ಕಲಬುರಗಿ| ಭೀಮ್ ಆರ್ಮಿ ಮುಖಂಡನಿಗೆ ಜಾತಿ ನಿಂದನೆ ಆರೋಪ: ಪ್ರಕರಣ ದಾಖಲು

ಕಲಬುರಗಿ: ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡಿದ್ದಕ್ಕಾಗಿ ಕೆಲವರು ಜಾತಿ ನಿಂದನೆಗೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಭೀಮ್ ಆರ್ಮಿ ಯುವ ಘಟಕದ ರಾಜ್ಯಾಧ್ಯಕ್ಷ ಸಂತೋಷ ಪಾಳಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಮಂಡ್ಯದಲ್ಲಿ ನಡೆದ ಸಮಾರಂಭದಲ್ಲಿ ಬಾನು ಮುಷ್ತಾಕ್ ಅವರು ಪಾದರಕ್ಷೆ ಧರಿಸಿ ಡಾ.ಬಿ.ಆರ್.ಅಂಬೇಡ್ಕರ್ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ್ದರು. ಈ ಕುರಿತು ನಾನು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಮಾಡಿದ್ದೆ. ಅದಕ್ಕೆ ಕೆಲವರು ಕರೆ ಮಾಡಿ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಇನ್ನೂ ಕೆಲವರು ವೀಡಿಯೋ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಕುರಿತು ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




