Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಲ್ಯಾಣ ಕರ್ನಾಟಕ...

Kalaburagi | ಕಲ್ಯಾಣ ಕರ್ನಾಟಕ ಗುತ್ತಿಗೆದಾರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಂಘದಿಂದ ಹೋರಾಟ: ಜಗನ್ನಾಥ ಶೇಗಜಿ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ17 Nov 2026 7:39 PM IST
share
Kalaburagi | ಕಲ್ಯಾಣ ಕರ್ನಾಟಕ ಗುತ್ತಿಗೆದಾರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಂಘದಿಂದ ಹೋರಾಟ: ಜಗನ್ನಾಥ ಶೇಗಜಿ

ಕಲಬುರಗಿ: ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಗುತ್ತಿಗೆದಾರರಿಗೆ ಅನುದಾನ ಹಂಚಿಕೆ ಹಾಗೂ ಕಾಮಗಾರಿಗಳ ಬಿಲ್ ಪಾವತಿಯಲ್ಲಿ ಆಗುತ್ತಿರುವ ತಾರತಮ್ಯದ ಬಗ್ಗೆ ಸರ್ಕಾರದ ಗಮನ ಸೆಳೆಯಲು ಕಲ್ಯಾಣ ಕರ್ನಾಟಕ ಗುತ್ತಿಗೆದಾರರ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಜಗನ್ನಾಥ ಶೇಗಜಿ ಹಾಗೂ ಅಧ್ಯಕ್ಷ ಮೊಹಸಿನ್ ಪಟೇಲ್ ಅಫಜಲಪುರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಘವನ್ನು ಉದ್ಘಾಟಿಸಿದ್ದಾರೆ. ಇದೀಗ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ನೇಮಕ ಮಾಡುವ ಮೂಲಕ ಸಂಘವನ್ನು ಕ್ರಿಯಾಶೀಲಗೊಳಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಗುತ್ತಿಗೆದಾರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಪ್ರಬಲ ಧ್ವನಿ ಎತ್ತಲು ಸಂಘ ಮುಂದಾಗಿದೆ ಎಂದು ವಿವರಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯ ಕಾಮಗಾರಿಗಳಲ್ಲಿ ಶೇ.70ರಷ್ಟು ಕಾಮಗಾರಿಗಳನ್ನು ಲ್ಯಾಂಡ್ ಆರ್ಮಿ ಹಾಗೂ ನಿರ್ಮಿತಿ ಕೇಂದ್ರಕ್ಕೆ ನೀಡಲಾಗುತ್ತಿದೆ. ಇದರಿಂದ ಸ್ಥಳೀಯ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಈ ಕುರಿತು ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಗುತ್ತಿಗೆದಾರರ ರಾಜ್ಯ ಸಂಘವೂ ಸ್ಪಂದಿಸುತ್ತಿಲ್ಲ. ಅಲ್ಲದೆ, ಕೆಕೆಆರ್‌ಡಿಬಿ ಅನುದಾನದಡಿ ಕೈಗೊಂಡ ಕಾಮಗಾರಿಗಳ ಬಿಲ್ ಪಾವತಿಸುವ ವಿಚಾರದಲ್ಲಿ ಮಂಡಳಿಯ ಕಾರ್ಯದರ್ಶಿಗಳು ಥರ್ಡ್ ಪಾರ್ಟಿ ತನಿಖೆಯ ನೆಪದಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.

