Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬಿಟ್‌ಚಾಟ್ ಮೇಲಿನ...

Kalaburagi | ಬಿಟ್‌ಚಾಟ್ ಮೇಲಿನ ನಿರ್ಬಂಧ ಸಂವಿಧಾನ ವಿರೋಧಿ: ಸಿಪಿಐ(ಎಂ) ಆರೋಪ

ವಾರ್ತಾಭಾರತಿವಾರ್ತಾಭಾರತಿ6 Aug 2026 9:35 PM IST
share
Kalaburagi | ಬಿಟ್‌ಚಾಟ್ ಮೇಲಿನ ನಿರ್ಬಂಧ ಸಂವಿಧಾನ ವಿರೋಧಿ: ಸಿಪಿಐ(ಎಂ) ಆರೋಪ

ಕಲಬುರಗಿ, ಆ.6: ಎಲ್ಲರಿಗೂ ಮುಕ್ತವಾಗಿ ಬಳಸಲು ಅವಕಾಶವಿರುವ ಓಪನ್‌ ಸೋರ್ಸ್ ಮೆಸೇಜಿಂಗ್ ಅಪ್ಲಿಕೇಶನ್ ಬಿಟ್‌ಚಾಟ್ (BitChat) ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ನಿರ್ಬಂಧವು ಸಂವಿಧಾನ ವಿರೋಧಿ ಹಾಗೂ ಸರ್ವಾಧಿಕಾರಿ ಧೋರಣೆಯ ಪ್ರತೀಕವಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) [ಸಿಪಿಐ(ಎಂ)] ಆರೋಪಿಸಿದೆ.

ಈ ಕುರಿತು ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ಪ್ರಕಟಣೆ ನೀಡಿ, ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ನಿರ್ಬಂಧವು ಅಭಿವ್ಯಕ್ತಿ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಹಕ್ಕುಗಳು ಹಾಗೂ ನಾಗರಿಕರ ಶಾಂತಿಯುತ ಸಂವಹನ ಮತ್ತು ಸಂಘಟನೆಯ ಹಕ್ಕಿನ ಮೇಲಿನ ಮತ್ತೊಂದು ದಾಳಿಯಾಗಿದೆ ಎಂದು ಹೇಳಿದ್ದಾರೆ.

ಬಿಟ್‌ಚಾಟ್ ಮೇಲಿನ ನಿರ್ಬಂಧಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಅಧಿಕೃತ ಅಧಿಸೂಚನೆ ಅಥವಾ ಸಾರ್ವಜನಿಕ ಆದೇಶ ಹೊರಡಿಸಿಲ್ಲ ಎಂದು ಆರೋಪಿಸಿರುವ ಅವರು, ಅಪ್ಲಿಕೇಶನ್ ಅಭಿವೃದ್ಧಿ ತಂಡದ ಜ್ಯಾಕ್ ಡಾರ್ಸಿ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕವೇ ಈ ವಿಷಯ ಸಾರ್ವಜನಿಕರಿಗೆ ತಿಳಿದಿರುವುದು ಸರ್ಕಾರದ ಪಾರದರ್ಶಕತೆಯ ಕೊರತೆಯನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಪರೀಕ್ಷಾ ಅಕ್ರಮಗಳ ವಿರುದ್ಧ ನ್ಯಾಯಕ್ಕಾಗಿ ವಿದ್ಯಾರ್ಥಿಗಳು ಮತ್ತು ಯುವಜನರು ನಡೆಸುತ್ತಿರುವ ಶಾಂತಿಯುತ ಪ್ರತಿಭಟನೆಗಳ ಸಂದರ್ಭದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸುವುದು, ಸಂವಹನದ ಮೇಲಿನ ನಿರ್ಬಂಧ, ಪೊಲೀಸ್ ದಬ್ಬಾಳಿಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧ ಹೇರುವುದು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನಗಳಾಗಿವೆ ಎಂದು ಅವರು ಆರೋಪಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಪ್ರಕಾರ ಇಂಟರ್ನೆಟ್ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಯಾವುದೇ ನಿರ್ಬಂಧವು ಕಾನೂನುಬದ್ಧತೆ, ಅಗತ್ಯತೆ ಮತ್ತು ಪ್ರಮಾಣಬದ್ಧತೆಯ ಮಾನದಂಡಗಳನ್ನು ಪಾಲಿಸಬೇಕು. ಪಾರದರ್ಶಕತೆ ಹಾಗೂ ಸೂಕ್ತ ಕಾನೂನು ಪ್ರಕ್ರಿಯೆಯಿಲ್ಲದೆ ಇಂತಹ ನಿರ್ಬಂಧ ಹೇರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X