Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ತಳವಾರರಿಗೆ ಎಸ್‌ಟಿ...

Kalaburagi | ತಳವಾರರಿಗೆ ಎಸ್‌ಟಿ ಪ್ರಮಾಣಪತ್ರ ನೀಡದಿದ್ದರೆ ಸೆ.17ರಂದು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಶಿವಕುಮಾರ ನಾಟೀಕಾರ

ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಬೃಹತ್ ಪ್ರತಿಭಟನಾ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ9 Sept 2026 8:05 PM IST
share
Kalaburagi | ತಳವಾರರಿಗೆ ಎಸ್‌ಟಿ ಪ್ರಮಾಣಪತ್ರ ನೀಡದಿದ್ದರೆ ಸೆ.17ರಂದು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಶಿವಕುಮಾರ ನಾಟೀಕಾರ

ಕಲಬುರಗಿ: ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ತಳವಾರ ಸಮುದಾಯದ ಅರ್ಹರಿಗೆ ಪರಿಶಿಷ್ಟ ಪಂಗಡ (ಎಸ್‌ಟಿ) ಜಾತಿ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣಪತ್ರ ನೀಡುವುದನ್ನು ತಡೆಹಿಡಿದಿರುವುದನ್ನು ಖಂಡಿಸಿ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಗುವುದು ಎಂದು ಜೆಡಿಎಸ್ ಮುಖಂಡ ಶಿವಕುಮಾರ ನಾಟೀಕಾರ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಹ ತಳವಾರ ಸಮುದಾಯದವರಿಗೆ ಯಾವುದೇ ವಿಳಂಬವಿಲ್ಲದೆ ಎಸ್‌ಟಿ ಜಾತಿ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣಪತ್ರ ನೀಡಬೇಕು ಎಂಬುದು ಹೋರಾಟದ ಪ್ರಮುಖ ಬೇಡಿಕೆಯಾಗಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಆಯಾ ತಾಲೂಕಿನ ಶಾಸಕರಿಗೆ ತಳವಾರ ಸಮುದಾಯದ 10 ಸಾವಿರಕ್ಕೂ ಹೆಚ್ಚು ಜನರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಳವಾರ ಸಮುದಾಯದವರಿಗೆ ಎಸ್‌ಟಿ ಜಾತಿ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣಪತ್ರ ನೀಡಲಾಗುತ್ತಿದೆ. ಆದರೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಾತ್ರ ಪ್ರಮಾಣಪತ್ರ ವಿತರಣೆಯಲ್ಲಿ ಸಮಸ್ಯೆ ಎದುರಾಗಿದ್ದು, ಇದರಿಂದ ವಿದ್ಯಾರ್ಥಿಗಳು ಶಾಲೆ-ಕಾಲೇಜು ಪ್ರವೇಶ, ಸರ್ಕಾರಿ ಉದ್ಯೋಗ ನೇಮಕಾತಿ ಹಾಗೂ ವಿವಿಧ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

ತಳವಾರ ಸಮುದಾಯಕ್ಕೆ ಎಸ್‌ಟಿ ಜಾತಿ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣಪತ್ರ ನೀಡುವ ಕುರಿತು ಸರ್ಕಾರ ಸ್ಪಷ್ಟ ಅಧಿಕೃತ ಆದೇಶ ಹೊರಡಿಸಬೇಕು. ಅರ್ಹರಿಗೆ ವಿಳಂಬವಿಲ್ಲದೆ ಪ್ರಮಾಣಪತ್ರ ವಿತರಿಸಿ, ಸರ್ಕಾರಿ ನೇಮಕಾತಿ ಸೇರಿದಂತೆ ಸಂವಿಧಾನಾತ್ಮಕ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರಮಾಣಪತ್ರಕ್ಕೆ ಸಂಬಂಧಿಸಿದ ಗೊಂದಲಗಳನ್ನು ನಿವಾರಿಸಲು ಸರ್ಕಾರ ಸ್ಪಷ್ಟ ನಿರ್ದೇಶನ ನೀಡಬೇಕು. ಹೋರಾಟದ ವೇಳೆ ತಳವಾರ ಸಮುದಾಯದ ಹೋರಾಟಗಾರರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರು ತಮ್ಮ ಪಕ್ಷ ಮತ್ತು ಸರ್ಕಾರವನ್ನು ಸಮರ್ಥಿಸುವ ಬದಲು ತಳವಾರ ಸಮುದಾಯದ ಸಮಸ್ಯೆಗೆ ಸ್ಪಂದಿಸಿ ಅರ್ಹರಿಗೆ ಎಸ್‌ಟಿ ಪ್ರಮಾಣಪತ್ರ ದೊರಕಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಶಿವಕುಮಾರ ನಾಟೀಕಾರ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜು ಉಕ್ಕಲಿ, ಮರೆಪ್ಪ ಜಮಾದಾರ್, ಮಹಾಂತೇಶ ಪಾಟೀಲ್, ಸತೀಶ ಬಮ್ಮನಳ್ಳಿ, ಸೂರ್ಯಕಾಂತ, ಬಾಬು ಕೋಬಾಳ, ಭೀಮಾಶಂಕರ ದಫೇದಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags

Talwar communityprotestblack flagKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X