ಟೆಂಡರ್‌ಗಳಲ್ಲಿ ಶಾಸಕರ ಹಸ್ತಕ್ಷೇಪದ ಆರೋಪ: ಟೆಂಡರ್ ಪ್ರಕ್ರಿಯೆಗಳಲ್ಲಿ ಶೇ.70ರಷ್ಟು ಶಾಸಕರ ಹಸ್ತಕ್ಷೇಪ ಇನ್ನೂ ನಿಂತಿಲ್ಲ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಒಂದು ತಿಂಗಳೊಳಗೆ ಭೂಮಿಪೂಜೆ ನೆರವೇರಿಸಿ ಕಾಮಗಾರಿ ಆರಂಭಿಸಬೇಕೆಂಬ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶವನ್ನು ಅಧಿಕಾರಿಗಳು ಪಾಲಿಸುತ್ತಿಲ್ಲ. ವ್ಯತ್ಯಾಸದ ಜಿಎಸ್‌ಟಿಯನ್ನೂ ಪಾವತಿಸುತ್ತಿಲ್ಲ. ಜಾಗತಿಕ ಮಟ್ಟದಲ್ಲಿ ಡಾಂಬರ್ ದರ ಹೆಚ್ಚಳವಾಗಿದ್ದರೂ ಡಾಂಬರೀಕರಣ ಕಾಮಗಾರಿಗಳಿಗೆ ಪ್ರಸ್ತುತ ಮಾರುಕಟ್ಟೆ ದರ ನೀಡುತ್ತಿಲ್ಲ. ರಸ್ತೆ ನಿರ್ಮಾಣಕ್ಕೆ ಬಳಸುವ ಮುರುಮ್ ಮತ್ತು ಜಲ್ಲಿಯಂತಹ ಕಚ್ಚಾ ಸಾಮಗ್ರಿಗಳಿಗೆ ಹಣ ಪಾವತಿಸಿದ್ದರೂ ಐದು ಪಟ್ಟು ದಂಡ ವಿಧಿಸುವ ಕ್ರಮವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಹಿಂದಿನ ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಅವಧಿಯಲ್ಲಿ ‘ಕಲ್ಯಾಣ ಪಥ’ ಹೆಸರಿನಲ್ಲಿ 1,000 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಯಾವುದೇ ಹಸ್ತಕ್ಷೇಪವಿಲ್ಲದೆ, 42 ಗುತ್ತಿಗೆದಾರರಿಗೆ ಸಂಪೂರ್ಣ ಪಾರದರ್ಶಕವಾಗಿ ಟೆಂಡರ್ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಈಗ 5,000 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಟೆಂಡರ್ ಕರೆದು ಎರಡು ತಿಂಗಳು ಕಳೆದರೂ ಗುತ್ತಿಗೆದಾರರೊಂದಿಗೆ ಒಪ್ಪಂದ ಮಾಡಿಕೊಳ್ಳಲು ಬೆಂಗಳೂರಿನ ಪಿಎಂಜಿಎಸ್‌ವೈ ಮುಖ್ಯ ಎಂಜಿನಿಯರ್ ಆಸಕ್ತಿ ತೋರುತ್ತಿಲ್ಲ. ನೇರವಾಗಿ ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಕುರಿತು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ ಅವರ ಗಮನಕ್ಕೂ ತಂದಿದ್ದರೂ ತಮ್ಮ ಮನವಿಗೆ ಸ್ಪಂದನೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಕಿ ಬಿಲ್ ಪಾವತಿಗೆ ಶಾಸಕರು ಧ್ವನಿ ಎತ್ತಲಿ: ಕಲ್ಯಾಣ ಕರ್ನಾಟಕ ಭಾಗದ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಪಾವತಿಸುವಂತೆ ಈ ಭಾಗದ ಎಲ್ಲ 41 ಶಾಸಕರು ಹಾಗೂ ಸಚಿವರು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿಯೂ ಈ ಸಮಸ್ಯೆ ಕುರಿತು ಗಟ್ಟಿಯಾಗಿ ಧ್ವನಿ ಎತ್ತಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಸಿ. ನಾಯನೇಗಲಿ, ಕಾರ್ಯಾಧ್ಯಕ್ಷ ಅಶೋಕಕುಮಾರ ಜಿ.ಜೆ., ಉಪಾಧ್ಯಕ್ಷ ಆರ್.ಜಿ. ಪಟೇಲ್, ಖಜಾಂಚಿ ಚಂದ್ರಯ್ಯ ಎಂ. ದೇವಣಗಾಂವ, ಸಂಘಟನಾ ಕಾರ್ಯದರ್ಶಿ ಶರಣಪ್ಪ ಸೋಮನಾಥ ಆಲಗೂಡ, ಗುರಪ್ಪ ದುರ್ಗಪ್ಪ, ವಿರೇಶ ಕಮತರ್, ವೀರಭದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Kalyana KarnatakaContractorsKalaburagi
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X