Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮಾಜಿ ಶಾಸಕ ದತ್ತಾತ್ರೇಯ...

ಕಲಬುರಗಿ | ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್‌ರಿಗೆ ನಿಂದಿಸಿದ ಆರೋಪಿಗಳ ಬಂಧನಕ್ಕೆ ಬಿಜೆಪಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Jun 2026 8:29 PM IST
share
ಕಲಬುರಗಿ | ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್‌ರಿಗೆ ನಿಂದಿಸಿದ ಆರೋಪಿಗಳ ಬಂಧನಕ್ಕೆ ಬಿಜೆಪಿ ಆಗ್ರಹ

ಕಲಬುರಗಿ: ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ (ಅಪ್ಪುಗೌಡ) ರೇವೂರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ 18 ಕಿಡಿಗೇಡಿಗಳ ವಿರುದ್ಧ ತಕ್ಷಣ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿರುವ ಜಿಲ್ಲಾ ಬಿಜೆಪಿ, ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದೆ. ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳದಿದ್ದರೆ ವಾರದೊಳಗೆ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ನಗರದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಅಶೋಕ ಬಗಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಜೂನ್ 1ರಂದು ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ದತ್ತಾತ್ರೇಯ ಪಾಟೀಲ್ ರೇವೂರ ಅವರು ಕೇವಲ ಹಿಂದಿನ ರಾಜಕೀಯ ಬೆಳವಣಿಗೆಗಳನ್ನು ಉಲ್ಲೇಖಿಸಿ ಮಾತನಾಡಿದ್ದರು. ಆದರೆ ಅವರ ಭಾಷಣವನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ಅರ್ಥೈಸಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನದ ಭಾಗವಾಗಿ ಸುಳ್ಳು ಆರೋಪಗಳನ್ನು ಮಾಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಕೆಲ ಪಾಲಿಕೆ ಸದಸ್ಯರು ಮತ್ತು ಕಾರ್ಯಕರ್ತರು ನಗರದ ಜಗತ್ ವೃತ್ತದಿಂದ ರೈಲ್ವೆ ನಿಲ್ದಾಣದವರೆಗೆ ಯಾವುದೇ ಪೂರ್ವಾನುಮತಿಯಿಲ್ಲದೆ ಬೈಕ್ ರ‍್ಯಾಲಿ ನಡೆಸಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಿಸಿದ್ದಾರೆ. ಅಲ್ಲದೆ, ರೇವೂರ ವಿರುದ್ಧ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿರುವ ವಿಡಿಯೊಗಳು ಮತ್ತು ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಕುರಿತು ದೂರು ನೀಡಲು ಹೋದರೂ ಪೊಲೀಸರು ಪ್ರಕರಣ ದಾಖಲಿಸಲು ಮುಂದಾಗುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, “ರೇವೂರ ವಿರುದ್ಧ ಕಾಂಗ್ರೆಸ್ ಮುಖಂಡರು ನೀಡಿರುವ ಆಧಾರರಹಿತ ದೂರನ್ನು ಸರ್ಕಾರ ತಕ್ಷಣ ವಜಾಗೊಳಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಅವರ ತೇಜೋವಧೆ ಮಾಡಿದ 18 ಮಂದಿಯ ವಿರುದ್ಧ ಪ್ರಕರಣ ದಾಖಲಿಸದಿದ್ದರೆ ಬಿಜೆಪಿ ಹೋರಾಟದ ಹಾದಿ ಹಿಡಿಯಲಿದೆ. ಆಳಂದ ಪ್ರಕರಣವನ್ನು ಸರ್ಕಾರವೇ ದಾಖಲಿಸಿ ನಂತರ ವಾಪಸ್ ಪಡೆದಿರುವುದು ಆಶ್ಚರ್ಯಕರ ಬೆಳವಣಿಗೆ. ರೇವೂರ ಅವರೊಂದಿಗೆ ಪಕ್ಷ ಸಂಪೂರ್ಣವಾಗಿ ನಿಂತಿದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗೂಂಡಾಗಿರಿ ಮತ್ತು ಅರಾಜಕತೆಯ ವಿರುದ್ಧ ಜನರು ಸಂಘಟಿತರಾಗಿ ಹೋರಾಡಲು ಕಲಬುರಗಿ ಜನ ಸಿದ್ಧರಾಗಿದ್ದಾರೆ ಎಂದು ಹೇಳಿದರು.

ಈ ವೇಳೆ ಮಾಜಿ ಶಾಸಕರಾದ ಅಮರನಾಥ ಪಾಟೀಲ್, ಸುಭಾಷ್ ಗುತ್ತೇದಾರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್, ಶರಣಪ್ಪ ತಳವಾರ, ಅವ್ವಣ್ಣ ಮ್ಯಾಕೇರಿ, ರಾಜು ವಾಡೇಕರ್, ಮಹಾದೇವ್ ಬೆಳಮಗಿ, ಲಿಂಗರಾಜ ಬಿರಾದಾರ, ವಿಶಾಲ ದರ್ಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

KalaburagiBJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X