Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಆಯುರ್ವೇದ ವಿದ್ಯಾರ್ಥಿಗಳು...

Kalaburagi | ಆಯುರ್ವೇದ ವಿದ್ಯಾರ್ಥಿಗಳು ಜ್ಞಾನವನ್ನು ಸಮಾಜದ ಆರೋಗ್ಯ ಸೇವೆಗೆ ಸಮರ್ಪಿಸಬೇಕು : ಡಾ.ಅಲ್ಲಮಪ್ರಭು ಗುಡ್ಡ

ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಘಟಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ1 Oct 2026 7:27 PM IST
share
Kalaburagi | ಆಯುರ್ವೇದ ವಿದ್ಯಾರ್ಥಿಗಳು ಜ್ಞಾನವನ್ನು ಸಮಾಜದ ಆರೋಗ್ಯ ಸೇವೆಗೆ ಸಮರ್ಪಿಸಬೇಕು : ಡಾ.ಅಲ್ಲಮಪ್ರಭು ಗುಡ್ಡ

ಕಲಬುರಗಿ: ಆಯುರ್ವೇದ ವೈದ್ಯಕೀಯ ಶಿಕ್ಷಣ ಪಡೆದು ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ತಾವು ಗಳಿಸಿರುವ ಜ್ಞಾನ ಹಾಗೂ ಕೌಶಲವನ್ನು ಸಮಾಜದ ಆರೋಗ್ಯ ಸೇವೆಗೆ ಸಮರ್ಪಿಸಬೇಕು ಎಂದು ರಾಷ್ಟ್ರೀಯ ಭಾರತೀಯ ವೈದ್ಯಕೀಯ ವ್ಯವಸ್ಥೆ ಆಯೋಗದ ಅಧ್ಯಕ್ಷ ಡಾ. ಅಲ್ಲಮಪ್ರಭು ಗುಡ್ಡ ಹೇಳಿದರು.

ನಗರದ ಸೇಡಂ ರಸ್ತೆಯಲ್ಲಿರುವ ಎನ್‌ಐಎಸ್ ಕಟ್ಟಡದಲ್ಲಿ ಗುರುವಾರ ಶ್ರೀ ಹಿಂಗುಲಾಂಬಿಕಾ ಎಜುಕೇಶನ್ ಸೊಸೈಟಿಯ ಆಯುರ್ವೇದ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ‘ಘಟಿಕೋತ್ಸವ-2026’ರ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಆಯುರ್ವೇದವು ಭಾರತದ ಪ್ರಾಚೀನ ಹಾಗೂ ವೈಜ್ಞಾನಿಕ ವೈದ್ಯಕೀಯ ಪರಂಪರೆಯಾಗಿದ್ದು, ಇಂದಿನ ಆಧುನಿಕ ವೈದ್ಯಕೀಯ ವ್ಯವಸ್ಥೆಯೊಂದಿಗೆ ಸಮನ್ವಯ ಸಾಧಿಸುವ ಮೂಲಕ ಜನರಿಗೆ ಪರಿಣಾಮಕಾರಿ ಆರೋಗ್ಯ ಸೇವೆ ಒದಗಿಸುವ ಸಾಮರ್ಥ್ಯ ಹೊಂದಿದೆ. ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರವಾಗಿ ಹೊಸ ಜ್ಞಾನವನ್ನು ಅರಿತುಕೊಳ್ಳುವ ಹಾಗೂ ಕಾಲಕ್ಕೆ ತಕ್ಕಂತೆ ತಮ್ಮ ಕೌಶಲವನ್ನು ಅಭಿವೃದ್ಧಿಪಡಿಸಿಕೊಳ್ಳುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವೈದ್ಯರಾಗುವುದು ಕೇವಲ ವೃತ್ತಿಯಲ್ಲ, ಅದು ಸಮಾಜದ ಆರೋಗ್ಯ ಮತ್ತು ಜನರ ಬದುಕಿನೊಂದಿಗೆ ನೇರವಾಗಿ ಸಂಬಂಧ ಹೊಂದಿರುವ ಮಹತ್ವದ ಜವಾಬ್ದಾರಿಯಾಗಿದೆ. ವಿಶೇಷವಾಗಿ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವಲ್ಲಿ ಯುವ ಆಯುರ್ವೇದ ವೈದ್ಯರು ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

ರೋಗಿಗಳ ಬಗ್ಗೆ ಮಾನವೀಯ ಕಾಳಜಿ, ಸೇವಾ ಮನೋಭಾವ ಹಾಗೂ ವೃತ್ತಿಪರ ನೈತಿಕತೆಯನ್ನು ವೈದ್ಯರು ಸದಾ ಕಾಪಾಡಿಕೊಳ್ಳಬೇಕು. ವೈದ್ಯಕೀಯ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಡಾ. ಅಲ್ಲಮಪ್ರಭು ಗುಡ್ಡ ಕರೆ ನೀಡಿದರು.

ಸಮಾರಂಭದಲ್ಲಿ 2020ರ ಓಜಸ್ವಿ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಉಪ ನೋಂದಣಾಧಿಕಾರಿ ಡಾ. ರೇವಣಸಿದ್ದಪ್ಪ ಪಾಟೀಲ ಹಾಗೂ ಕಲಬುರಗಿಯ ಇಎಸ್‌ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ಧನಾಜಿ ಎಸ್. ಜಾಧವ್ ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ನರೇಶ್ ಎಸ್. ತಾಂಡಳೆ ವಹಿಸಿದ್ದರು. ಕಾಲೇಜಿನ ಪ್ರಾಚಾರ್ಯೆ ಡಾ. ವಿಜಯಲಕ್ಷ್ಮಿ ಎನ್.ಎಚ್., ಕಾಲೇಜು ಆಡಳಿತಾಧಿಕಾರಿ ಸುನೀಲ್ ಜಿಂದೆ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಪದವಿ ಪಡೆದ ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.




Tags

KnowledgestudentsAyurvedaKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X