Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೈಗಾರಿಕೆ, ಉದ್ಯೋಗ ಮತ್ತು...

Kalaburagi | ಕೈಗಾರಿಕೆ, ಉದ್ಯೋಗ ಮತ್ತು ಪರಿಸರ ಸಂರಕ್ಷಣೆ ನಡುವೆ ಸಮತೋಲನ ಅಗತ್ಯ: ಎಂ.ಎಸ್. ಪಾಟೀಲ

ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ಪರಿಚಯಾತ್ಮಕ ತರಬೇತಿ ಕಾರ್ಯಗಾರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 Oct 2026 5:27 PM IST
share
Kalaburagi | ಕೈಗಾರಿಕೆ, ಉದ್ಯೋಗ ಮತ್ತು ಪರಿಸರ ಸಂರಕ್ಷಣೆ ನಡುವೆ ಸಮತೋಲನ ಅಗತ್ಯ: ಎಂ.ಎಸ್. ಪಾಟೀಲ

ಕಲಬುರಗಿ: ಕೈಗಾರಿಕೆ, ಉದ್ಯೋಗ ಸೃಷ್ಟಿ ಮತ್ತು ಪರಿಸರ ಸಂರಕ್ಷಣೆ ನಡುವೆ ಸಮತೋಲನ ಇದ್ದಾಗ ಮಾತ್ರ ಯಾವುದೇ ಪ್ರದೇಶದಲ್ಲಿ ಸುಸ್ಥಿರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ಕಲಬುರಗಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಎಂ.ಎಸ್. ಪಾಟೀಲ ಅಭಿಪ್ರಾಯಪಟ್ಟರು.

ಶುಕ್ರವಾರ ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಸುಮಾರು 30 ‘ಸಿ’ ವೃಂದದ ನೌಕರರು ಮತ್ತು ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತ ಎರಡು ದಿನಗಳ ಪರಿಚಯಾತ್ಮಕ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಶಹಾಬಾದ್, ವಾಡಿ ಮತ್ತು ಮಳಖೇಡ ಭಾಗಗಳಲ್ಲಿ ಸುಣ್ಣದ ಕಲ್ಲಿನ ನಿಕ್ಷೇಪಗಳು ಹೇರಳವಾಗಿವೆ. ಈ ಕಾರಣದಿಂದ ಏಷ್ಯಾದಲ್ಲೇ ಹೆಸರಾಂತ ಸಿಮೆಂಟ್ ಕಾರ್ಖಾನೆಗಳಾದ ಅಲ್ಟ್ರಾಟೆಕ್, ಎ.ಸಿ.ಸಿ. ಮತ್ತು ಕೇಸೋರಾಮ್ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸ್ಥಳೀಯ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುತ್ತಿವೆ. ಹಸಿರು ಕೈಗಾರಿಕೆಗಳ ಮೂಲಕ ಪರಿಸರ ಸ್ನೇಹಿ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಸೌರ, ಗಾಳಿ ಮತ್ತು ಜಲಶಕ್ತಿಯಂತಹ ಪುನರುತ್ಪಾದಕ ಇಂಧನ ಮೂಲಗಳನ್ನು ಬಳಸಿ ಕೈಗಾರಿಕಾ ಉತ್ಪಾದನೆಯನ್ನು ಹೆಚ್ಚಿಸಬೇಕು. ಇದರೊಂದಿಗೆ ಸ್ಥಳೀಯ ಜನರಿಗೆ ಅಗತ್ಯ ತರಬೇತಿ ನೀಡಿ ಪರಿಸರ ಸ್ನೇಹಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಸುಸ್ಥಿರ ಅಭಿವೃದ್ಧಿಯ ಪ್ರಮುಖ ಲಕ್ಷಣವಾಗಿದೆ ಎಂದು ಹೇಳಿದರು.

ಉಪ ಪ್ರಾಚಾರ್ಯೆ ಗೀತಾ ಟಿ.ಆರ್. ಮಾತನಾಡಿ, ಕಲಬುರಗಿಯನ್ನು ಕರ್ನಾಟಕದ ‘ತೊಗರಿ ಕಣಜ’ ಎಂದು ಕರೆಯಲಾಗುತ್ತದೆ. ಇಲ್ಲಿ ಬೆಳೆಯುವ ತೊಗರಿಗೆ ಭೌಗೋಳಿಕ ಸೂಚ್ಯಂಕ ಮಾನ್ಯತೆ ದೊರೆತಿದ್ದು, ತೊಗರಿ ಬೇಳೆಗೆ ಏಷ್ಯಾದಲ್ಲೇ ಹೆಚ್ಚಿನ ಬೇಡಿಕೆಯಿದೆ. ಜಿಲ್ಲೆಯ ಸುಮಾರು 65ಕ್ಕೂ ಹೆಚ್ಚು ತೊಗರಿ ಸಂಸ್ಕರಣ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಸ್ಥಳೀಯ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುತ್ತಿವೆ ಎಂದರು.

ಕಾರ್ಯಾಗಾರದಲ್ಲಿ ಬೋಧಕರಾದ ಮಂಜುಳಾ ಪಾಟೀಲ, ರುದ್ರಗೌಡ ಕೆ. ಬಿರಾದಾರ ಹಾಗೂ ಚನ್ನಬಸವಣ್ಣ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳು ಕರ್ನಾಟಕ ಕೇಂದ್ರದ ಡಾ. ಸಿದ್ದರಾಮ ಎಚ್.ಎಂ. ಅವರು ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಸಂಬಂಧಿಸಿದಂತೆ ವಿಶೇಷ ಉಪನ್ಯಾಸ ನೀಡಿದರು.

ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿಗಳೊಂದಿಗೆ ಜಿಲ್ಲಾ ತರಬೇತಿ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯೂ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ರಂಗನಾಥ ನಿರೂಪಿಸಿದರು.

Tags

EnvironmentalemploymentindustryKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X