Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬಿಜೆಪಿ ಪ್ರತಿಭಟನೆ ಕೇವಲ...

Kalaburagi | ಬಿಜೆಪಿ ಪ್ರತಿಭಟನೆ ಕೇವಲ ನಾಟಕೀಯ: ಪಿಡ್ಡಪ್ಪ ಜಾಲಗಾರ ಟೀಕೆ

ವಾರ್ತಾಭಾರತಿವಾರ್ತಾಭಾರತಿ13 Jun 2026 4:52 PM IST
share
Kalaburagi | ಬಿಜೆಪಿ ಪ್ರತಿಭಟನೆ ಕೇವಲ ನಾಟಕೀಯ: ಪಿಡ್ಡಪ್ಪ ಜಾಲಗಾರ ಟೀಕೆ

ಕಲಬುರಗಿ : ದಕ್ಷಿಣ ಮತಕ್ಷೇತ್ರದ ರಾಮ ಮಂದಿರ ಸಮೀಪ ಇತ್ತೀಚೆಗೆ ಬಿಜೆಪಿ ನಡೆಸಿದ ಪ್ರತಿಭಟನೆಯು ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಅಲ್ಲ, ರಾಜಕೀಯ ಪ್ರೇರಿತ ಹಾಗೂ ನಾಟಕೀಯ ಕ್ರಮವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಇತರೆ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಪಿಡ್ಡಪ್ಪ ಜಾಲಗಾರ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಆಯ್ಕೆಯಾದ ನಂತರ ಕ್ಷೇತ್ರದಲ್ಲಿ ಹಲವು ಜನಪರ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜನನಾಯಕನಾಗಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಯಾವುದೇ ಸಮಸ್ಯೆಯೊಂದಿಗೆ ಸಂಪರ್ಕಿಸಿದಾಗ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸುವಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಸದಾ ಮುಂಚೂಣಿಯಲ್ಲಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಅವರನ್ನು ಪಡೆದಿರುವುದು ಕ್ಷೇತ್ರದ ಜನರ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಕಳೆದ ಮೂರು ದಶಕಗಳಿಂದ ಒಂದೇ ಕುಟುಂಬದವರು ಕ್ಷೇತ್ರವನ್ನು ಪ್ರತಿನಿಧಿಸಿದ್ದರೂ ಗಮನಾರ್ಹ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಹಾಗೂ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಅಭಿವೃದ್ಧಿ ಕಾರ್ಯಗಳಿಗೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿರುವುದನ್ನು ಸಹಿಸದ ಬಿಜೆಪಿ ಮುಖಂಡರು ಅನಗತ್ಯ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಬಿಜೆಪಿ ಪ್ರತಿಭಟನೆ ಜನರ ಹಿತಾಸಕ್ತಿಗಿಂತ ರಾಜಕೀಯ ಉದ್ದೇಶದಿಂದ ನಡೆಸಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ದೊರೆಯುತ್ತಿರುವ ಬೆಂಬಲವನ್ನು ಮರೆಮಾಚುವ ಪ್ರಯತ್ನವಾಗಿ ಇಂತಹ ಪ್ರತಿಭಟನೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಟೀಕಿಸಿದರು.

ಜನರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಶಾಸಕ ಅಲ್ಲಮಪ್ರಭು ಪಾಟೀಲ ವಿರುದ್ಧ ಷಡ್ಯಂತ್ರ ರೂಪಿಸಿ ಪ್ರತಿಭಟನೆ ನಡೆಸಿರುವ ಬಿಜೆಪಿ ನಡೆ ಖಂಡನೀಯವಾಗಿದೆ ಎಂದು ಪಿಡ್ಡಪ್ಪ ಜಾಲಗಾರ ಹೇಳಿದ್ದಾರೆ.

Tags

protestBJPKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X