Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜ.17ರಿಂದ 3 ದಿನಗಳ ಕಾಲ...

ಕಲಬುರಗಿ | ಜ.17ರಿಂದ 3 ದಿನಗಳ ಕಾಲ 'ಬಹುತ್ವ ಸಂಸ್ಕೃತಿ ಭಾರತೋತ್ಸವ' : ಮೀನಾಕ್ಷಿ ಬಾಳಿ

ವಾರ್ತಾಭಾರತಿವಾರ್ತಾಭಾರತಿ15 Jan 2025 5:41 PM IST
share
Photo of Press meet

ಕಲಬುರಗಿ : ರಾಜ್ಯದ ವಿವಿಧ 40ಕ್ಕೂ ಹೆಚ್ಚು ಸಂಘಟನೆಗಳ ಸಹಯೋಗದೊಂದಿಗೆ ಕಲಬುರಗಿ ನಗರದಲ್ಲಿ ಜ.17, 18 ಮತ್ತು 19 ರಂದು ಮೂರು ದಿನಗಳ ಕಾಲ ಭಾರತದ ಬಹುತ್ವದ ಸಂಸ್ಕೃತಿ ಪ್ರತಿಪಾದನೆ ಮತ್ತು ಸೌಹಾರ್ದ ಕರ್ನಾಟಕಕ್ಕಾಗಿ 'ಬಹುತ್ವ ಸಂಸ್ಕೃತಿ ಭಾರತೋತ್ಸವ -2025ರ ಕಲಬುರಗಿ ಚಲೋ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉತ್ಸವದ ಸಂಚಾಲಕರಾದ ಮೀನಾಕ್ಷಿ ಬಾಳಿ, ಆರ್.ಕೆ.ಹುಡಗಿ ಅವರು ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜ.17 ರಂದು ಬೆಳಗ್ಗೆ 10.30ಕ್ಕೆ ನಗರದ ಶರಣಬಸವೇಶ್ವರ ದೇವಸ್ಥಾನದಲ್ಲಿ ಮಾತೋಶ್ರೀ ದ್ರಾಕ್ಷಾಯಿಣಿ ಶರಣಬಸಪ್ಪ ಅಪ್ಪ ಅವರು ವಾಹನ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.

ಈ ವೇಳೆಯಲ್ಲಿ ನಿವೃತ್ತ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಮತ್ತಿತರರು ಉಪಸ್ಥಿತರಿರಲಿದ್ದಾರೆ. ಶರಣಬಸವೇಶ್ವರ ದೇವಸ್ಥಾನದಿಂದ ಆರಂಭವಾಗುವ ಜಾಥಾವು ಸೆಂಟ್ ಮೇರಿ ಚರ್ಚ್ ಮಾರ್ಗವಾಗಿ ಸಾಗಿ ಸರ್ದಾರ್ ವಲ್ಲಭಾಯಿ ಪಟೇಲ್ ಮಾರ್ಗದಿಂದ ಜಗತ್ ವೃತದಿಂದ ಹಾಯ್ದು ಖ್ವಾಜಾ ಬಂದೇನವಾಜ್ ದರ್ಗಾದಲ್ಲಿ ಮುಕ್ತಾಯವಾಗಲಿದೆ.

ಎರಡನೇ ದಿನವಾದ ಜ.18 ರಂದು ಬೆಳಗ್ಗೆ10 ಗಂಟೆಯಿಂದ ನಗರದ ಪಂಡಿತ್ ರಂಗಮಂದರಿರದಲ್ಲಿ 'ಭಾವೈಕ್ಯದ ಸಮನ್ವಯ ಗಾಯನ ಗಮಲು' ಘೋಷಣೆಯಡಿ ದಿನವಿಡಿ ತತ್ವಪದ, ಸೂಫಿಪದ, ವಚನ ಗಾಯನ ಮತ್ತು ಖವ್ವಾಲಿ ಕಾರ್ಯಕ್ರಮಗಳು ನಡೆಯಲಿವೆ.

ಕೊನೆ ದಿನ ಜ.19 ರಂದು ಬೆಳಗ್ಗೆ 10 ರಿಂದ ಕನ್ನಡ ಭವನದಿಂದ ಮೆರವಣಿಗೆ ನಡೆಸಿ ಜಗತ್ ವೃತದಲ್ಲಿ ಸೌಹಾರ್ದತೆಯ ಉತ್ಸವದ ಬಹಿರಂಗ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ದಕ್ಷಿಣದ ಬೆಂಗಳೂರು, ಮಂಗಳೂರು, ಮಂಡ್ಯ, ಕೋಲಾರ ಸೇರಿದಂತೆ ಎಲ್ಲಾ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದು, ಸ್ಥಳೀಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಈಗ ನಡೆಯುತ್ತಿರುವ ಬಹುತ್ವ ಸಂಸ್ಕೃತಿ ಭಾರತೋತ್ಸವವು ಕೇವಲ ಒಂದೇ ಧರ್ಮದವರು ನಡೆಸಿ ಕೊಡುತ್ತಿಲ್ಲ, ಇದು ಸರ್ವಧರ್ಮಿಯರ ಸಂಚಾಲಕರ ನೇತೃತ್ವದಲ್ಲಿ ಜರುಗುತ್ತಿದೆ ಎಂದರು.

