Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ–ಬೆಂಗಳೂರು ವಿಮಾನ ಸೇವೆ...

ಕಲಬುರಗಿ–ಬೆಂಗಳೂರು ವಿಮಾನ ಸೇವೆ ಪುನರಾರಂಭ: ಕೆಕೆಆರ್‌ಡಿಬಿಯಿಂದ ಮಹತ್ವದ ಆರ್ಥಿಕ ನೆರವು

ವಾರ್ತಾಭಾರತಿವಾರ್ತಾಭಾರತಿ10 Jun 2026 10:08 PM IST
share
ಕಲಬುರಗಿ–ಬೆಂಗಳೂರು ವಿಮಾನ ಸೇವೆ ಪುನರಾರಂಭ: ಕೆಕೆಆರ್‌ಡಿಬಿಯಿಂದ ಮಹತ್ವದ ಆರ್ಥಿಕ ನೆರವು

ಬೆಂಗಳೂರು/ಕಲಬುರಗಿ : ಕಲಬುರಗಿ, ಬೀದರ್ ಹಾಗೂ ರಾಜ್ಯ ರಾಜಧಾನಿ ಬೆಂಗಳೂರಿನ ನಡುವಿನ ವಿಮಾನ ಸೇವೆಗಳು ಅಧಿಕೃತವಾಗಿ ಪುನರಾರಂಭಗೊಂಡಿದ್ದು, ಈ ಸೇವೆ ಮರು ಆರಂಭಗೊಳ್ಳಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ನೀಡಿರುವ ಆರ್ಥಿಕ ನೆರವು ಪ್ರಮುಖ ಪಾತ್ರ ವಹಿಸಿದೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ.ಅಜಯ್ ಸಿಂಗ್ ತಿಳಿಸಿದ್ದಾರೆ.

ಬುಧವಾರ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸ್ಟಾರ್ ಏರ್‌ನ ಮೊದಲ ವಿಮಾನಕ್ಕೆ ಕೇಕ್ ಕತ್ತರಿಸುವ ಮೂಲಕ ಶುಭ ಹಾರೈಸಿದ ಅವರು, ಈ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿದ ಸಂತಸ ವ್ಯಕ್ತಪಡಿಸಿದರು.

ಕೈಗಾರಿಕೋದ್ಯಮಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ನಿರಂತರ ಒತ್ತಾಯದ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಆರ್ಥಿಕ, ಕೈಗಾರಿಕಾ ಮತ್ತು ಸಾಮಾಜಿಕ ಅಭಿವೃದ್ಧಿಗೆ ವಿಮಾನ ಸಂಪರ್ಕ ಮಹತ್ತರ ಕೊಡುಗೆ ನೀಡಲಿದ್ದು, ಹೂಡಿಕೆ ಆಕರ್ಷಣೆಗೆ ಇದು ಪೂರಕವಾಗಲಿದೆ ಎಂದು ಅವರು ಹೇಳಿದರು.

2022ರ ನವೆಂಬರ್‌ನಲ್ಲಿ ಆರಂಭಗೊಂಡಿದ್ದ ಈ ವಿಮಾನ ಸೇವೆ ಕೆಲವು ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿತ್ತು. ಬಳಿಕ ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ, ರಹೀಮ್ ಖಾನ್ ಹಾಗೂ ಡಾ.ಶರಣಪ್ರಕಾಶ್ ಪಾಟೀಲ್ ಅವರೊಂದಿಗೆ ಚರ್ಚಿಸಿ ಸೇವೆಯನ್ನು ಪುನರಾರಂಭಿಸಲು ಗಂಭೀರ ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿಸಿದರು.

28.44 ಕೋಟಿ ರೂ. ಅನುದಾನ :

ಕಲಬುರಗಿ ಹಾಗೂ ಬೀದರ್ ವಿಮಾನ ಸೇವೆಗಳ ಸುಗಮ ಕಾರ್ಯಾಚರಣೆಗಾಗಿ ತಲಾ 14.22 ಕೋಟಿ ರೂ. ಅನುದಾನದ ಅಗತ್ಯವಿದ್ದು, ಒಟ್ಟು ವೆಚ್ಚದ ಶೇಕಡ 80ರಷ್ಟು ಮೊತ್ತವನ್ನು ಕೆಕೆಆರ್‌ಡಿಬಿ ಭರಿಸುತ್ತಿದೆ. ಉಳಿದ ಶೇ.20ರಷ್ಟು ಅನುದಾನವನ್ನು ರಾಜ್ಯ ಸರ್ಕಾರದ ಬೃಹತ್ ಕೈಗಾರಿಕಾ ಇಲಾಖೆಯಿಂದ ಒದಗಿಸಲಾಗಿದೆ.

