ಕಲಬುರಗಿ | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಅರುಣಕುಮಾರ ಪಾಟೀಲ್ ಅಧಿಕಾರ ಸ್ವೀಕಾರ

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅರುಣಕುಮಾರ ಎಂ.ವೈ ಪಾಟೀಲ್ ಅವರು ನಗರದಲ್ಲಿರುವ ಸಂಸ್ಥೆಯ "ಸಾರಿಗೆ ಸದನ" ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಶುಭ ಕೋರಿದರು.
ಶಾಸಕರಾದ ಎಂ.ವೈ.ಪಾಟೀಲ್, ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಭೀಮರಾಯನಗುಡಿ ಕಾಡಾ ಅಧ್ಯಕ್ಷ ಬಾಬು ಹೊನ್ನನಾಯಕ್, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್, ಮಾಜಿ ಸಚಿವ ರೇವುನಾಯಕ್ ಬೆಳಮಗಿ, ಕೆ.ಕೆ.ಆರ್.ಟಿ.ಸಿ. ನಿರ್ದೇಶಕಿ ಡಾ.ಬಿ.ಸುಶೀಲಾ, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಸೇರಿದಂತೆ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿಯವರು ಉಪಸ್ಥಿತರಿದ್ದರು.





