Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ : ಬಸ್ ದರ ಏರಿಕೆ ಖಂಡಿಸಿ ...

ಕಲಬುರಗಿ : ಬಸ್ ದರ ಏರಿಕೆ ಖಂಡಿಸಿ ನ.6ರಂದು ಬಿಜೆಪಿಯಿಂದ ಪ್ರತಿಭಟನೆ

ರೈತರಿಗೆ 50 ಸಾವಿರ ಪರಿಹಾರ, ಕಬ್ಬಿಗೆ ಟನ್‌ಗೆ 5,500 ಬೆಂಬಲ ಬೆಲೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ5 Nov 2026 2:38 PM IST
share
ಕಲಬುರಗಿ : ಬಸ್ ದರ ಏರಿಕೆ ಖಂಡಿಸಿ  ನ.6ರಂದು ಬಿಜೆಪಿಯಿಂದ ಪ್ರತಿಭಟನೆ

ಕಲಬುರಗಿ, ನ.5: ರಾಜ್ಯ ಸರ್ಕಾರ ಹಾಲು ಮತ್ತು ಬಸ್ ಪ್ರಯಾಣ ದರ ಹೆಚ್ಚಿಸಿರುವುದನ್ನು ಖಂಡಿಸಿ ಬಿಜೆಪಿ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ನ.6ರಂದು ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ತಿಳಿಸಿದ್ದಾರೆ.

ಗುರುವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಹಾಲಿನ ದರ ಮತ್ತು ಬಸ್ ದರ ಏರಿಕೆ ಮಾಡುವ ಮೂಲಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಟೀಕಿಸಿದ್ದರು.

ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ 2,500 ಪರಿಹಾರ ನೀಡುವುದಾಗಿ ಘೋಷಿಸಿದ್ದ ಸರ್ಕಾರ ಇದುವರೆಗೆ ಒಂದು ರೂಪಾಯಿಯನ್ನೂ ನೀಡಿಲ್ಲ. ರೈತರಿಗೆ ಕನಿಷ್ಠ 50 ಸಾವಿರ ಪರಿಹಾರ ನೀಡಬೇಕು ಹಾಗೂ ಬೆಳೆ ನಷ್ಟಕ್ಕೆ ವಿಮೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಕಬ್ಬು ಬೆಳೆದು ನಿಂತಿದ್ದರೂ ಸಕ್ಕರೆ ಕಾರ್ಖಾನೆಗಳು ಆರಂಭವಾಗಿಲ್ಲ. ಕಬ್ಬಿಗೆ ಪ್ರತಿ ಟನ್‌ಗೆ 5,500 ಬೆಂಬಲ ಬೆಲೆ ನಿಗದಿಪಡಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸರ್ಕಾರ ಅಸಹಾಯಕತೆ ವ್ಯಕ್ತಪಡಿಸುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯ ಹಂತ ತಲುಪಿದೆ ಎಂದು ಟೀಕಿಸಿದರು.

ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆಯಿಂದ ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಬಿದ್ದಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದರೂ ಮಹಾನಗರ ಪಾಲಿಕೆ ಸಮರ್ಪಕ ಟ್ಯಾಂಕರ್ ವ್ಯವಸ್ಥೆ ಕಲ್ಪಿಸಿಲ್ಲ. ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿಯೂ ಸರ್ಕಾರ ವಿಫಲವಾಗಿದೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸದೆ, ಸುಮಾರು ₹5 ಸಾವಿರ ಕೋಟಿ ಮೊತ್ತದ ಬಾಕಿ ಉಳಿಸಿಕೊಂಡಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದ್ದು, ಭ್ರಷ್ಟಾಚಾರ ಮತ್ತು ಬೆಲೆ ಏರಿಕೆ ಹೆಚ್ಚಾಗಿದೆ ಎಂದು ದೂರಿದರು.

ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ ಅವರು, ನ.6ರಂದು ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಬಾಬುರಾವ್ ಚವ್ಹಾಣ್, ಅವಣ್ಣ ಮ್ಯಾಕೇರಿ, ಲಿಂಗರಾಜ್ ಬಿರಾದಾರ್, ಉಮೇಶ್ ಪಾಟೀಲ್, ಶಿವಯೋಗಿ ನಾಗನ, ಶುಭಾ ಹಾಲಕಾಯಿ, ಮಹಾದೇವ ಬೆಳಮಗಿ, ರಾಜು ವಾಡೇಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X