Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | 371ಜೆ ಅನುದಾನವನ್ನು...

Kalaburagi | 371ಜೆ ಅನುದಾನವನ್ನು ಸಾರ್ವಜನಿಕ ವಲಯದ ಅಭಿವೃದ್ಧಿಗೆ ಬಳಸಬೇಕು : ಕೆ.ನೀಲಾ

ವಾರ್ತಾಭಾರತಿವಾರ್ತಾಭಾರತಿ24 Sept 2026 7:44 PM IST
share
Kalaburagi | 371ಜೆ ಅನುದಾನವನ್ನು ಸಾರ್ವಜನಿಕ ವಲಯದ ಅಭಿವೃದ್ಧಿಗೆ ಬಳಸಬೇಕು : ಕೆ.ನೀಲಾ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಸಂವಿಧಾನದ 371ಜೆ ಅಡಿಯಲ್ಲಿ ದೊರೆಯುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಕೆಕೆಆರ್‌ಡಿಬಿ ನಿಧಿಯನ್ನು ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿ ಹಾಗೂ ಸಾರ್ವಜನಿಕ ವಲಯದ ಮೂಲಸೌಕರ್ಯ ಅಭಿವೃದ್ಧಿಗೆ ಪರಿಣಾಮಕಾರಿಯಾಗಿ ವಿನಿಯೋಗಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ನೀಲಾ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 371ಜೆ ಅನುಷ್ಠಾನಕ್ಕೆ ಸಂಬಂಧಿಸಿದ ಸಚಿವ ಸಂಪುಟ ಉಪಸಮಿತಿಯನ್ನು ಪುನರ್‌ರಚಿಸಿರುವುದನ್ನು ಸಮಿತಿ ಸ್ವಾಗತಿಸುತ್ತದೆ. ಕ್ಯಾಬಿನೆಟ್ ದರ್ಜೆಯ ಸಚಿವರನ್ನು ಒಳಗೊಂಡಿರುವ ಈ ಉಪಸಮಿತಿಯಿಂದ ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಪರಿಹಾರಕ್ಕೆ ಯೋಜನಾಬದ್ಧ ಹಾಗೂ ಪರಿಣಾಮಕಾರಿ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಮಾನವ ಅಭಿವೃದ್ಧಿಯನ್ನು ಕೇಂದ್ರವಾಗಿಟ್ಟುಕೊಂಡು ಸ್ಪಷ್ಟ ಕ್ರಿಯಾ ಯೋಜನೆ ರೂಪಿಸಬೇಕು. 371ಜೆ ಅನುಷ್ಠಾನ ಹಾಗೂ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸಂಬಂಧಿಸಿದ ಹಕ್ಕೊತ್ತಾಯಗಳ ಕುರಿತು ವಿವಿಧ ಸಂಘಟನೆಗಳೊಂದಿಗೆ ಸಚಿವ ಸಂಪುಟ ಉಪಸಮಿತಿ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು.

ನಗರ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನಗರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತರಬೇಕು. ಉದ್ಯೋಗಕ್ಕಾಗಿ ಬೆಂಗಳೂರಿಗೆ ಸೇರಿದಂತೆ ಇತರ ನಗರಗಳಿಗೆ ವಲಸೆ ಹೋಗುತ್ತಿರುವ ಕಾರ್ಮಿಕರಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಸೃಷ್ಟಿಸಲು ಸರ್ಕಾರ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಕಲ್ಯಾಣ ಕರ್ನಾಟಕದಿಂದ ಬೆಂಗಳೂರಿಗೆ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಕಾರ್ಮಿಕರಿಗೆ ರೈಲುಗಳಲ್ಲಿ ಹೆಚ್ಚಿನ ದಟ್ಟಣೆ ಸಮಸ್ಯೆಯಾಗಿದ್ದು, ಮುಂಬೈ–ಬೆಂಗಳೂರು ಮಾರ್ಗದಲ್ಲಿ ಕನಿಷ್ಠ ಎರಡು ಹೆಚ್ಚುವರಿ ರೈಲುಗಳನ್ನು ಆರಂಭಿಸಬೇಕು. ಕಡಿಮೆ ದರದಲ್ಲಿ ಸಾಮಾನ್ಯ ಬೋಗಿಗಳ ವ್ಯವಸ್ಥೆ ಕಲ್ಪಿಸಿ ರೈಲು ಸೇವೆಯನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಕೆಕೆಆರ್‌ಡಿಬಿ ನಿಧಿಯನ್ನು ಖಾಸಗಿ ಸಂಸ್ಥೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀಡುವ ಬದಲು ಸರ್ಕಾರಿ ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಬಳಸಬೇಕು. ಈ ಭಾಗದ ಜನರ ತಲಾ ಆದಾಯ ಹೆಚ್ಚಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮುಂದಿನ ಒಂದು ವಾರದಲ್ಲಿ ಕಲ್ಯಾಣ ಕರ್ನಾಟಕದ 41 ಶಾಸಕರು ಹಾಗೂ ಸಚಿವರಿಗೆ ಮನವಿ ಸಲ್ಲಿಸಲಾಗುವುದು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ 371ಜೆ ಮತ್ತು ಕಲ್ಯಾಣ ಕರ್ನಾಟಕದ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲು ನವೆಂಬರ್‌ನಲ್ಲಿ ಕಲ್ಯಾಣ ಕರ್ನಾಟಕದಾದ್ಯಂತ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಮಿತಿಯ ಜಿಲ್ಲಾಧ್ಯಕ್ಷೆ ಮೀನಾಕ್ಷಿ ಬಾಳಿ ಮಾತನಾಡಿ, ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಅಪೌಷ್ಟಿಕತೆ, ಬಾಲ್ಯವಿವಾಹ ಹಾಗೂ ಶಿಕ್ಷಕರ ಕೊರತೆ ಸೇರಿದಂತೆ ಹಲವು ಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಸರ್ಕಾರ ಈ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಅರ್ಜುನ್ ಭದ್ರೆ, ನಾಗೇಂದ್ರ ಥಂಬೆ, ಸುಧಾಮ ಧನ್ನಿ ಹಾಗೂ ಮಹೇಶ್ ಎಸ್.ಬಿ. ಉಪಸ್ಥಿತರಿದ್ದರು.

Tags

K.NeelaArticle 371(J)Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X