Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | 371(ಜೆ) ವಿಶೇಷ...

Kalaburagi | 371(ಜೆ) ವಿಶೇಷ ಸ್ಥಾನಮಾನ: ಅನುಷ್ಠಾನ ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ29 Aug 2026 9:35 PM IST
share
Kalaburagi | 371(ಜೆ) ವಿಶೇಷ ಸ್ಥಾನಮಾನ: ಅನುಷ್ಠಾನ ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ರಚನೆ

ಕಲಬುರಗಿ: ಸಂವಿಧಾನದ ಅನುಚ್ಛೇದ 371(ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ದೊರೆತಿರುವ ವಿಶೇಷ ಸ್ಥಾನಮಾನದ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ವಿವಿಧ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲಿಸಲು ರಾಜ್ಯ ಸರ್ಕಾರ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿದೆ.

ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉಪಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಹಾಗೂ ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್ ಅವರನ್ನು ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ.

ಶಿಕ್ಷಣ, ಉದ್ಯೋಗ, ಅಭಿವೃದ್ಧಿ ಯೋಜನೆಗಳ ಪರಿಶೀಲನೆ :

371(ಜೆ) ವಿಶೇಷ ಸ್ಥಾನಮಾನದ ಹಿನ್ನೆಲೆಯಲ್ಲಿ ಶಿಕ್ಷಣ, ಉದ್ಯೋಗ ಹಾಗೂ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಅನುಷ್ಠಾನ ಹೇಗೆ ಸಾಗುತ್ತಿದೆ ಎಂಬುದನ್ನು ಉಪಸಮಿತಿ ಪರಿಶೀಲಿಸಲಿದೆ.

ಈಗಾಗಲೇ ಹೊರಡಿಸಿರುವ ಸರ್ಕಾರಿ ಆದೇಶಗಳ ಅನುಷ್ಠಾನದ ಪ್ರಗತಿ, ಎದುರಾಗಿರುವ ಸಮಸ್ಯೆಗಳು ಹಾಗೂ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆಯೂ ಸಮಿತಿ ಪರಿಶೀಲನೆ ನಡೆಸಲಿದೆ.

ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ನಿಯಮ 13(5) ಹಾಗೂ 2025ರ ಮಾರ್ಚ್ 15ರ ಸುತ್ತೋಲೆ ಅನ್ವಯ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯು ಸಚಿವ ಸಂಪುಟ ಉಪಸಮಿತಿಗೆ ಅಗತ್ಯ ನೆರವು ನೀಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ (ಸಚಿವ ಸಂಪುಟ) ಜೆ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

Tags

Priyank KhargeArticle 371(J)Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X