Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಾಧಕ ಮಹಿಳೆಯರಿಗೆ ಪ್ರಶಸ್ತಿ...

ಕಲಬುರಗಿ | ಸಾಧಕ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ : ಕವನ ಸಂಕಲನ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ8 March 2026 10:39 PM IST
share
ಕಲಬುರಗಿ | ಸಾಧಕ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ : ಕವನ ಸಂಕಲನ ಲೋಕಾರ್ಪಣೆ

ಕಲಬುರಗಿ : ಡಾ.ರಾಜಕುಮಾರ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಲಾ ಸಂಘ (ರಿ), ರಾಜಾಪೂರ-ಕಲಬುರಗಿ ವತಿಯಿಂದ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಂಘದ 5ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸುಮಾರು 17 ಮಹಿಳೆಯರಿಗೆ “ಕರ್ನಾಟಕ ಸಾಧಕ ಮಹಿಳೆ-2026” ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೊತೆಗೆ ಸಮಾಜಸೇವೆಯಲ್ಲಿ ತೊಡಗಿಕೊಂಡಿರುವ ಸುಮಾರು 8 ಸಾಧಕರಿಗೆ “ಸೇವಾರತ್ನ” ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಖ್ಯಾತ ಉದ್ಯಮಿಗಳಾದ ಡಾ.ಅಮರೇಶ್ವರಿ ಬಾಬುರಾವ ಚಿಂಚನಸೂರ ಉದ್ಘಾಟಿಸಿದರು. ಪ್ರೊ.ರಮೇಶ ಬಿ.ಯಾಳಗಿ ರಚಿಸಿದ “ನನ್ನೆದೆಯ ಅಂಗಳದಿ”ಕವನ ಸಂಕಲನವನ್ನು ವಿಧಾನ ಪರಿಷತ್ ಸದಸ್ಯರಾದ ಶಶಿಲ್ ಜಿ.ನಮೋಶಿ ಅವರು ಲೋಕಾರ್ಪಣೆ ಮಾಡಿ, ಮಾತನಾಡಿದರು.

ಕಾರ್ಯಕ್ರಮದ ಆರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಪಿ.ಯು ಕಾಲೇಜಿನ ಪ್ರಾಚಾರ್ಯರಾದ ಬಿ.ಎಸ್.ಮಾಲಿಪಾಟೀಲ ಅವರು ಪೂಜೆ ಮತ್ತು ಪುಷ್ಪಾರ್ಚನೆ ನೆರವೇರಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರಾದ ಬಿ.ಎಚ್.ನಿರಗುಡಿ ಅವರು ಕೃತಿಯ ಪರಿಚಯ ಮಾಡಿಕೊಟ್ಟರು.

ಮಹಾನಗರ ಪಾಲಿಕೆಯ ಉಪಮೇಯರ್ ತೃಪ್ತಿ ಎಸ್. ಲಾಖೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕೃಷಿ ಇಲಾಖೆಯ ನಿವೃತ್ತ ಸಹ ನಿರ್ದೇಶಕಿ ಮಧುಮತಿ ಪಾಟೀಲ ಅವರು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಶರಣಮ್ಮ ಹೆಂಬಾಡಿ ಗೌರವ ಉಪಸ್ಥಿತರಿದ್ದರು. ಸಂಘದ ಗೌರವ ಕಾರ್ಯದರ್ಶಿಗಳಾದ ಡಾ.ವಿಜಯಕುಮಾರ ಗೋತಗಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ.ಶರಣಪ್ಪ ಗುಂಡಗುರ್ತಿ, ಗುರು ಬಂಡಿ, ಶ್ರೀ ಸಿದ್ದರಾಮ ದಂಡಗುಲ್ಕರ್, ಡಾ.ಸುನೀಲಕುಮಾರ್ ವಂಟಿ, ಕುಶಾಲ ಆಂದೋಲ, ರಾಜಕುಮಾರ ತರಿ, ಶಂಕರ್ಜಿ ಹೂವಿನಹಿಪ್ಪರಗಿ, ಕಲ್ಯಾಣಕುಮಾರ ಬೆಳಕೇರಿ, ರಾಜಶೇಖರ ಮುಸ್ತಾರಿ ಹಾಗೂ ಗೌತಮ ಬೊಮ್ಮನಹಳ್ಳಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಪ್ರೊ.ರಮೇಶ ಬಿ.ಯಾಳಗಿ, ಕಾರ್ಯದರ್ಶಿ ಯಲ್ಲಾಲಿಂಗ ಝ ದಂಡಿನ, ಸಂಚಾಲಕ ಅಶೋಕ ಉಪ್ಪಿನ ಹಾಗೂ ಸದಸ್ಯರಾದ ವಾಣಿ ಶ್ರೀ, ಸಿದ್ದರಾಮ ಹಂಚನಾಳ, ಸಂತೋಷ ನಗನೂರ, ಭೀರು ಪೂಜಾರಿ ಮತ್ತು ನಾಗಣ್ಣ ಪೂಜಾರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕಾರ್ಯಕ್ರಮದ ಬಳಿಕ ವಿವಿಧ ಕಲಾವಿದರಿಂದ ಭರತನಾಟ್ಯ, ಜಾನಪದ ನೃತ್ಯ, ಸಂಗೀತ ರಸಮಂಜರಿ, ಹಾಸ್ಯ ಹಾಗೂ ಮಿಮಿಕ್ರಿ ಕಾರ್ಯಕ್ರಮಗಳು ಜರುಗಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X