Kalaburagi | ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ ವರ್ಗಾವಣೆ

ಸಾಹಿತ್ಯ ಆಲದಕಟ್ಟಿ
ಕಲಬುರಗಿ: ಕಲಬುರಗಿ ಕಂದಾಯ ಉಪವಿಭಾಗದ ಸಹಾಯಕ ಆಯುಕ್ತೆಯಾಗಿದ್ದ ಸಾಹಿತ್ಯ ಆಲದಕಟ್ಟಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಸರ್ಕಾರ ಹೊರಡಿಸಿರುವ ಆದೇಶದಂತೆ ಸಾಹಿತ್ಯ ಆಲದಕಟ್ಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹುದ್ದೆಗೆ ನಿಯೋಜಿಸಲಾಗಿದೆ.
ಇದೇ ವೇಳೆ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಗಿಟ್ಟೆ ಮಾಧವ ವಿಠ್ಠಲರಾವ್ ಅವರನ್ನು ಬೀದರ್ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಕ ಮಾಡಲಾಗಿದೆ.
ಸಾಹಿತ್ಯ ಆಲದಕಟ್ಟಿ ಅವರ ವರ್ಗಾವಣೆಯಿಂದ ಕಲಬುರಗಿ ಕಂದಾಯ ಉಪವಿಭಾಗದ ಸಹಾಯಕ ಆಯುಕ್ತರ ಹುದ್ದೆ ಸದ್ಯಕ್ಕೆ ಖಾಲಿಯಾಗಿದೆ. ಈ ಹುದ್ದೆಗೆ ಸರ್ಕಾರ ಇನ್ನೂ ಯಾವುದೇ ಅಧಿಕಾರಿಯನ್ನು ನೇಮಕ ಮಾಡಿಲ್ಲ. ಮುಂದಿನ ನೇಮಕಾತಿ ಕುರಿತು ಸರ್ಕಾರದ ಆದೇಶದ ನಿರೀಕ್ಷೆ ಎದುರಾಗಿದೆ.
Next Story




