Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಅವರ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಯವರಿಗಿಲ್ಲ: ಸಿದ್ಧಾರ್ಥ ಬಸರಿಗಿಡ

ವಾರ್ತಾಭಾರತಿವಾರ್ತಾಭಾರತಿ30 Dec 2024 5:17 PM IST
share
Photo of Press meet

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸತತ ಮೂರು ಬಾರಿ ಶಾಸಕರಾಗಿ, ವಿವಿಧ ಇಲಾಖೆಯ ಸಚಿವರಾಗಿ ಜನಪರವಾದ ಕೆಲಸ ಮಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಅರಗಿಸಿಕೊಳ್ಳಲಾಗದೆ ಪ್ರತಿಯೊಂದು ವಿಷಯಕ್ಕೂ ಸಚಿವರ ಹೆಸರು ತಳಕು ಹಾಕಿ ರಾಜೀನಾಮೆ ಕೇಳುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ಮಾಜಿ ಜಿ.ಪಂ.ಸದಸ್ಯರಾದ ಸಿದ್ಧಾರ್ಥ ಬಸರಿಗಿಡ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಬೀದರ್ ಜಿಲ್ಲೆಯ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಪ್ರಿಯಾಂಕ್ ಖರ್ಗೆ ಅವರ ಆಪ್ತರ ಹೆಸರು ಡೆತ್ ನೋಟಲ್ಲಿ ಹೆಸರು ಉಲ್ಲೇಖಿಸಲಾಗಿದೆ. ಆಪ್ತರು ಎನ್ನುವ ಒಂದೇ ಕಾರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಮುಖಂಡರು ಸಚಿವರ ರಾಜೀನಾಮೆ ಕೇಳುವ ಮೂಲಕ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ? ಎಂದು ಬಿಜೆಪಿ ನಾಯಕರಿಗೆ ಪ್ರಶ್ನಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಖುದ್ಧಾಗಿ ಗೃಹ ಸಚಿವರಿಗೆ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಇಲಾಖೆಗೆ ವಹಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಿಕರ್ತರು ಯಾರೇ ಆಗಲಿ, ಅವರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ಆಗಲೆಂದು ಸಚಿವರು ಮೊದಲ ದಿನದಿಂದಲೂ ಹೇಳಿದ್ದಾರೆ. ಸಂಪೂರ್ಣ ತನಿಖೆ ಮುಗಿಯುವವರೆಗೂ ಸಹನೆ ತೋರದೆ, ಬಿಜೆಪಿಯವರು ಸಚಿವರ ರಾಜೀನಾಮೆ ಕೇಳುವ ಮುಖಾಂತರ ಸಚಿನ್ ಸಾವಿನಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಇಂತಹ ನೂರು ಸುಳ್ಳು ಆರೋಪಗಳನ್ನು ಬಿಜೆಪಿ ಪಕ್ಷದವರು ಮಾಡಿದರು ಪ್ರಿಯಾಂಕ್ ಖರ್ಗೆ ಅವರು ಕುಗ್ಗುವುದಿಲ್ಲ ಎಂದರು.

ಮಾಜಿ ಜಿ.ಪಂ.ಸದಸ್ಯರಾದ ಪ್ರಕಾಶ್ ಜಮಾದಾರ ಮಾತನಾಡಿ, ಯುವ ನಾಯಕರು ಹಾಗೂ ಸತತ ಮೂರು ಬಾರಿ ಸಚಿವರಾಗಿ ರಾಜ್ಯ ಉದ್ದಗಲಕ್ಕೂ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಏಳಿಗೆ ಸಹಿಸಿಕೊಳ್ಳಕ್ಕಾಗದೆ, ಜಿಲ್ಲೆಯ ಹಾಗೂ ರಾಜ್ಯದ ನಾಯಕರು ಅವರ ಮೇಲೆ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಅವರನ್ನು ಕುಗ್ಗಿಸುವ ಪ್ರಯತ್ನ ಮೊದಲಿನಿಂದಲೂ ಮಾಡುತ್ತಿದ್ದಾರೆ ಎಂದುತಿಳಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಮುಖಂಡರು ಮಾಡುತ್ತಿರುವ ಅವ್ಯವಹಾರಗಳನ್ನು ಮಟ್ಟ ಹಾಕುತ್ತಿರುವ ಪ್ರಿಯಾಂಕ್ ಖರ್ಗೆ ಅವರು, ಅದಕ್ಕಾಗಿ ಅವರ ಮೇಲೆ ಇಂತಹ ವಿಷಯದಲ್ಲಿ ತಳಕು ಹಾಕುವ ಪ್ರಯತ್ನ ಬಿಜೆಪಿ ಪಕ್ಷದವರು ನಿರಂತರ ಮಾಡುತ್ತಿದ್ದಾರೆ ಅವರ ಪ್ರಯತ್ನ ಎಂದಿಗೂ ಫಲಿಸುವುದಿಲ್ಲ. ಯಾಕೆಂದರೆ, ಜನಪರವಾದ ಕೆಲಸ ಮಾಡುತ್ತಿರುವ ನಾಯಕರಿಗೆ ಯಾವ ಕುತಂತ್ರದಿಂದ ಕುಗ್ಗಿಸಲು ಯಾರಿಂದಲೂ ಸಾದ್ಯವಿಲ್ಲ ಎಂದು ಜಮಾದಾರ ಬಿಜೆಪಿಯವರಿಗೆ ಟಾಂಗ್ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ನಾಗರಾಜ್ ನಿಂಬರಗಿ, ಗಣಪತಿ ಪೂಜಾರಿ, ನಬಿಸಾಬ್ ಮಂಗಳೂರು ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X