ಕಲಬುರಗಿ | ಲೇಖಕಿ ಡಾ.ತಮಿಳು ಸೆಲ್ವಿಗೆ ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ

ಕಲಬುರಗಿ: ಸಾಂಸ್ಕೃತಿಕ ಪ್ರತಿಷ್ಠಾನ, ಚೆನ್ನೈನ ಮದ್ರಾಸ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಹಿರಿಯ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥರಾಗಿರುವ ಕವಿ, ಡಾ.ತಮಿಳು ಸೆಲ್ವಿ ಅವರ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ ಪ್ರೊ.ಎಚ್.ಟಿ. ಪೋತೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2025ನೇ ಸಾಲಿನ ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
‘ಅವರ ನಾನು ಅವಳಲ್ಲ ಅವನು’ ಅನುವಾದಿತ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಶ್ರೇಷ್ಠ ಅನುವಾದಕಿ ಪ್ರಶಸ್ತಿ ಸೇರಿದಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿ ತಮಿಳು ನಾಡಿನ ಶ್ರೇಷ್ಠ ಲೇಖಕಿ ಪ್ರಶಸ್ತಿಯೂ ಸೇರಿದಂತೆ ಅವರ ಅನೇಕ ಕೃತಿಗಳಿಗೆ ಪ್ರಶಸ್ತಿ ಗೌರವಗಳು ಸಂದಿವೆ.
2025 ಜೂ.5 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ನಾಲ್ವಡಿ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಪ್ರಶಸ್ತಿಯು 10,000 ರೂ. ನಗದು ಪ್ರಶಸ್ತಿ ಫಲಕ ಶಾಲು ಸನ್ಮಾನ ಹೊಂದಿರುತ್ತದೆ.
ಪ್ರತಿಷ್ಠಾನದ ಅಧ್ಯಕ್ಷ ಡಾ.ವಸಂತ ನಾಶಿ, ಡಾ. ಸಂತೋಷಕುಮಾರ ಕಂಬಾರ, ಡಾ. ಹಣಮಂತ ಮೇಲಕೇರಿ ಸಭೆಯಲ್ಲಿ ಹಾಜರಿದರು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಶ್ರೀಶೈಲ ನಾಗರಾಳ ಮತ್ತು ಕಾರ್ಯದರ್ಶಿ ಡಾ. ಎಂ.ಬಿ. ಕಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ಜಂಟಿಯಾಗಿ ತಿಳಿಸಿದ್ದಾರೆ.