಿ ದಿನಾಂಕ: 07-10-2025 ರಂದು ಜರುಗುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ಅವರು ತಿಳಿಸಿದ್ದಾರೆ.
ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅರ್ಹ ವ್ಯಕ್ತಿಗಳು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2025ರ ಸೆ.10 ರೊಳಗಾಗಿ ಕಚೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನ ಸೌಧ ಎದರುಗಡೆಯಿರುವ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಗೆ ಸಂಪರ್ಕಿಸಲು ಕೋರಲಾಗಿದೆ.







