Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮೂರು ಹೊಸ ಕಲ್ಲು ಗಣಿಗಾರಿಕೆಯ...

ಕಲಬುರಗಿ | ಮೂರು ಹೊಸ ಕಲ್ಲು ಗಣಿಗಾರಿಕೆಯ ಲೈಸೆನ್ಸ್ ಗೆ ಒಪ್ಪಿಗೆ : ಬಿ.ಫೌಝಿಯಾ ತರನ್ನುಮ್

ವಾರ್ತಾಭಾರತಿವಾರ್ತಾಭಾರತಿ26 Sept 2025 3:21 PM IST
share
ಕಲಬುರಗಿ | ಮೂರು ಹೊಸ ಕಲ್ಲು ಗಣಿಗಾರಿಕೆಯ ಲೈಸೆನ್ಸ್ ಗೆ ಒಪ್ಪಿಗೆ : ಬಿ.ಫೌಝಿಯಾ ತರನ್ನುಮ್

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ (ಗಣಿ) ಹಾಗೂ ಜಿಲ್ಲಾ ಕಲ್ಲು ಪುಡಿ ಘಟಕಗಳ ಲೈಸನ್ಸ್ ನೀಡಿಕೆ ನಿಯಂತ್ರಣ ಪ್ರಾಧಿಕಾರದ ಸಭೆಯಲ್ಲಿ ಕಲಬುರಗಿ, ಕಾಳಗಿ, ಕಮಲಾಪೂರ ತಾಲೂಕಿನಲ್ಲಿ ತಲಾ ಒಂದರಂತೆ ಕಲ್ಲು ಗಣಿಗಾರಿಕೆ ನಡೆಸಲು ಲೈಸೆನ್ಸ್ ನೀಡಲು ಒಪ್ಪಿಗೆ ಸೂಚಿಸಲಾಗಿದೆ.

ಕಲಬುರಗಿ ತಾಲೂಕಿನ ಭೀಮಳ್ಳಿ ಮತ್ತು ಕಮಲಾಪುರ ತಾಲೂಕಿನ ಜೀವಣಗಿಯಲ್ಲಿ ಕಟ್ಟಡ ಕಲ್ಲು ಗಣಿಗಾರಿಕೆಗೆ ಮತ್ತು ಕಾಳಗಿ ತಾಲೂಕಿನ ಹುಲುಸಗೂಡನಲ್ಲಿ ಸವಳು ಮಣ್ಣು ರಫ್ತು(ಫುಲರ್ಸ್) ಗಣಿಗಾರಿಕೆ ನಡೆಸಲು ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು-1994ರಂತೆ ಟಾಸ್ಕ್ ಪೋರ್ಸ್ ಸಮಿತಿ ಒಪ್ಪಿಗೆ ಸೂಚಿಸಿದೆ.

ಇದೇ‌ ಸಂದರ್ಭದಲ್ಲಿ ನಡೆದ ಜಿಲ್ಲಾ ಕಲ್ಲು ಪುಡಿ ಘಟಕ ನಿಯಂತ್ರಣ ಸಮಿತಿ ಸಭೆಯಲ್ಲಿ ಕಾಳಗಿ ಮತ್ತು ಕಲಬುರಗಿ ತಾಲೂಕಿನಲ್ಲಿ ತಲಾ ಒಂದು ಕ್ರಶರ್ ಯೂನಿಟ್ ಘಟಕ ಕಾರ್ಯಾರಂಭಕ್ಕೂ ಫಾರ್ಮ್-ಸಿ ಪರವಾನಿಗೆ ನೀಡಲು ಸಭೆ ಅನುಮೋದನೆ ನೀಡಿದೆ.

ಅಕ್ರಮ ಗಣಿಗಾರಿಕೆಗೆ 53.31 ಲಕ್ಷ‌ ರೂ. ದಂಡ‌ :

ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಸೋಮಶೇಖರ ಮಾತನಾಡಿ, ಪ್ರಸಕ್ತ 2025-26ನೇ ಸಾಲಿನಲ್ಲಿ ಏಪ್ರಿಲ್ ನಿಂದ ಇಲ್ಲಿಯವರೆಗೆ ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಮಾಡಿಕೊಂಡಿದಕ್ಕಾಗಿ 139 ಪ್ರಕರಣಗಳಲ್ಲಿ 53.31 ಲಕ್ಷ‌ ರೂ. ದಂಡ‌ ವಿಧಿಸಿದೆ. ಇದರಲ್ಲಿ 81 ಎಫ್.ಐ.ಆರ್ ದಾಖಲಿಸಿದ್ದು, 6 ಪ್ರಕರಣಗಳಲ್ಲಿ ಇಲಾಖೆಯ ಪಿ.ಸಿ.ಆರ್ ವರದಿ ತಯಾರಿಸಿ ಸಂಬಂಧಿಸಿದ ಜೆ.ಎಂ.ಎಪ್‌.ಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ನಿಗದಿತ ಮಾರ್ಗದಲ್ಲಿ ಸಾಗಾಣಿಕೆ ಮಾಡದೆ ನಿಯಮಾವಳಿ ಉಲ್ಲಂಘಿಸಿದಕ್ಕಾಗಿ 10 ವಾಹನಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ ಕನಿಕಾ ಸಿಕ್ರಿವಾಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಸಹಾಯಕ ಆಯುಕ್ತ ಪ್ರಭುರೆಡ್ಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪರಿಸರ ಅಧಿಕಾರಿಗಳು ಸೇರಿದಂತೆ ತಾಲೂಕಿನ ತಹಶೀಲ್ದಾರರು, ಪೊಲೀಸ್ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X