ಪ್ರತಿ ವರ್ಷ ವಿಮಾನಯಾನ ಸಂಸ್ಥೆಗಳು ಸೇವೆ ಮುಂದುವರಿಸಲು ಅಗತ್ಯವಿರುವ ಆರ್ಥಿಕ ಬೆಂಬಲದ ವ್ಯವಸ್ಥೆಯನ್ನು ಸರ್ಕಾರ ಮತ್ತು ಮಂಡಳಿ ಒಟ್ಟಾಗಿ ನಿರ್ವಹಿಸುತ್ತಿದ್ದು, ಈ ಕ್ರಮದಿಂದ ವಿಮಾನ ಸೇವೆ ನಿರಂತರವಾಗಿ ಲಭ್ಯವಾಗುವ ವಿಶ್ವಾಸ ವ್ಯಕ್ತಪಡಿಸಲಾಗಿದೆ.

ಕಲಬುರಗಿ–ಬೆಂಗಳೂರು ವಿಮಾನ ಸಂಪರ್ಕದಿಂದ ಕೇವಲ ಕಲಬುರಗಿ ಜಿಲ್ಲೆಗೆ ಮಾತ್ರವಲ್ಲದೆ, ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳ ಜನತೆಗೆ ಅನುಕೂಲವಾಗಲಿದೆ. ಜೊತೆಗೆ ನೆರೆಯ ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳ ಪ್ರಯಾಣಿಕರೂ ಇದರ ಪ್ರಯೋಜನ ಪಡೆಯಲಿದ್ದಾರೆ.

ಪ್ರಾದೇಶಿಕ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಕೆಕೆಆರ್‌ಡಿಬಿ ವತಿಯಿಂದ ‘ಪಾಲಿಸಿ ಪ್ಲಾನಿಂಗ್ ಡೇಟಾ ಅನಾಲಿಟಿಕ್ಸ್ ವಿಂಗ್’ (Policy Planning Data Analytics Wing) ಆರಂಭಿಸಲಾಗುತ್ತಿದೆ ಎಂದು ಡಾ.ಅಜಯ್ ಸಿಂಗ್ ತಿಳಿಸಿದರು.

ಪ್ರಖ್ಯಾತ ಅರ್ಥಶಾಸ್ತ್ರಜ್ಞ ಪ್ರೊ.ಗೋವಿಂದ್ ರಾವ್ ಅವರ ಸಲಹೆಯಂತೆ ಆರಂಭವಾಗುತ್ತಿರುವ ಈ ಘಟಕವು ಪ್ರವಾಸೋದ್ಯಮ, ಕೈಗಾರಿಕೆ, ಕೃಷಿ ಹಾಗೂ ಜವಳಿ ಕ್ಷೇತ್ರಗಳಿಗೆ ಸಂಬಂಧಿಸಿದ ನೀತಿಗಳ ರೂಪಿಕರಣ ಮತ್ತು ಅನುಷ್ಠಾನಕ್ಕೆ ನೆರವಾಗಲಿದೆ ಎಂದು ಹೇಳಿದರು.

ಬೆಂಗಳೂರು ದೇಶದ ಸಿಲಿಕಾನ್ ವ್ಯಾಲಿ. ಕಲ್ಯಾಣ ಕರ್ನಾಟಕ ಭಾಗವು ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿಯಿಂದ ಹೊರಬರಬೇಕಾದರೆ ಹೆಚ್ಚಿನ ಕೈಗಾರಿಕೆಗಳು ಬರಬೇಕು. ಅದಕ್ಕಾಗಿ ವೇಗವಾದ ಮತ್ತು ವಿಶ್ವಾಸಾರ್ಹ ಸಂಪರ್ಕ ವ್ಯವಸ್ಥೆ ಅಗತ್ಯ. ಕಲಬುರಗಿ–ಬೆಂಗಳೂರು ವಿಮಾನ ಸೇವೆ ಈ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಡಾ.ಅಜಯ್ ಸಿಂಗ್ ಹೇಳಿದರು.

ಈ ವಿಮಾನ ಸೇವೆ ಪುನರಾರಂಭಕ್ಕೆ ಸಹಕರಿಸಿದ Star Air ಹಾಗೂ ರಾಜ್ಯ ಸರ್ಕಾರಕ್ಕೆ ಅವರು ಅಭಿನಂದನೆ ಸಲ್ಲಿಸಿದರು. ವಿಮಾನ ಸಂಪರ್ಕದ ಮೂಲಕ ಹೂಡಿಕೆ, ಉದ್ಯೋಗ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಿ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬಲ ಸಿಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Tags

KKRDBflightBengaluruKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X