ಈ ಸಮಾವೇಶದಲ್ಲಿ ಪರಮಪೂಜ್ಯ ಪಂಡಿತಾರಾಧ್ಯ ಸ್ವಾಮೀಜಿಗಳು, ಸಾಣೇಹಳ್ಳಿ, ಮನಿಪ್ರ ಸಿದ್ದರಾಮ ಶಿವಯೋಗಿಗಳು, ಗದಗ, ಮಘಚ ಬಸವಲಿಂಗ ಪಟ್ಟದ್ದೇವರು, ಭಾಲ್ಕಿ, ಪರಮಪೂಜ್ಯ ಗುರುಮಹಾಂತ ಸ್ವಾಮಿಗಳು, ಇಲಕಲ್, ಪರಮಪೂಜ್ಯ ಜ್ಞಾನಪ್ರಕಾಶ ಸ್ವಾಮಿಗಳು -ಮೈಸೂರು, ಪೂಜ್ಯ ನಿಜಗುಣಾನಂದ ಸ್ವಾಮಿಗಳು ಬೈಲೂರು, ಮಾತೆ ಗಂಗಾoಬಿಕೆ ಪಾಟೀಲ, ಪೂಜ್ಯ ದ್ರಾಕ್ಷಾಯಿಣಿ ಅಪ್ಪ, ಹಜರತ್ ಖ್ವಾಜಾ ಬಂದಾನವಾಜ್ ಗೇಸುದರಾಜ್, ಪೂಜ್ಯ ಸಂಗಾನoದ ಭಂತೇಜಿ, ಖಾದ್ರಿ ಮುಸ್ತಾಫ್, ಮಳಖೇಡ ದರ್ಗಾ ಫಾದರ್ ಲೋಬೋ, ಸೇಂಟ್ ಮೇರಿ ಚರ್ಚ್, ಶ್ರೀ ಗುರುಮೀತ್ ಸಿಂಗ್ , ಪೂಜ್ಯ ರಹಮತ್ ತರಿಕೇರೆ, ಕೆ. ಎಸ್. ವಿಮಲಾ, ಜಗದೀಶ ಪಾಟೀಲ, ಬಸವರಾಜ ಸೂಳಿಭಾವಿ, ಮುನಿರ ಕಾಟಿಪಳ್ಳ ಜ್ಞಾನಜ್ಯೋತಿ ಭಂತೇಜಿ, ಚೆನ್ನಬಸವ ಸ್ವಾಮಿಜೀ ಹಾಗೂ ಚಿಂತಕರಾದ ಪ್ರೊ. ಟಿ. ಆರ್. ಚಂದ್ರಶೇಖರ, ದಿನೇಶ ಅಮಿನಮಟ್ಟು, ಎಸ್. ಎಂ. ಜಾಮದಾರ, ಡಾ. ಎಸ್.ವೈ.ಗುರುಶಾಂತ, ಪ್ರೊ.ಆರ್.ಕೆ.ಹುಡಗಿ, ಕಾಶಿನಾಥ ಅಂಬಲಗೆ, ನೀಲಾ ಕೆ, ಪ್ರಭುಲಿಂಗ ಮಹಾಗಾಂವಕರ್, ಆರ್. ಜಿ.ಶೆಟಗಾರ್, ಶ್ರೀಶೈಲ ಮಸೂತಿ ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಅಲ್ಲದೆ ನೂರಾರು ಚಿಂತಕರು ಕೂಡ ಈ ಉತ್ಸವಕ್ಕೆ ಬೆಂಬಲಿಸಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸುರೇಶ್ ಹಾದಿಮನಿ, ಮಹಮ್ಮದ್ ಅಫಜಲ್, ಕಾಶಿನಾಥ್ ಅಂಬಲಗೆ, ಪ್ರಭು ಖಾನಾಪುರೆ, ಧನರಾಜ ತಂಬೋಳೆ, ಮಹಾಂತೇಶ್ ಕೌಲಗಿ ಸೇರಿದಂತೆ ಹಲವರು ಇದ್ದರು.

ದೇಶದಲ್ಲಿ ಅತ್ಯಾಚಾರ, ಕೊಲೆ, ದರೋಡೆಗಳು 30 ನಿಮಿಷಕ್ಕೊಂದು ನಡೆಯುತ್ತಿರುವುದನ್ನು ಕೇಳುತ್ತಿದ್ದೇವೆ. ಇಂತಹ ಘಟನೆಗಳಿಗೆ ಕೆಲವರು ಧರ್ಮ, ಜಾತಿ, ಮತಗಳ ಆಧಾರದ ಮೇಲೆ ಬಣ್ಣ ಹಚ್ಚುತ್ತಿದ್ದಾರೆ. ಸಮಾಜದಲ್ಲಿ ಈ ತರಹ ಬೆಳವಣಿಗೆ ಆಗುತ್ತಿರುವುದು ಸರಿಯಲ್ಲ.

-ಮೀನಾಕ್ಷಿ ಬಾಳಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X