ಕಲಬುರಗಿ | ಕಾರಿಗೆ ಬೈಕ್ ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು

ಕಲಬುರಗಿ : ಇನ್ನೋವಾ ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ - ದುಧನಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಸ್ ಡಿಪೋ ಸಮೀಪ ನಡೆದಿದೆ.
ಮೃತರನ್ನು ಅಫಜಲಪುರ ತಾಲ್ಲೂಕಿನ ಬಳ್ಳೂರಗಿ ತಾಂಡಾದ ನಿವಾಸಿ ವಿಕಾಸ್ ರಮೇಶ್ ರಾಠೋಡ್ (25) ಎಂದು ಗುರುತಿಸಲಾಗಿದೆ.
ಈ ಕುರಿತು ಅಫಜಲಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
Next Story





