Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಸ್‌ಐಆರ್ ಹೆಸರಿನಲ್ಲಿ...

Kalaburagi | ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರ ಹೆಸರು ಕೈಬಿಡುವ ಪ್ರಯತ್ನ: ವಿ.ಆರ್. ಸುದರ್ಶನ ಆರೋಪ

ವಾರ್ತಾಭಾರತಿವಾರ್ತಾಭಾರತಿ1 Aug 2026 7:55 PM IST
share
Kalaburagi | ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರ ಹೆಸರು ಕೈಬಿಡುವ ಪ್ರಯತ್ನ: ವಿ.ಆರ್. ಸುದರ್ಶನ ಆರೋಪ
ಕಾಂಗ್ರೆಸ್‌ನಿಂದ ಎಸ್ಐಆರ್ ಮೇಲ್ವಿಚಾರಣಾ ಸಮಿತಿ ರಚನೆ

ಕಲಬುರಗಿ, ಆ.1: ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್. ಸುದರ್ಶನ ಆರೋಪಿಸಿದರು.

ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಭದ್ರ ಅಡಿಪಾಯ ಹಾಕುವಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಚುನಾವಣಾ ಆಯೋಗವನ್ನು ಬಳಸಿಕೊಂಡು ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಹೊರಗಟ್ಟುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಕುರಿತು ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ವ್ಯಾಪಕ ಸಿದ್ಧತೆ ನಡೆಸಿದ್ದು, ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಜತೆ ಸಮನ್ವಯ ಸಾಧಿಸಲು ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ. ರಾಜ್ಯದಲ್ಲಿ 57,409 ಬೂತ್ ಮಟ್ಟದ ಏಜೆಂಟರನ್ನು (ಬಿಎಲ್‌ಎ) ನೇಮಿಸಲಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ನೇತೃತ್ವದಲ್ಲಿ ‘ವಾರ್ ರೂಮ್’ ಸ್ಥಾಪಿಸಿ, ಎಸ್‌ಐಆರ್ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಪ್ರತ್ಯೇಕ ಸಮಿತಿಯನ್ನೂ ರಚಿಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಸರ್ಕಾರ ಸಂವಿಧಾನಬದ್ಧ ಸಂಸ್ಥೆಗಳನ್ನು ದುರುದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಬೆಂಬಲಿಗರು ಹಾಗೂ ಬಡ ವರ್ಗದ ಮತದಾರರನ್ನು ಗುರಿಯಾಗಿಸಿ ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದರು. ಅರ್ಹ ಮತದಾರರ ಮತದಾನದ ಹಕ್ಕು ಕಸಿದುಕೊಳ್ಳದಂತೆ ಪಕ್ಷದ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

ರಾಜ್ಯದ ಅನೇಕ ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿ ಸಮರ್ಪಕವಾಗಿ ಪ್ರದರ್ಶಿಸಲಾಗುತ್ತಿಲ್ಲ. ಒಂದೇ ಕುಟುಂಬದ ಸದಸ್ಯರ ಹೆಸರುಗಳು ವಿವಿಧ ವಾರ್ಡ್‌ಗಳಿಗೆ ವರ್ಗಾವಣೆಯಾಗಿರುವಂತಹ ದೋಷಗಳನ್ನು ಸರಿಪಡಿಸಬೇಕಿದೆ ಎಂದು ಹೇಳಿದರು.

ಚುನಾವಣಾ ಆಯೋಗದ ಕಾರ್ಯಕ್ಕೆ ಕಾಂಗ್ರೆಸ್ ವಿರೋಧವಿಲ್ಲ. ಆದರೆ ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಅನುಸರಿಸಲಾಗುತ್ತಿರುವ ಕೆಲವು ವಿಧಾನಗಳ ವಿರುದ್ಧ ಪ್ರಜಾಸತ್ತಾತ್ಮಕ ಹೋರಾಟ ನಡೆಸಲಾಗುತ್ತಿದೆ. ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡುವ ಪ್ರಯತ್ನಗಳು ನಡೆಯುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದರು.

ಆರ್ಥಿಕ ತಜ್ಞ ಅಮರ್ತ್ಯ ಸೇನ್, ನಿವೃತ್ತ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಅರುಣ್ ಪ್ರಕಾಶ್ ಹಾಗೂ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರಂತಹ ಗಣ್ಯರ ಹೆಸರುಗಳೂ ಮತದಾರರ ಪಟ್ಟಿಯಲ್ಲಿ ಇಲ್ಲದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ ಎಂದು ಉಲ್ಲೇಖಿಸಿದ ಅವರು, ದಾಖಲೆಗಳ ಹೆಸರಿನಲ್ಲಿ ಅನಗತ್ಯ ತೊಂದರೆ ನೀಡಬಾರದು ಎಂದರು.

1951ರಲ್ಲಿ ದೇಶದ ಮೊದಲ ಮತದಾರರ ಪಟ್ಟಿ ಸಿದ್ಧಗೊಂಡಿದ್ದು, ಸಾರ್ವತ್ರಿಕ ಚುನಾವಣೆಗಳು ಪ್ರಜಾಪ್ರಭುತ್ವದ ಬುನಾದಿಯನ್ನು ಗಟ್ಟಿಗೊಳಿಸಿವೆ. ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಯಾವುದೇ ಅರ್ಹ ನಾಗರಿಕ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಉಮಾಶ್ರೀ ಹಾಗೂ ಜಗದೇವ ಗುತ್ತೇದಾರ್, ತಿಪ್ಪಣ್ಣಪ್ಪ ಕಮಕನೂರ, ರೇಣುಕಾ ಸಿಂಗೆ, ಸುಭಾಷ್ ರಾಠೋಡ್, ವಾಣಿಶ್ರೀ ಸಗರಕರ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Tags

SIRKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X